ನಿರ್ಣಾಯಕ ಟೆಸ್ಟ್ ಪಂದ್ಯಕ್ಕೆ ಮಳೆ ಭೀತಿ: ಒಂದು ವೇಳೆ ಪಂದ್ಯ ಡ್ರಾ ಆದರೆ ಟೀಂ ಇಂಡಿಯಾಗೆ ಟ್ರೋಫಿ!

ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಬ್ರಿಸ್ಬೇನ್ ನಲ್ಲಿ ನಡೆಯಲಿದ್ದು ಪಂದ್ಯಕ್ಕೆ ಮಳೆ ಭೀತಿ ಶುರುವಾಗಿದೆ.

Published: 13th January 2021 07:23 PM  |   Last Updated: 13th January 2021 07:40 PM   |  A+A-


Team India

ಟೀಂ ಇಂಡಿಯಾ

Posted By : Vishwanath S
Source : Online Desk

ನವದೆಹಲಿ: ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಬ್ರಿಸ್ಬೇನ್ ನಲ್ಲಿ ನಡೆಯಲಿದ್ದು ಪಂದ್ಯಕ್ಕೆ ಮಳೆ ಭೀತಿ ಶುರುವಾಗಿದೆ.

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಅದಾಗಲೇ ಉಭಯ ತಂಡಗಳು ತಲಾ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿವೆ. ಹೀಗಾಗಿ ಅಂತಿಮ ಪಂದ್ಯ ಸರಣಿ ನಿರ್ಣಾಯಕ ಪಂದ್ಯವಾಗಲಿದೆ. 

100%

ಜನವರಿ 15ರಿಂದ ಬ್ರಿಸ್ಬೇನ್ ನ ಗಬ್ಬಾ ಮೈದಾನದಲ್ಲಿ ಪಂದ್ಯ ನಡೆಯಲಿದ್ದು ಮೈದಾನದ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮೊದಲ ದಿನದ ನಂತರ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ. 

100%

ಒಂದೇ ವೇಳೆ ಮಳೆಯಿಂದಾಗಿ ಪಂದ್ಯ ರದ್ದಾದರೆ ಅಥವಾ ಡ್ರಾ ಫಲಿತಾಂಶ ಬಂದರೆ ಆಗ ಟ್ರೋಫಿ ಟೀಂ ಇಂಡಿಯಾದ ಪಾಲಾಗಲಿದೆ. ಕಾರಣ 2018-19ರಲ್ಲಿ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಭಾರತ ಗೆದ್ದುಕೊಂಡಿತ್ತು. ಹೀಗಾಗಿ ಪಂದ್ಯ ಡ್ರಾನಲ್ಲಿ ಅಂತ್ಯವಾದರೆ ಆಗ ಈ ಹಿಂದೆ ಸರಣಿ ಗೆದ್ದ ತಂಡಕ್ಕೆ ಟ್ರೋಫಿ ನೀಡಲಾಗುತ್ತದೆ. 

Stay up to date on all the latest ಕ್ರಿಕೆಟ್ news
Poll
Covid-_Vaccine1

ರಾಜಕಾರಣಿಗಳಿಗೆ ಮೊದಲು ಕೋವಿಡ್-19 ಲಸಿಕೆ ನೀಡಬೇಕೇ?


Result
ಇಲ್ಲ, ಸಾಮಾನ್ಯ ಜನರಿಗೆ ಮೊದಲು
ಹೌದು, ಅವರು ನಮ್ಮ ನಾಯಕರು
flipboard facebook twitter whatsapp