ಐಪಿಎಲ್ ಹರಾಜಿಗೆ ಅರ್ಹತೆ ಪಡೆದ ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್!
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಸೈಯದ್ ಮುಷ್ತಕ್ ಅಲಿ ಟಿ-20 ಕ್ರಿಕೆಟ್ ಟೂರ್ನಿಗೆ ಪ್ರಕಟಿಸಲಾದ ಮುಂಬೈನ ಹಿರಿಯರ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಈ ಮೂಲಕ ಹಿರಿಯರ ರಾಷ್ಟ್ರೀಯ ಕ್ರಿಕೆಟ್ ಗೆ ಪಾದರ್ಪಣೆ ಮಾಡಿದ್ದಾರೆ.
Published: 15th January 2021 08:02 PM | Last Updated: 15th January 2021 08:02 PM | A+A A-

ಅರ್ಜುನ್ ತೆಂಡೂಲ್ಕರ್
ಮುಂಬೈ: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಸೈಯದ್ ಮುಷ್ತಕ್ ಅಲಿ ಟಿ-20 ಕ್ರಿಕೆಟ್ ಟೂರ್ನಿಗೆ ಪ್ರಕಟಿಸಲಾದ ಮುಂಬೈನ ಹಿರಿಯರ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಈ ಮೂಲಕ ಹಿರಿಯರ ರಾಷ್ಟ್ರೀಯ ಕ್ರಿಕೆಟ್ ಗೆ ಪಾದರ್ಪಣೆ ಮಾಡಿದ್ದಾರೆ.
ಹರಿಯಾಣ ವಿರುದ್ಧದ ಪಂದ್ಯಕ್ಕೆ ಶುಕ್ರವಾರ ಪ್ರಕಟಿಸಲಾದ ಮುಂಬೈ ತಂಡದಲ್ಲಿ ಎಡಗೈ ಮಧ್ಯಮ ವೇಗಿಯಾಗಿರುವ 21 ವರ್ಷದ ಅರ್ಜುನ್ ತೆಂಡೂಲ್ಕರ್ ಸ್ಥಾನ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಮುಂಬರುವ ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಅರ್ಹತೆಯನ್ನು ಅರ್ಜುನ್ ಪಡೆದಿದ್ದಾರೆ.
ಕೃತಿಕ್ ಹನಗವಾಡಿ ಮುಂಬೈ ತಂಡದಲ್ಲಿ ಸ್ಥಾನ ಪಡೆದ ಮತ್ತೊಬ್ಬ ವೇಗಿಯಾಗಿದ್ದಾರೆ. ಅರ್ಜುನ್ ಈಗಾಗಲೇ ವಿವಿಧ ವಯೋಮಿತಿಯ ಟೂರ್ನಿಗಳಲ್ಲಿ ಮುಂಬೈ ತಂಡವನ್ನು ಪ್ರತಿನಿಧಿಸಿದ್ದಾರೆ.