ಬಾರ್ಡರ್-ಗವಾಸ್ಕರ್ ಟ್ರೋಫಿ: ಗವಾಸ್ಕರ್'ರ 50 ವರ್ಷದ ಹಿಂದಿನ ದಾಖಲೆ ಮುರಿದ ಶುಭ್ಮನ್ ಗಿಲ್!
ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ 91 ರನ್ ಬಾರಿಸುವ ಮೂಲಕ ಶುಭ್ಮನ್ ಗಿಲ್ ಸುನೀಲ್ ಗವಾಸ್ಕರ್ ಅವರ 50 ವರ್ಷದ ಹಿಂದಿನ ದಾಖಲೆಯನ್ನು ಮುರಿದಿದ್ದಾರೆ.
Published: 19th January 2021 07:13 PM | Last Updated: 19th January 2021 07:24 PM | A+A A-

ಶುಭಮನ್ ಗಿಲ್
ಬ್ರಿಸ್ಬೇನ್: ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ 91 ರನ್ ಬಾರಿಸುವ ಮೂಲಕ ಶುಭ್ಮನ್ ಗಿಲ್ ಸುನೀಲ್ ಗವಾಸ್ಕರ್ ಅವರ 50 ವರ್ಷದ ಹಿಂದಿನ ದಾಖಲೆಯನ್ನು ಮುರಿದಿದ್ದಾರೆ.
ನಿರ್ಣಾಯಕ ಪಂದ್ಯದಲ್ಲಿ ಶುಭ್ಮನ್ ಗಿಲ್ 91 ಹಾಗೂ ರಿಷಬ್ ಪಂತ್ ಅಜೇಯ 89 ರನ್ ಗಳ ನೆರವಿನೊಂದಿಗೆ ಟೀಂ ಇಂಡಿಯಾ ಗಬ್ಬಾ ನೆಲದಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ್ದು ಅಲ್ಲದೆ ಸರಣಿಯನ್ನು ಕೈವಶ ಮಾಡಿಕೊಂಡಿದೆ.
ಟೆಸ್ಟ್ ಕ್ರಿಕೆಟ್ ನಲ್ಲಿ ಚೊಚ್ಚಲ ಶತಕದಿಂದ ವಂಚಿತರಾದರೂ ಶುಭ್ಮನ್ ಗಿಲ್ ಗವಾಸ್ಕರ್ ದಾಖಲೆಯನ್ನು ಮುರಿದು ಹೊಸ ದಾಖಲೆ ಬರೆದಿದ್ದಾರೆ. ಭಾರತದ ಪರ ಟೆಸ್ಟ್ ನಲ್ಲಿ ನಾಲ್ಕನೇ ಇನ್ನಿಂಗ್ಸ್ ನಲ್ಲಿ ಅರ್ಧಶತಕ ಗಳಿಸಿದ ಟೀಂ ಇಂಡಿಯಾದ ಅತ್ಯಂತ ಕಿರಿಯ ಆರಂಭಿಕ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಸುನಿಲ್ ಗವಾಸ್ಕರ್ 21 ವರ್ಷದ ಮತ್ತು 243 ದಿನಗಳ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದರು. ಆದರೆ ಶುಭ್ಮನ್ ಗಿಲ್ ಪ್ರಸ್ತುತ 21 ವರ್ಷ 133 ದಿನಗಳಲ್ಲಿ ಈ ಸಾಧನೆ ಮಾಡಿದ್ದಾರೆ. 1970ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಪೋರ್ಟ್ ಆಫ್ ಸ್ಪೇನ್ ನಲ್ಲಿ ನಡೆದಿದ್ದ ಪಂದ್ಯದಲ್ಲಿ ಗವಾಸ್ಕರ್ ಅರ್ಧ ಶತಕ ಸಿಡಿಸಿ ದಾಖಲೆ ಬರೆದಿದ್ದರು.