ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ತಂಡ ಪ್ರಕಟ!

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಗೆಲುವಿನ ಸಂಭ್ರಮದ ನಡುವೆ ಬಿಸಿಸಿಐ ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದೆ.

Published: 19th January 2021 07:46 PM  |   Last Updated: 19th January 2021 07:46 PM   |  A+A-


Team India

ಟೀಂ ಇಂಡಿಯಾ

Posted By : Vishwanath S
Source : Online Desk

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಗೆಲುವಿನ ಸಂಭ್ರಮದ ನಡುವೆ ಬಿಸಿಸಿಐ ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದೆ. 

ಮುಂದಿನ ತಿಂಗಳು ಇಂಗ್ಲೆಂಡ್ ಭಾರತ ಪ್ರವಾಸ ಕೈಗೊಳ್ಳಲಿದ್ದು ಫೆಬ್ರವರಿ 5ರಿಂದ ಚೆನ್ನೈನಲ್ಲಿ ಟೆಸ್ಟ್ ಸರಣಿ ಆರಂಭಗೊಳ್ಳಲಿದೆ. ಮೊದಲ ಎರಡು ಟೆಸ್ಟ್ ಪಂದ್ಯಕ್ಕೆ 18 ಸದಸ್ಯರ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. 

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಇಶಾಂತ್ ಶರ್ಮಾ, ಹಾರ್ದಿಕ್ ಪಾಂಡ್ಯ ಕಮ್ ಬ್ಯಾಕ್ ಮಾಡಿದ್ದಾರೆ. 

18 ಸದಸ್ಯರ ಟೀಂ ಇಂಡಿಯಾ ಟೆಸ್ಟ್ ತಂಡ:
ರೋಹಿತ್ ಶರ್ಮಾ, ಶುಭಮನ್ ಗಿಲ್, ಮಾಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್, ವೃದ್ಧಿಮಾನ್ ಸಹಾ, ಹಾರ್ದಿಕ್ ಪಾಂಡ್ಯ, ಕೆ.ಎಲ್. ರಾಹುಲ್, ಜಸ್ ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಆರ್ ಅಶ್ವಿನ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಆಕ್ಸಾರ್ ಪಟೇಲ್.

ಹೆಚ್ಚುವರಿ ಆಟಗಾರರು: 
ಕೆ.ಎಸ್.ಭಾರತ್ (ವಿಕೆಟ್ ಕೀಪರ್), ಅಭಿಮನ್ಯು ಈಶ್ವರನ್, ಶಹಬಾಜ್ ನದೀಮ್, ರಾಹುಲ್ ಚಹರ್.

Stay up to date on all the latest ಕ್ರಿಕೆಟ್ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp