ಐಸಿಸಿ ಏಕದಿನ ರ್ಯಾಂಕಿಂಗ್: ಅಗ್ರಸ್ಥಾನದಲ್ಲಿ ಮುಂದುವರೆದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬುಧವಾರ ನೂತನ ಏಕದಿನ ರ‍್ಯಾಂಕಿಂಗ್ ಪಟ್ಟಿ ಪ್ರಕಟಿಸಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರು ಅಗ್ರಸ್ಥಾನದಲ್ಲೇ ಮುಂದುವರೆದಿದ್ದಾರೆ. 

Published: 27th January 2021 06:37 PM  |   Last Updated: 27th January 2021 06:37 PM   |  A+A-


Rohit Sharma- Virat Kohli

ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ

Posted By : Lingaraj Badiger
Source : PTI

ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬುಧವಾರ ನೂತನ ಏಕದಿನ ರ‍್ಯಾಂಕಿಂಗ್ ಪಟ್ಟಿ ಪ್ರಕಟಿಸಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರು ಅಗ್ರಸ್ಥಾನದಲ್ಲೇ ಮುಂದುವರೆದಿದ್ದಾರೆ. 

ವಿರಾಟ್ ಕೊಹ್ಲಿ ಸಿಡ್ನಿ ಮತ್ತು ಕ್ಯಾನ್‌ಬೆರಾದಲ್ಲಿ ಆಸ್ಟ್ರೇಲಿಯಾ ವಿರುದ್ಧ ಕ್ರಮವಾಗಿ ಎರಡನೇ ಮತ್ತು ಮೂರನೇ ಏಕದಿನ ಪಂದ್ಯದಲ್ಲಿ 89 ಮತ್ತು 63 ರನ್ ಬಾರಿಸಿದ್ದರು. ಇನ್ನು ಕೊಹ್ಲಿ 870 ಅಂಕಗಳನ್ನು ಹೊಂದಿದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಮಂಡಿರಜ್ಜು ಗಾಯದಿಂದಾಗಿ ಏಕದಿನ ಸರಣಿಯನ್ನು ಕಳೆದುಕೊಂಡಿದ್ದರೂ, ರೋಹಿತ್ ಶರ್ಮಾ(842) ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಶ್ರೇಯಾಂಕದಲ್ಲಿ ಮೂರನೇ ಸ್ಥಾನದಲ್ಲಿರುವ ಪಾಕಿಸ್ತಾನ ನಾಯಕ ಬಾಬರ್ ಅಜಾಂಗಿಂತ ಐದು ಪಾಯಿಂಟ್ ಮುಂದಿದ್ದಾರೆ.

ನ್ಯೂಜಿಲೆಂಡ್‌ನ ರಾಸ್ ಟೇಲರ್(818) ಮತ್ತು ಆಸ್ಟ್ರೇಲಿಯಾದ ನಾಯಕ ಆರನ್ ಫಿಂಚ್ (791) ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಮೊದಲ ಐದು ಸ್ಥಾನಗಳಲ್ಲಿದ್ದಾರೆ.

ಇನ್ನು ಬೌಲಿಂಗ್‌ನಲ್ಲಿ ಭಾರತದ ಜಸ್ಪ್ರೀತ್ ಬುಮ್ರಾ 700 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ನ್ಯೂಜಿಲೆಂಡ್ ವೇಗಿ ಟ್ರೆಂಟ್ ಬೌಲ್ಟ್ (722) ಮತ್ತು ಅಫ್ಗಾನ್ ಸ್ಪಿನ್ನರ್ ಮುಜೀಬ್ ಉರ್ ರಹಮಾನ್(701) ಮೊದಲ ಎರಡು ಸ್ಥಾನಗಳನ್ನು ಪಡೆದಿದ್ದಾರೆ.

Stay up to date on all the latest ಕ್ರಿಕೆಟ್ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp