ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್: ನ್ಯೂಜಿಲೆಂಡ್ ಗೆ ಮರ್ಮಾಘಾತ, ನಾಯಕ ಕೇನ್ ವಿಲಿಯಮ್ಸನ್ ಗೆ ಗಾಯ, ಟೂರ್ನಿಯಿಂದ ಔಟ್!

ಭಾರತದ ವಿರುದ್ಧದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ನ್ಯೂಜಿಲೆಂಡ್ ತಂಡಕ್ಕೆ ಭಾರಿ ಆಘಾತ ಎದುರಾಗಿದ್ದು, ಕಿವೀಸ್ ಪಡೆಯ ನಾಯಕ ಕೇನ್ ವಿಲಿಯಮ್ಸನ್ ಗಾಯದ ಸಮಸ್ಯೆಗೆ ತುತ್ತಾಗಿದ್ದಾರೆ.
ಕೇನ್  ವಿಲಿಯಮ್ಸನ್
ಕೇನ್ ವಿಲಿಯಮ್ಸನ್

ಲಂಡನ್: ಭಾರತದ ವಿರುದ್ಧದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ನ್ಯೂಜಿಲೆಂಡ್ ತಂಡಕ್ಕೆ ಭಾರಿ ಆಘಾತ ಎದುರಾಗಿದ್ದು, ಕಿವೀಸ್ ಪಡೆಯ ನಾಯಕ ಕೇನ್ ವಿಲಿಯಮ್ಸನ್ ಗಾಯದ ಸಮಸ್ಯೆಗೆ ತುತ್ತಾಗಿದ್ದಾರೆ.

ಪ್ರಸ್ತುತ ಇಂಗ್ಲೆಂಡ್ ಪ್ರವಾಸದಲ್ಲಿರುವ ಕೇನ್ ವಿಲಿಯಮ್ಸನ್ ಮೊಣಕೈಗೆ ಗಾಯ ಮಾಡಿಕೊಂಡಿದ್ದು, ವೈದ್ಯರ ಸಲಹೆಯಂತೆ ವಿಶ್ರಾಂತಿ ಪಡೆಯಲಿದ್ದಾರೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಸರಣಿಯನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದಾರೆ ಎನ್ನಲಾಗಿದೆ.

ಸದ್ಯ ಇಂಗ್ಲೆಂಡ್ ಪ್ರವಾಸದಲ್ಲಿರುವ ನ್ಯೂಜಿಲೆಂಡ್ ಕ್ರಿಕೆಟ್‌ ತಂಡ ಆತಿಥೇಯರ ವಿರುದ್ಧ ಎರಡು ಪಂದ್ಯಗಳ ಟೆಸ್ಟ್‌ ಸರಣಿ ಆಡುತ್ತಿದೆ. ಇದರಲ್ಲಿ ಮೊದಲನೇ ಪಂದ್ಯ ಡ್ರಾದೊಂದಿಗೆ ಅಂತ್ಯಗೊಂಡಿತ್ತು. ಆದರೆ ದ್ವಿತೀಯ ಪಂದ್ಯಕ್ಕೆ ತಂಡ ಪ್ರಕಟವಾಗುವ ಮುನ್ನ ಕೇನ್ ವಿಲಿಯಮ್ಸನ್ ಗಾಯದಿಂದಾಗಿ ತಂಡದಿಂದ ಹೊರ  ಬಿದ್ದಿದ್ದಾರೆ. ನ್ಯೂಜಿಲೆಂಡ್ ತಂಡದ ಮೊದಲ ಟೆಸ್ಟ್‌ ಪಂದ್ಯದಲ್ಲಿ ವಿಲಿಯಮ್ಸನ್ ಕ್ರಮವಾಗಿ 13, 1 ರನ್ ಗಳಿಸಿ ನಿರಾಸೆ ಅನುಭವಿಸಿದ್ದರು. ಆ ಬಳಿಕ ವಿಲಿಯಮ್ಸನ್‌ ಮೊಣಕೈಗೆ ಗಾಯವಾಗಿತ್ತು. ಹೀಗಾಗಿ ಜೂನ್ 10-14ರ ವರೆಗೆ ನಡೆಯಲಿರುವ ನ್ಯೂಜಿಲೆಂಡ್-ಇಂಗ್ಲೆಂಡ್‌ ದ್ವಿತೀಯ ಟೆಸ್ಟ್‌ಗೆ ವಿಲಿಯಮ್ಸನ್  ಅಲಭ್ಯರಾಗಿರಲಿದ್ದಾರೆ. 

ಟೆಸ್ಟ್‌ ಚಾಂಪಿಯನ್‌ಶಿಪ್‌ಗೆ ಅನುಮಾನ
ಇದೇ ಜೂನ್ 18-22ರ ವರೆಗೆ ಭಾರತ ಮತ್ತು ನ್ಯೂಜಿಲೆಂಡ್ ಮಧ್ಯೆ ಐಸಿಸಿ ವರ್ಲ್ಡ್ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ನಡೆಯಲಿದ್ದು, ಈ ಬಹು ನಿರೀಕ್ಷಿತ ಪಂದ್ಯಕ್ಕೆ ಇನ್ನು ಕೇವಲ 8 ದಿನಗಳು ಬಾಕಿ ಉಳಿದಿರುವುದರಿಂದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ವಿಲಿಯಮ್ಸನ್ ಆಡುವುದೂ ಕೂಡ  ಅನುಮಾನವಾಗಿದೆ. 

ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಗೆ ಟಾಮ್ ಲ್ಯಾಥಮ್‌ಗೆ ನಾಯಕತ್ವ
ಗಾಯಾಳು ವಿಲಿಯಮ್ಸನ್ ಅನುಪಸ್ಥಿತಿಯಲ್ಲಿ ವಿಕೆಟ್ ಕೀಪರ್ ಕಮ್ ಬ್ಯಾಟ್ಸ್‌ಮನ್‌ ಟಾಮ್ ಲ್ಯಾಥಮ್ ಅವರು ನ್ಯೂಜಿಲೆಂಡ್ ತಂಡವನ್ನು ಮುನ್ನಡೆಸಲಿದ್ದಾರೆ. ಈಗಾಗಲೇ ಬೌಲಿಂಗ್‌ ಆಲ್ ರೌಂಡರ್ ಮಿಚೆಲ್ ಸ್ಯಾಂಟ್ನರ್ ಕೂಡ ಕೈ ಬೆರಳಿಗೆ ಗಾಯ ಮಾಡಿಕೊಂಡು ತಂಡದಿಂದ ಹೊರ ಬಿದ್ದಿದ್ದಾರೆ. ವೇಗಿ ಟ್ರೆಂಡ್ ಬೌಲ್ಟ್  ಲಭ್ಯರಿದ್ದು, ದ್ವಿತೀಯ ಟೆಸ್ಟ್‌ಗೆ ಮರಳುವ ನಿರೀಕ್ಷೆಯಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com