ಕೇನ್ ವಿಲಿಯಮ್ಸನ್ ಫಿಟ್; ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯಕ್ಕೆ ಲಭ್ಯ, ಕಿವೀಸ್ ತಂಡ ಪ್ರಕಟ

ಗಾಯದಿಂದಾಗಿ ನ್ಯೂಜಿಲೆಂಡ್ ತಂಡದಿಂದ ಹೊರಗುಳಿದಿದ್ದ ನಾಯಕ ಕೇನ್ ವಿಲಿಯಮ್ಸನ್ ಫಿಟ್ ಆಗಿದ್ದು, ಇದೀಗ ಭಾರತದ ವಿರುದ್ಧದ ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಗೆ ಲಭ್ಯರಿದ್ದಾರೆ ಎಂದು ಕೋಚ್ ಗ್ಯಾರಿ ಸ್ಟೀಡ್ ಹೇಳಿದ್ದಾರೆ. 
ಕೇನ್ ವಿಲಿಯಮ್ಸನ್
ಕೇನ್ ವಿಲಿಯಮ್ಸನ್

ಲಂಡನ್: ಗಾಯದಿಂದಾಗಿ ನ್ಯೂಜಿಲೆಂಡ್ ತಂಡದಿಂದ ಹೊರಗುಳಿದಿದ್ದ ನಾಯಕ ಕೇನ್ ವಿಲಿಯಮ್ಸನ್ ಫಿಟ್ ಆಗಿದ್ದು, ಇದೀಗ ಭಾರತದ ವಿರುದ್ಧದ ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಗೆ ಲಭ್ಯರಿದ್ದಾರೆ ಎಂದು ಕೋಚ್ ಗ್ಯಾರಿ ಸ್ಟೀಡ್ ಹೇಳಿದ್ದಾರೆ. 

ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಗಾಯಗೊಂಡಿದ್ದು ಮಹತ್ವದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ಗೆ ಅಲಭ್ಯರಾಗಲಿದ್ದಾರೆ ಎನ್ನಲಾಗಿತ್ತು. ಆದರೆ ಕೇನ್ ವಿಲಿಯಮ್ಸನ್ ಗಾಯದಿಂದ ಉತ್ತಮ ರೀತಿಯಲ್ಲಿ ಚೇತರಿಕೆ ಕಂಡಿದ್ದು, ಮುಂದಿನ  ಪಂದ್ಯಕ್ಕೆ ಲಭ್ಯರಿರಲಿದ್ದಾರೆ. 

ಈ ಬಗ್ಗೆ ಮಾತನಾಡಿರುವ ಕೋಚ್ ಗ್ಯಾರಿ ಸ್ಟೀಡ್, 'ಕೇನ್ ವಿಲಿಯಮ್ಸನ್ ಮತ್ತು ಬಿಜೆ ವಾಟ್ಲಿಂಗ್ ಅವರ ವಿಶ್ರಾಂತಿ ಮತ್ತು ರಿಹ್ಯಾಬ್ (ಪುನರ್ವಸತಿ)ಯಿಂದ  ಖಂಡಿತವಾಗಿಯೂ ಪ್ರಯೋಜನ ಪಡೆದಿದ್ದಾರೆ, ನಿರೀಕ್ಷೆಗಿಂತಲೂ ಬೇಗನೇ ಚೇತರಿಸಿಕೊಂಡಿದ್ದಾರೆ. ಹೀಗಾಗಿ ಮುಂದಿನ ಪಂದ್ಯಕ್ಕೆ  ಶೇ.100ರಷ್ಟು ಲಭ್ಯರಿರಲಿದ್ದಾರೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ಹೇಳಿದ್ದಾರೆ.

ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ಟಾಮ್ ಲ್ಯಾಥಮ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು ನಾಯಕ ಕೇನ್ ವಿಲಿಯಮ್ಸನ್ ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಬಿಜೆ ವಾಟ್ಲಿಂಗ್ ಉತ್ತಮ ರೀತಿಯಲ್ಲಿ ಚೇತರಿಕೆ ಕಾಣುತ್ತಿದ್ದಾರೆ. ಭಾರತದ ವಿರುದ್ಧ ಜೂನ್ 18ರಿಂದ ಹ್ಯಾಂಪ್‌  ಶೈರ್‌ಬೌಲ್‌ನಲ್ಲಿ ಆರಂಭವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಆಡಲಿದ್ದಾರೆ.  ಅವರ ಚೇತರಿಕೆ ಉತ್ತಮ ರೀತಿಯಲ್ಲಿದೆ. ಮುಂದಿನ ವಾರದ ವೇಳೆಗೆ ಸಂಪೂರ್ಣ ಸಮರ್ಥರಾಗಲು ಅವರಿಗಿನ್ನೂ ವಿಶ್ರಾಂತಿಯ ಅಗತ್ಯವಿದೆ. ಹೀಗಾಗಿ ಮುಂದಿನ ಎರಡು-ಮೂರು  ದಿನಗಳಲ್ಲಿ ಪ್ರೊಟೋಕಾಲ್ ಪ್ರಕಾರ ಫಿಟ್‌ನೆಸ್ ಪರೀಕ್ಷೆಗೆ ಒಳಗಾಗಲಿದ್ದಾರೆ ಎಂದು ನನಗೆ ಖಾತ್ರಿಯಿದೆ. ನಾವು ಸಂಪೂರ್ಣವಾಗಿ ಸಮರ್ಥ ತಂಡವನ್ನು ಹೊಂದುವ ಭರವಸೆಯಿದೆ" ಎಂದು ಹೇಳಿದ್ದಾರೆ.

ಫೈನಲ್ ಪಂದ್ಯಕ್ಕೆ ಸಂಭಾವ್ಯ 15ರ ತಂಡ ಪ್ರಕಟಿಸಿದ ಕಿವೀಸ್ ಪಡೆ
ನ್ಯೂಜಿಲೆಂಡ್ ತಂಡ ಮುಂಬರುವ ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ಸರಣಿಗೆ 15 ಮಂದಿ ಆಟಗಾರರ ತಂಡ ಪ್ರಕಟಿಸಿದೆ. ಗಾಯದ ಸಮಸ್ಯೆಯಿಂದಾಗಿ ತಂಡದಿಂದ ಹೊರಗುಳಿದಿದ್ದ ನಾಯಕ ಕೇನ್ ವಿಲಿಯಮ್ಸನ್ ತಂಡಕ್ಕೆ ವಾಪಸ್ ಆಗಿದ್ದಾರೆ. ಉಳಿದಂತೆ ಟಾಮ್ ಬ್ಲುಂಡೆಲ್, ಟ್ರೆಂಟ್  ಬೌಲ್ಟ್, ಡೆವೊನ್ ಕಾನ್ವೇ, ಕಾಲಿನ್ ಡಿ ಗ್ರ್ಯಾಂಡ್‌ಹೋಮ್, ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ಟಾಮ್ ಲಾಥಮ್, ಹೆನ್ರಿ ನಿಕೋಲ್ಸ್, ಅಜಾಜ್ ಪಟೇಲ್, ಟಿಮ್ ಸೌಥಿ, ರಾಸ್ ಟೇಲರ್, ನೀಲ್ ವ್ಯಾಗ್ನರ್ ಬಿಜೆ ವಾಟ್ಲಿಂಗ್ ಮತ್ತು ವಿಲ್ ಯಂಗ್ ಒಳಗೊಂಡ ಆಟಗಾರರ ಪಟ್ಟಿಯನ್ನು ಕಿವೀಸ್  ತಂಡ ಪ್ರಕಟಿಸಿದೆ.

2ನೇ ಪಂದ್ಯ ಗೆದ್ದು ಆತ್ಮ ವಿಶ್ವಾದಲ್ಲಿರುವ ನ್ಯೂಜಿಲೆಂಡ್
ಮಳೆಯಿಂದ ರದ್ದಾದ ಮೊದಲ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ ಗಾಯಗೊಂಡಿದ್ದ ಕಾರಣ ಎರಡನೇ ಪಂದ್ಯದ ನಾಯಕತ್ವವನ್ನು ಟಾಮ್ ಲ್ಯಾಥಮ್ ವಹಿಸಿಕೊಂಡಿದ್ದರು. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಇಂಗ್ಲೆಂಡ್ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿ ಸರಣಿಯನ್ನು  ತನ್ನದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ದಾಖಲೆ ಬರೆದಿದ್ದ ನ್ಯೂಜಿಲೆಂಡ್
ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲೆ ಗೆಲುವು ಸಾಧಿಸುವ ಮೂಲಕ ನ್ಯೂಜಿಲೆಂಡ್ 1999ರ ಬಳಿಕ ಇಂಗ್ಲೆಂಡ್ ನೆಲದಲ್ಲಿ ಮೊದಲ ಬಾರಿಗೆ ಈ ಸಾಧನೆಯನ್ನು ಮಾಡಿದೆ. ತಂಡದ ಕೆಲ ಪ್ರಮುಖ ಆಟಗಾರರ ಅಲಭ್ಯತೆಯ ಹೊರತಾಗಿಯೂ ಕಿವೀಸ್ ಪಡೆ ಭರ್ಜರಿ ಗೆಲುವು  ಸಾಧಿಸಲು ಸಾಧ್ಯವಾಯಿತು. ಇಂಗ್ಲೆಂಡ್ ನೆಲದಲ್ಲಿ ಇಂಗ್ಲೆಂಡ್ ವಿರುದ್ಧ ನ್ಯೂಜಿಲೆಂಡ್ ಸಾಧಿಸಿದ ಗೆಲುವು ಭಾರತದ ಪಾಲಿಗೆ ಎಚ್ಚರಿಕೆಯ ಗಂಟೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com