ಕಾಮನ್ ವೆಲ್ತ್ ಗೇಮ್ಸ್ 2022: ಜುಲೈ ನಲ್ಲಿ ಮಹಿಳಾ ಟಿ20 ಕ್ರಿಕೆಟ್; ಟೀಂ ಇಂಡಿಯಾ ಸೇರಿ ಎಂಟು ತಂಡಗಳು ಭಾಗಿ!

2022ರ ಬರ್ಮಿಂಗ್ಹ್ಯಾಮ್ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳಾ ಟಿ-20 ಕ್ರಿಕೆಟ್ ಪಂದ್ಯಾವಳಿ ಜುಲೈ 29ರಿಂದ ಆಗಸ್ಟ್ 7ರವರೆಗೆ ಎಡ್ಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕಾಮನ್‌ವೆಲ್ತ್ ಕ್ರೀಡಾಕೂಟದ ಸಂಘಟಕರು ಪ್ರಕಟಿಸಿದ್ದಾರೆ.

Published: 16th June 2021 12:51 PM  |   Last Updated: 16th June 2021 01:31 PM   |  A+A-


India Womens Team

ಭಾರತ ಮಹಿಳಾ ತಂಡ

Posted By : Vishwanath S
Source : UNI

ನವದೆಹಲಿ: 2022ರ ಬರ್ಮಿಂಗ್ಹ್ಯಾಮ್ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳಾ ಟಿ-20 ಕ್ರಿಕೆಟ್ ಪಂದ್ಯಾವಳಿ ಜುಲೈ 29ರಿಂದ ಆಗಸ್ಟ್ 7ರವರೆಗೆ ಎಡ್ಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕಾಮನ್‌ವೆಲ್ತ್ ಕ್ರೀಡಾಕೂಟದ ಸಂಘಟಕರು ಪ್ರಕಟಿಸಿದ್ದಾರೆ. 

ಎಂಟು ತಂಡಗಳ ಗುಂಪು ಹಂತದ ಪಂದ್ಯಗಳು ಆಗಸ್ಟ್ 4ರವರೆಗೆ ನಡೆಯಲಿವೆ. ಸೆಮಿಫೈನಲ್ ಪಂದ್ಯಗಳು ಆಗಸ್ಟ್ 6ರಂದು ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಕಂಚಿನ ಪದಕದ ಪಂದ್ಯ ಆಗಸ್ಟ್ 7ರಂದು ನಡೆಯಲಿದ್ದು, ಫೈನಲ್ ಪಂದ್ಯ ಸಹ ಅದೇ ದಿನ ನಡೆಯಲಿದೆ. 

ಕ್ರೀಡಾಕೂಟದಲ್ಲಿ ಭಾಗವಹಿಸಲಿರುವ ತಂಡಗಳು
ಟೀಂ ಇಂಡಿಯಾ, ನ್ಯೂಜಿಲ್ಯಾಂಡ್​, ಆಸ್ಟ್ರೇಲಿಯಾ, ಇಂಗ್ಲೆಂಡ್​, ದಕ್ಷಿಣ ಆಫ್ರಿಕಾ, ಪಾಕಿಸ್ತಾನ್, ಶ್ರೀಲಂಕಾ ಮತ್ತು ವೆಸ್ಟ್​ ಇಂಡೀಸ್​ ತಂಡಗಳು ಕಾಮನ್​ ವೆಲ್ತ್​ ಗೇಮ್ಸ್​ನಲ್ಲಿ ಕಾಣಿಸಿಕೊಳ್ಳಲಿವೆ.

11 ದಿನಗಳ ಈಜು ಮತ್ತು ಡೈವಿಂಗ್ ಜೊತೆಗೆ, ಎಂಟು ದಿನಗಳ ಕ್ರಿಕೆಟ್, ಎಂಟು ದಿನಗಳ ಜಿಮ್ನಾಸ್ಟಿಕ್ಸ್ ಮತ್ತು ಮ್ಯಾರಥಾನ್ ಸೇರಿದಂತೆ ಏಳು ದಿನಗಳ ಅಥ್ಲೆಟಿಕ್ಸ್ ಸ್ಪರ್ಧೆಗಳು ನಡೆಯಲಿವೆ ಎಂದು ಸಂಘಟಕರು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ. 


Stay up to date on all the latest ಕ್ರಿಕೆಟ್ news
Poll
lokasbha

ಸಂಸತ್ತಿನ ಕಲಾಪಗಳಿಗೆ ಅಡ್ಡಿಪಡಿಸುವ ಸಂಸದರಿಗೆ ದಂಡ ವಿಧಿಸಬೇಕೇ?


Result
ಹೌದು, ಇವರಿಂದ ಸಮಯ ವ್ಯರ್ಥ
ಬೇಡ, ಅವರು ಪ್ರತಿಭಟಿಸಬೇಕು
flipboard facebook twitter whatsapp