ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಐಸಿಸಿ ಟೆಸ್ಟ್ ರ್ಯಾಂಕಿಂಗ್: ಸ್ಟೀವ್ ಸ್ಮಿತ್ ಮತ್ತೆ ಅಗ್ರ ಸ್ಥಾನಕ್ಕೆ; 4ನೇ ಸ್ಥಾನಕ್ಕೆ ಜಿಗಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ

ಬಹು ನಿರೀಕ್ಷಿತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಐಸಿಸಿ ತನ್ನ ಆಟಗಾರರ ರ್ಯಾಂಕಿಂಗ್ ಪಟ್ಟಿಯನ್ನು ಮತ್ತೆ ಪರಿಷ್ಕರಣೆ ಮಾಡಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 4ನೇ ಸ್ಥಾನಕ್ಕೆ ಜಿಗಿದಿದ್ದು, ಆಸಿಸ್  ದೈತ್ಯ ಸ್ಟೀವ್ ಸ್ಮಿತ್ ಮತ್ತೆ ಅಗ್ರಸ್ಥಾನಕ್ಕೇರಿದ್ದಾರೆ.

ದುಬೈ: ಬಹು ನಿರೀಕ್ಷಿತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಐಸಿಸಿ ತನ್ನ ಆಟಗಾರರ ರ್ಯಾಂಕಿಂಗ್ ಪಟ್ಟಿಯನ್ನು ಮತ್ತೆ ಪರಿಷ್ಕರಣೆ ಮಾಡಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 4ನೇ ಸ್ಥಾನಕ್ಕೆ ಜಿಗಿದಿದ್ದು, ಆಸಿಸ್  ದೈತ್ಯ ಸ್ಟೀವ್ ಸ್ಮಿತ್ ಮತ್ತೆ ಅಗ್ರಸ್ಥಾನಕ್ಕೇರಿದ್ದಾರೆ.

ಕಳೆದ ವರ್ಷ ನಡೆದಿದ್ದ ಬಾಕ್ಸಿಂಡ್ ಡೇ ಟೆಸ್ಟ್ ಪಂದ್ಯದ ಬಳಿಕ ಇದೇ ಮೊದಲ ಬಾರಿಗೆ ಸ್ಟೀವ್ ಸ್ಮಿತ್ ಅಗ್ರ ಸ್ಥಾನಕ್ಕೇರಿದ್ದಾರೆ. ಈ ಹಿಂದೆ ಅಗ್ರ ಸ್ಥಾನದಲ್ಲಿದ್ದ ನ್ಯೂಜಿಲೆಂಡ್ ತಂಡದ ಕೇನ್ ವಿಲಿಯಮ್ಸನ್ ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿನ ವೈಫಲ್ಯದ ಬಳಿಕ 2ನೇ ಸ್ಥಾನಕ್ಕೆ ಕುಸಿದಿದ್ದಾರೆ. 

ಸ್ಮಿತ್ ಒಟ್ಟು 891 ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿದ್ದು, 886 ಅಂಕಗಳನ್ನು ಹೊಂದಿರುವ ಕೇನ್ ವಿಲಿಯಮ್ಸನ್ 2ನೇ ಸ್ಥಾನದಲ್ಲಿದ್ದಾರೆ. 878 ಅಂಕಗಳನ್ನು ಹೊಂದಿರುವ ಮಾರ್ನಸ್ ಲಾಬುಶ್ಚಾಗ್ನೆ 3ನೇ ಸ್ಥಾನದಲ್ಲಿದ್ದು, 814 ಅಂಕಗಳೊಂದಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಾಲ್ಕನೇ ಸ್ಥಾನಕ್ಕೆ ಬಡ್ತಿ ಹೊಂದಿದ್ದಾರೆ. 797 ಅಂಕಗಳನ್ನು ಹೊಂದಿರುವ ಇಂಗ್ಲೆಂಡ್ ತಂಡದ ಜೋ ರೂಟ್ ಐದನೇ ಸ್ಥಾನದಲ್ಲಿದ್ದಾರೆ.

ಬೌಲಿಂಗ್ ನಲ್ಲಿ ಆಸಿಸ್ ನ ಪ್ಯಾಟ್ ಕಮಿನ್ಸ್ ಅಗ್ರಸ್ಥಾನದಲ್ಲಿ ಮುಂದುವರೆದಿದ್ದು, 891 ಅಂಕಗಳೊಂದಿಗೆ ಕಮಿನ್ಸ್ ಅಗ್ರ ಸ್ಥಾನದಲ್ಲಿ ಮುಂದುವರೆದಿದ್ದಾರೆ. 850 ಅಂಕಗಳೊಂದಿಗೆ ಭಾರತ ಆರ್ ಅಶ್ವಿನ್ 2ನೇ ಸ್ಥಾನದಲ್ಲಿದ್ದು, 830 ಅಂಕಗಳೊಂದಿಗೆ ನ್ಯೂಜಿಲೆಂಡ್ ನ ಟಿಮ್ ಸೌಥಿ ಮೂರನೇ ಸ್ಥಾನದಲ್ಲಿದ್ದಾರೆ.

ಆಲ್ ರೌಂಡರ್ ಗಳ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್ ತಂಡದ ಜೇಸನ್ ಹೋಲ್ಡರ್ ಅಗ್ರ ಸ್ಥಾನದಲ್ಲಿದ್ದು, ಹೋಲ್ಡರ್ 412 ಅಂಕಗಳನ್ನು ಹೊಂದಿದ್ದಾರೆ. 386 ಅಂಕಗಳೊಂದಿಗೆ ಭಾರತದ ರವೀಂದ್ರ ಜಡೇಜಾ 2ನೇ ಸ್ಥಾನದಲ್ಲಿ ಮುಂದುವರೆದಿದ್ದಾರೆ. ಇಂಗ್ಲೆಂಡ್ ತಂಡದ ಬೆನ್ ಸ್ಟೋಕ್ಸ್ 377 3ನೇ ಸ್ಥಾನದಲ್ಲಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com