ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್: ಚಹಾ ವಿರಾಮಕ್ಕೆ ಮುನ್ನ ಭಾರತ 217 ರನ್ ಗೆ ಆಲೌಟ್

ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 217ರನ್ ಗಳ ಸಾಧಾರಣ ಮೊತ್ತಕ್ಕೆ ಆಲೌಟ್ ಆಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಸೌಥ್ಯಾಂಪ್ಟನ್: ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 217 ರನ್ ಗಳ ಸಾಧಾರಣ ಮೊತ್ತಕ್ಕೆ ಆಲೌಟ್ ಆಗಿದೆ.

205  ರನ್ ಗಳಿಸುವಾಗ ಭಾರತ ಏಳು ವಿಕೆಟ್ ಕಳೆದುಕೊಂಡಿತ್ತು ಆ ನಂತರ ಬಲಗೈ ವೇಗಿ ಕೈಲ್ ಜೆಮಿಸನ್ ಅವರ ಆಕ್ರಮಣಕಾರಿ ಬೌಲಿಂಗ್ ಭಾರತದ ಸರ್ವಪತನಕ್ಕೆ ಕಾರಣವಾಯಿತು.

ಭಾರತದ ಪರ ನಾಯಕ ವಿರಾಟ್ ಕೊಹ್ಲಿ(44) ಹಾಗೂ ಉಪನಾಯಕ ರಹಾನೆ (49)  ಉತ್ತಮ ಮೊತ್ತ ಗಳಿಸಿದ್ದರು

ರೋಸ್ ಬೌಲ್ ನ ಸೌಥ್ಯಾಂಪ್ಟನ್ ಕ್ರೀಡಾಂಗಣದಲ್ಲಿ ನಿನ್ನೆ ಆರಂಭವಾಗಬೇಕಿದ್ದ ಪಂದ್ಯ ಮಳೆಯಿಂದಾಗಿ ಆರಂಭವಾಗಿರಲಿಲ್ಲ. ಇಂದು ಆರಂಭವಾದ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com