ಕೋವಿಡ್ ಪರಿಸ್ಥಿತಿಯಿಂದಾಗಿ ಟಿ20 ವಿಶ್ವಕಪ್ ಯುಎಇಗೆ ಸ್ಥಳಾಂತರವಾಗಬಹುದು: ಬಿಸಿಸಿಐ ಕಾರ್ಯದರ್ಶಿ ಜೈ ಶಾ

ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಟಿ20 ವಿಶ್ವಕಪ್ ಭಾರತದಿಂದ ಯುಎಇಗೆ ಸ್ಥಳಾಂತರಿಸಬೇಕಾಗಬಹುದು ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಕಾರ್ಯದರ್ಶಿ ಜೈ ಶಾ ಹೇಳಿದ್ದಾರೆ.
ಜೈ ಶಾ
ಜೈ ಶಾ

ನವದೆಹಲಿ: ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಟಿ20 ವಿಶ್ವಕಪ್ ಭಾರತದಿಂದ ಯುಎಇಗೆ ಸ್ಥಳಾಂತರಿಸಬೇಕಾಗಬಹುದು ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಕಾರ್ಯದರ್ಶಿ ಜೈ ಶಾ ಹೇಳಿದ್ದಾರೆ.

ಭಾರತದಲ್ಲಿ ಕೊರೋನಾ ಎರಡನೇ ಅಲೆ ಭೀಕರತೆ ಸೃಷ್ಟಿಸಿದ್ದು ಈ ಹಿನ್ನೆಲೆಯಲ್ಲಿ ಪಂದ್ಯಾವಳಿ ಭಾರತದಿಂದ ಯುಎಇಗೆ ಸ್ಥಳಾಂತರಿಸಬಹುದು. ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಆಟಗಾರರ ಆರೋಗ್ಯ ಮತ್ತು ಸುರಕ್ಷತೆಯು ಅತಿಮುಖ್ಯ. ನಾವು ಶೀಘ್ರದಲ್ಲೇ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಅವರು ಎಎನ್‌ಐಗೆ ತಿಳಿಸಿದರು.

ಏತನ್ಮಧ್ಯೆ, ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ನ 14ನೇ ಆವೃತ್ತಿಯು ಯುಎಇಯಲ್ಲಿಯೇ ಪೂರ್ಣಗೊಳ್ಳಲಿದೆ. ಸೆಪ್ಟೆಂಬರ್ 19ರಿಂದ ಐಪಿಎಲ್ ನಡೆಯಲಿದ್ದು, ಫೈನಲ್ ಪಂದ್ಯ ಅಕ್ಟೋಬರ್ 15ರಂದು ನಡೆಯಲಿದೆ.

ಇದು ಟಿ20 ವಿಶ್ವಕಪ್‌ಗೆ ಸ್ವಲ್ಪ ಮುಂಚೆಯೇ ಎಂದು ಅರ್ಥೈಸುತ್ತದೆ. ವಿದೇಶಿ ಆಟಗಾರರ ಲಭ್ಯತೆಗಾಗಿ ಫ್ರಾಂಚೈಸಿಗಳು ತೀವ್ರ ಕಸರತ್ತು ನಡೆಸುತ್ತಿವೆ. ಕೆಲ ಫ್ರಾಂಚೈಸಿಗಳು ತಮ್ಮ ಅಧಿಕಾರಿಗಳನ್ನು ಜುಲೈ 6ರ ನಂತರ ಯುಎಇಗೆ ಕಳುಹಿಸಲು ಯೋಜಿಸುತ್ತಿವೆ.

ಕೊರೋನಾ ಮಹಾಮಾರಿಯಿಂದಾಗಿ 2020ರ ಐಪಿಎಲ್ ಟೂರ್ನಿ ಸಹ ಯುಎಇಯಲ್ಲಿ ಬಯೋ-ಬಬಲ್ ನಲ್ಲಿ ನಡೆದಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com