ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಿಂದಲೂ ಜಸ್ ಪ್ರೀತ್ ಬುಮ್ರಾ ಹೊರಕ್ಕೆ?

ಟೀಂ ಇಂಡಿಯಾದ ವೇಗಿ ಬೌಲರ್ ಜಸ್ಪ್ರೀತ್ ಬುಮ್ರಾ ಅವರು ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದು, ಮತ್ತೆ ತಂಡಕ್ಕೆ ಸೇರಲು ವಿಳಂಬವಾಗುವ ಸಾಧ್ಯತೆ ಇದೆ.

Published: 02nd March 2021 05:33 PM  |   Last Updated: 02nd March 2021 06:06 PM   |  A+A-


Jasprit Bumrah

ಜಸ್ ಪ್ರೀತ್ ಬುಮ್ರಾ

Posted By : Vishwanath S
Source : UNI

ನವದೆಹಲಿ: ಟೀಂ ಇಂಡಿಯಾದ ವೇಗಿ ಬೌಲರ್ ಜಸ್ಪ್ರೀತ್ ಬುಮ್ರಾ ಅವರು ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದು, ಮತ್ತೆ ತಂಡಕ್ಕೆ ಸೇರಲು ವಿಳಂಬವಾಗುವ ಸಾಧ್ಯತೆ ಇದೆ.

ಕಳೆದ ವಾರ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ನಂತರ ವೈಯಕ್ತಿಕ ಕಾರಣದಿಂದ ಬುಮ್ರಾ ಅವರನ್ನು ಟೆಸ್ಟ್ ತಂಡದಿಂದ ಕೈ ಬಿಡಲಾಗಿತ್ತು. ಇದೀಗ ಏಕದಿನ ಸರಣಿಯಿಂದ ಹೊರಗುಳಿಯುವ ನಿರೀಕ್ಷೆಯಿದೆ.

ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ-20 ಸರಣಿಯಲ್ಲಿ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಇಂಗ್ಲೆಂಡ್ ವಿರುದ್ಧದ ಸೀಮಿತ ಓವರ್‌ಗಳ ಕ್ರಿಕೆಟ್‌ಗೆ ಬುಮ್ರಾ ಅನುಪಸ್ಥಿತಿ ಕಾಡಲಿದ್ದು, ಈ ಅವಕಾಶವನ್ನು ಬಳಸಿಕೊಳ್ಳಲು ಯುವಕರು ಕಾಯುತ್ತಿದ್ದಾರೆ. 

ಟಿ-20 ಸರಣಿಯು ಇದೇ 12 ರಿಂದ ಅಹಮದಾಬಾದ್ ನಲ್ಲಿ, ಏಕದಿನ ಸರಣಿಯು ಮಾರ್ಚ್ 23 ರಿಂದ ಪುಣೆಯಲ್ಲಿ ಪ್ರಾರಂಭವಾಗಲಿದ್ದು, ಜೈವಿಕ ಸುರಕ್ಷಿತ ವಾತಾವರಣದಲ್ಲಿ (ಬಯೋ ಬಬಲ್) ನಡೆಯಲಿದೆ.

Stay up to date on all the latest ಕ್ರಿಕೆಟ್ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp