ಇನ್ಸ್ಟಾಗ್ರಾಂನಲ್ಲಿ 100 ಮಿಲಿಯನ್ ಫಾಲೋವರ್ಸ್ ಹೊಂದಿದ ಏಷ್ಯಾದ ಮೊದಲ ವ್ಯಕ್ತಿ ವಿರಾಟ್ ಕೊಹ್ಲಿ!
ಭಾರತ ಕ್ರಿಕೆಟ್ ತಂಡದ ನಾಯಕ ಮತ್ತು ವಿಶ್ವದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ, ಇನ್ಸ್ಟಾಗ್ರಾಮ್ನಲ್ಲಿ 100 ಮಿಲಿಯನ್ ಹಿಂಬಾಲಕರನ್ನು ಹೊಂದಿದ ಏಷ್ಯಾದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
Published: 02nd March 2021 07:44 PM | Last Updated: 02nd March 2021 07:44 PM | A+A A-

ವಿರಾಟ್ ಕೊಹ್ಲಿ
ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ಮತ್ತು ವಿಶ್ವದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ, ಇನ್ಸ್ಟಾಗ್ರಾಮ್ನಲ್ಲಿ 100 ಮಿಲಿಯನ್ ಹಿಂಬಾಲಕರನ್ನು ಹೊಂದಿದ ಏಷ್ಯಾದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ವಿರಾಟ್ ಕ್ರಿಕೆಟ್ ಮೈದಾನದಲ್ಲಿ ಶತಕ ಮತ್ತು ಹಲವು ದಾಖಲೆ ನಿರ್ಮಿಸಿದ ಹಿರಿಮೆ ಹೊಂದಿದ್ದಾರೆ. ಈಗ ಕೊಹ್ಲಿ ಸಾಮಾಜಿಕ ತಾಣ ಇನ್ ಸ್ಟಾಗ್ರಾಮ್ ಖಾತೆಯಲ್ಲೂ ಒಂದು ನೂರು ಮಿಲಿಯನ್ ಹಿಂಬಾಲಕರನ್ನು ಹೊಂದಿದ್ದು, ಇತಿಹಾಸ ನಿರ್ಮಿಸಿದ್ದಾರೆ.
ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಇತ್ತೀಚೆಗೆ ಅವರು ಡಫ್ & ಫೆಲ್ಪ್ಸ್ ಸೆಲೆಬ್ರಿಟಿ ಬ್ರಾಂಡ್ ಮೌಲ್ಯಮಾಪನ ಅಧ್ಯಯನದಲ್ಲಿ ಉನ್ನತ ಸ್ಥಾನ ಉಳಿಸಿಕೊಂಡು ಚರ್ಚೆಯಲ್ಲಿದ್ದರು. ಕಳೆದ ಎರಡು ವರ್ಷಗಳಲ್ಲಿ ವಿರಾಟ್ ಇನ್ಸ್ಟಾಗ್ರಾಮ್ನಲ್ಲಿ ಹೆಚ್ಚು ಹಿಂಬಾಲಕರನ್ನು ಹೊಂದಿದ್ದ ಭಾರತದ ಸ್ಟಾರ್.
ವಿರಾಟ್ ತಮ್ಮ ಖಾತೆಯಲ್ಲಿ ಫಿಟ್ನೆಸ್ ಬಗ್ಗೆ ವಿಡಿಯೋಗಳನ್ನು ಪೋಸ್ಟ್ ಮಾಡುತ್ತಾ ಇರುತ್ತಾರೆ. ಅವರು ಟೆಸ್ಟ್ ಕ್ರಿಕೆಟ್ನಲ್ಲಿ 27 ಶತಕಗಳನ್ನು ಮತ್ತು ಏಕದಿನ ಪಂದ್ಯಗಳಲ್ಲಿ 43 ಶತಕಗಳನ್ನು ಬಾರಿಸಿದ್ದಾರೆ.