ನೂತನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸಿಕ್ಸ್ ಮೂಲಕ ಭರ್ಜರಿ ಶತಕ ಸಿಡಿಸಿದ ರಿಷಬ್ ಪಂತ್!

ಜಗತ್ತಿನ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಎರಡನೇ ಅಂತಾರಾಷ್ಟ್ರೀಯ ಪಂದ್ಯ ನಡೆಯುತ್ತಿದ್ದು ಈ ಕ್ರೀಡಾಂಗಣದಲ್ಲಿ ಮೊದಲ ಶತಕ ಸಿಡಿಸಿದ ಆಟಗಾರ ಎಂಬ ಖ್ಯಾತಿಗೆ ರಿಷಬ್ ಪಂತ್ ಪಾತ್ರರಾಗಿದ್ದಾರೆ.

Published: 05th March 2021 04:27 PM  |   Last Updated: 05th March 2021 04:27 PM   |  A+A-


Rishabh pant

ರಿಷಬ್ ಪಂತ್

Posted By : Vishwanath S
Source : Online Desk

ಅಹಮದಾಬಾದ್: ಜಗತ್ತಿನ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಎರಡನೇ ಅಂತಾರಾಷ್ಟ್ರೀಯ ಪಂದ್ಯ ನಡೆಯುತ್ತಿದ್ದು ಈ ಕ್ರೀಡಾಂಗಣದಲ್ಲಿ ಮೊದಲ ಶತಕ ಸಿಡಿಸಿದ ಆಟಗಾರ ಎಂಬ ಖ್ಯಾತಿಗೆ ರಿಷಬ್ ಪಂತ್ ಪಾತ್ರರಾಗಿದ್ದಾರೆ. 

ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ರಿಷಬ್ ಪಂತ್ 115 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ. ಈ ಕ್ರೀಡಾಂಗಣದಲ್ಲಿ ಮೊದಲ ಶತಕ ಸಿಡಿಸಿದ ಆಟಗಾರನಾಗಿ ರಿಷಬ್ ಪಂತ್ ಹೊರಹೊಮ್ಮಿದ್ದಾರೆ. ಇನ್ನು ಶತಕ ಸಿಡಿಸಿದ ಪಂತ್ ಜೋ ರೂಟ್ ಗೆ ಕ್ಯಾಚ್ ನೀಡಿ ಔಟಾಗಿದ್ದಾರೆ.

1,10 ಲಕ್ಷ ಪ್ರೇಕ್ಷಕರು ಕೂರುವ ಸಾಮರ್ಥ್ಯವೊಂದಿರುವ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ಮತ್ತು ಭಾರತ ನಡುವಿನ 3ನೇ ಟೆಸ್ಟ್ ಪಂದ್ಯ ಮೊದಲ ಅಂತಾರಾಷ್ಟ್ರೀಯ ಪಂದ್ಯವಾಗಿತ್ತು. ಇದೀಗ ಕ್ರೀಡಾಂಗಣದಲ್ಲಿ ಎರಡನೇ ಅಂತಾರಾಷ್ಟ್ರೀಯ ಪಂದ್ಯ ನಡೆಯುತ್ತಿದೆ.

800

 

ಟಾಸ್ ಗೆದ್ದು ಮೊದಲ ಬ್ಯಾಟಿಂಗ್ ಮಾಡಿದ್ದ ಇಂಗ್ಲೆಂಡ್ 205 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿರುವ ಟೀಂ ಇಂಡಿಯಾ 84 ಓವರ್ ಮುಕ್ತಾಯಕ್ಕೆ 259 ರನ್ ಗಳಿಗೆ 7 ವಿಕೆಟ್ ಕಳೆದುಕೊಂಡಿದೆ. 

Stay up to date on all the latest ಕ್ರಿಕೆಟ್ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp