ಟೆಸ್ಟ್ ಸರಣಿಯಲ್ಲಿ ಎರಡು ಬಾರಿ 30 ವಿಕೆಟ್ ಪಡೆದ ಮೊದಲ ಭಾರತೀಯ ಆರ್.ಅಶ್ವಿನ್!

ಟೆಸ್ಟ್ ಸರಣಿಯಲ್ಲಿ ಎರಡು ಪ್ರತ್ಯೇಕ ಸಂದರ್ಭಗಳಲ್ಲಿ 30 ವಿಕೆಟ್ ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಮೊದಲ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಪಾತ್ರರಾಗಿದ್ದಾರೆ.

Published: 06th March 2021 06:19 PM  |   Last Updated: 06th March 2021 06:38 PM   |  A+A-


R Ashwin

ಆರ್ ಅಶ್ವಿನ್

Posted By : Lingaraj Badiger
Source : ANI

ಅಹ್ಮದಾಬಾದ್: ಟೆಸ್ಟ್ ಸರಣಿಯಲ್ಲಿ ಎರಡು ಪ್ರತ್ಯೇಕ ಸಂದರ್ಭಗಳಲ್ಲಿ 30 ವಿಕೆಟ್ ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಮೊದಲ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಪಾತ್ರರಾಗಿದ್ದಾರೆ.

ಈಗ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅಶ್ವಿನ್ ಅವರು 30 ವಿಕೆಟ್ ಗಳನ್ನು ಪಡೆದಿದ್ದು, 2015 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕು ಪಂದ್ಯಗಳ ಸರಣಿಯಲ್ಲಿ 31 ವಿಕೆಟ್ ಪಡೆದಿದ್ದರು.

ಬಿಶನ್ ಸಿಂಗ್ ಬೇಡಿ, ಹರ್ಭಜನ್ ಸಿಂಗ್, ಬಿ.ಎಸ್.ಚಂದ್ರಶೇಖರ್, ಕಪಿಲ್ ದೇವ್ ಅವರು ಒಂದೇ ಟೆಸ್ಟ್ ಸರಣಿಯಲ್ಲಿ 30ಕ್ಕೂ ಹೆಚ್ಚು ವಿಕೆಟ್ ಪಡೆದಿದ್ದಾರೆ. ಆದರೆ ಅಶ್ವಿನ್ ಅವರು ಎರಡು ಬಾರಿ 30ಕ್ಕೂ ಹೆಚ್ಚು ವಿಕೆಟ್ ಪಡೆದಿದ್ದಾರೆ.

ಇಂಗ್ಲೆಂಡ್ ವಿರುದ್ಧ ಇಂದು ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 4ನೇ ಟೆಸ್ಟ್ ಪಂದ್ಯದಲ್ಲಿ - ಅನುಭವಿ ಸ್ಪಿನ್ ಬೌಲರ್ ಆರ್.ಅಶ್ವಿನ್ ಹಾಗೂ ಅಕ್ಷರ್ ಪಟೇಲ್(ತಲಾ 5 ವಿಕೆಟ್) ಅವರ ಕರಾರುವಕ್ ದಾಳಿಗೆ ನಲುಗಿದ ಆಂಗ್ಲರು ಇನ್ನಿಂಗ್ಸ್ ಹಾಗೂ 25 ರನ್ ಗಳಿಂದ ಸೋಲು ಕಂಡಿದ್ದು, ಭಾರತ ಲಂಡನ್ ನಲ್ಲಿ ನಡೆಯುವ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಪ್ರವೇಶ ಪಡೆದಿದೆ.

Stay up to date on all the latest ಕ್ರಿಕೆಟ್ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp