ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಇನ್ನಿಂಗ್ಸ್ ಹಾಗೂ 25 ರನ್ ಗಳ ಜಯ: 3-1 ಅಂತರದಿಂದ ಸರಣಿ ಗೆಲುವು
ಅಹ್ಮದಾಬಾದ್ ನಲ್ಲಿ ಇಂಗ್ಲೆಂಡ್ ವಿರುದ್ಧದ 4 ನೇ ಟೆಸ್ಟ್ ನ ಮೂರನೇ ದಿನದಾಟದಲ್ಲಿ ಆತಿಥೇಯ ಭಾರತ ತಂಡ ಎದುರಾಳಿ ವಿರುದ್ಧ ಇನ್ನಿಂಗ್ಸ್ ಹಾಗೂ 25 ರನ್ ಗಳ ಜಯ ಗಳಿಸಿದೆ.
Published: 06th March 2021 04:32 PM | Last Updated: 06th March 2021 05:12 PM | A+A A-

ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಇನ್ನಿಂಗ್ಸ್ ಹಾಗೂ 25 ರನ್ ಗಳ ಜಯ: 3-1 ಅಂತರದಿಂದ ಸರಣಿ ಗೆಲುವು
ಅಹ್ಮದಾಬಾದ್: ಅಹ್ಮದಾಬಾದ್ ನಲ್ಲಿ ಇಂಗ್ಲೆಂಡ್ ವಿರುದ್ಧದ 4 ನೇ ಟೆಸ್ಟ್ ನ ಮೂರನೇ ದಿನದಾಟದಲ್ಲಿ ಆತಿಥೇಯ ಭಾರತ ತಂಡ ಎದುರಾಳಿ ವಿರುದ್ಧ ಇನ್ನಿಂಗ್ಸ್ ಹಾಗೂ 25 ರನ್ ಗಳ ಜಯ ಗಳಿಸಿದೆ.
ಈ ಗೆಲುವಿನಿಂದ ಭಾರತಕ್ಕೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಫೈನಲ್ಸ್ ಗೆ ಅರ್ಹತೆ ಪಡೆಯುವುದಕ್ಕೆ ಸಹಕಾರಿಯಾಗಿರಲಿದೆ.
ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ನ ಮೂರನೇ ದಿನದಾಟದ ಚಹಾವಿರಾಮದ ವೇಳೆಗೆ ಇಂಗ್ಲೆಂಡ್ ತಂಡ 6 ವಿಕೆಟ್ ನಷ್ಟಕ್ಕೆ 91 ರನ್ ಗಳಿಸಿತ್ತು. 135 ರನ್ ಗಳಿಗೆ ಇಂಗ್ಲೆಂಡ್ ತಂಡ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು ಭಾರತದೆದುರು ಸೋಲೊಪ್ಪಿಕೊಂಡಿತು.
160 ರನ್ ಗಳ ಹಿನ್ನಡೆಯೊಂದಿಗೆ 2ನೇ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ಮತ್ತೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿತು. ಆರ್ ಅಶ್ವಿನ್ ಮತ್ತು ಅಕ್ಷರ್ ಪಟೇಲ್ ಜುಗಲ್ ಬಂದಿಯ ಮಾರಕ ಬೌಲಿಂಗ್ ಗೆ ತತ್ತರಿಸಿದ ಇಂಗ್ಲೆಂಡ್ ದಾಂಡಿಗರು ಪೆವಿಲಿಯನ್ ಪರೇಡ್ ನಡೆಸಿದರು.
ಜೋ ರೂಟ್ ಮತ್ತು ಬೆನ್ ಸ್ಟೋಕ್ಸ್ ಜೋಡಿ ಇಂಗ್ಲೆಂಡ್ ಬ್ಯಾಟಿಂಗ್ ಬಲನೀಡುವ ವಿಶ್ವಾಸ ಮೂಡಿಸಿತ್ತಾದರೂ, ಈ ಹಂತದಲ್ಲಿ ದಾಳಿಗಿಳಿದ ಅಕ್ಷರ್ ಪಟೇಲ್ 2 ರನ್ ಗಳಿಸಿದ್ದ ಬೆನ್ ಸ್ಟೋಕ್ಸ್ ರನ್ನು ಪೆವಿಲಿಯನ್ ಗೆ ಅಟ್ಟಿದರು. ಬಳಿಕ ಕ್ರೀಸ್ ಗೆ ಬಂದ ಡೇನಿಯಲ್ ಲಾರೆನ್ಸ್ ಭಾರತೀಯ ಬೌಲರ್ ಗಳ ಮಾರಕ ಬೌಲಿಂಗ್ ಗೆ ಪ್ರತಿರೋಧವೊಡ್ಡಲು ಯತ್ನಿಸಿದರಾದರೂ 50 ರನ್ ಗಳಿಸಿದ್ದಾಗ ಅಶ್ವಿನ್ ಬೌಲಿಂಗ್ ದಾಳಿಗೆ ಬಲಿಯಾಗಿ ಪೆವಿಲಿಯನ್ ಗೆ ನಡೆದರು. ಈ ಬಳಿಕ ಭಾರತದ ಗೆಲುವಿನ ಹಾದಿ ಸುಗಮವಾಯಿತು. ಭಾರತದ ಬೌಲಿಂಗ್ ವಿಭಾಗದಲ್ಲಿ ಅಕ್ಷರ್ ಪಟೇಲ್ 48 ರನ್ ನೀಡಿ 5 ವಿಕೆಟ್, ರವಿಚಂದ್ರನ್ ಅಶ್ವಿನ್ 47 ರನ್ ಗಳನ್ನು ನೀಡಿ 5 ವಿಕೆಟ್ ಪಡೆದರು.