
ಭಾರತ ಮಹಿಳಾ ತಂಡ
ಲಖನೌ: ನಾಯಕಿ ಮಿಥಾಲಿ ರಾಜ್ ಅವರ ಅರ್ಧಶತಕದ ಹೊರತಾಗಿಯೂ ಭಾರತ ವನಿತೆಯರ ತಂಡ ಮೊದಲ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 8 ವಿಕೆಟ್ ಗಳಿಂದ ಸೋಲುಂಡಿದೆ.
ಕೊರೊನಾ ವೈರಸ್ ಅಬ್ಬರದ ನಂತರ ಭಾರತ ವನಿತೆಯರ ತಂಡ ಆಡಿದ ಮೊದಲ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ಇದಾಗಿದ್ದು, ಮೊದಲ ಪಂದ್ಯದಲ್ಲೇ ಹೀನಾಯವಾಗಿ ಸೋಲುಂಡು 5 ಪಂದ್ಯಗಳ ಏಕದಿನ ಸರಣಿಯಲ್ಲಿ 0-1ರಿಂದ ಹಿನ್ನಡೆ ಅನುಭವಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ಮಾಹಿಳಾ 9 ವಿಕೆಟ್ ನಷ್ಟಕ್ಕೆ 177 ರನ್ ಗಳಿಸಿತ್ತು. 178 ರನ್ ಗಳ ಗುರಿ ಬೆನ್ನಟ್ಟಿದ ಆಫ್ರಿಕಾ 2 ವಿಕೆಟ್ ನಷ್ಟಕ್ಕೆ 178 ಬಾರಿಸಿ ಗೆಲುವಿನ ನಗೆ ಬೀರಿದೆ.