ಭಾರತ-ನ್ಯೂಜಿಲ್ಯಾಂಡ್ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ಸೌತಾಂಪ್ಟನ್‌ನಲ್ಲಿ ನಡೆಯಲಿದೆ: ಗಂಗೂಲಿ

ಟೀಂ ಇಂಡಿಯಾ ಮತ್ತು ನ್ಯೂಜಿಲ್ಯಾಂಡ್ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ ಜೂನ್ 18ರಿಂದ 22ರವರೆಗೆ ಸೌತಾಂಪ್ಟನ್‌ನ ಏಗಾಸ್ ಬೌಲ್ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸೋಮವಾರ ಖಚಿತಪಡಿಸಿದ್ದಾರೆ.

Published: 08th March 2021 07:40 PM  |   Last Updated: 08th March 2021 07:40 PM   |  A+A-


Ganguly

ಸೌರವ್ ಗಂಗೂಲಿ

Posted By : Vishwanath S
Source : PTI

ನವದೆಹಲಿ: ಟೀಂ ಇಂಡಿಯಾ ಮತ್ತು ನ್ಯೂಜಿಲ್ಯಾಂಡ್ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ ಜೂನ್ 18ರಿಂದ 22ರವರೆಗೆ ಸೌತಾಂಪ್ಟನ್‌ನ ಏಗಾಸ್ ಬೌಲ್ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸೋಮವಾರ ಖಚಿತಪಡಿಸಿದ್ದಾರೆ.

ಆರಂಭದಲ್ಲಿ, ಫೈನಲ್ ಪಂದ್ಯವನ್ನು ಲಾರ್ಡ್ಸ್‌ನಲ್ಲಿ ನಡೆಸಲು ಉದ್ದೇಶಿಸಲಾಗಿತ್ತು. ಕೊರೋನಾ ಹಿನ್ನೆಲೆಯಲ್ಲಿ ಪಂಚತಾರಾ ಸೌಲಭ್ಯವನ್ನು ಹೊಂದಿರುವ ಸೌತಾಂಪ್ಟನ್ ಕ್ರೀಡಾಂಗಣದಲ್ಲಿ ಐಸಿಸಿ, ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ಎರಡೂ ತಂಡಗಳಿಗೆ ಜೈವಿಕ ಗುಳ್ಳೆ ರಚಿಸಲು ಸುಲಭವಾಗುತ್ತದೆ ಎಂದು ಗಂಗೂಲಿ ಹೇಳಿದ್ದಾರೆ. 

"ಹೌದು, ಫೈನಲ್ ಪಂದ್ಯವು ಏಗಾಸ್ ಬೌಲ್‌ನಲ್ಲಿ ನಡೆಯಲಿದೆ ಎಂದು ಸುದ್ದಿ ಸಂಸ್ಧೆಯೊಂದು ಕೇಳಿದ ಪ್ರಶ್ನೆಗೆ ಗಂಗೂಲಿ ಉತ್ತರಿಸಿದ್ದಾರೆ. ಸದ್ಯ ಮುಕ್ತಾಯಗೊಂಡಿದ್ದ ಇಂಗ್ಲೆಂಡ್ ವಿರುದ್ಧದ  ಟೆಸ್ಟ್ ಸರಣಿಯಲ್ಲಿ ಭಾರತ 3-1 ಅಂತರದಿಂದ ಗೆಲುವು ಸಾಧಿಸಿ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಅರ್ಹತೆ ಪಡೆದಿದೆ. 

ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿ ಸೌರವ್ ಗಂಗೂಲಿ ಅವರು ವೈದ್ಯರ ಸಲಹೆಯಂತೆ ವಿಶ್ರಾಂತಿ ಪಡೆಯುತ್ತಿದ್ದು ಅಂತಿಮ ಪಂದ್ಯವನ್ನು ವೀಕ್ಷಿಸಲು ಲಂಡನ್ ಗೆ ಪ್ರಯಾಣಿಸುವ ನಿರೀಕ್ಷೆಯಿದೆ.

ಸೌತಾಂಪ್ಟನ್ ಕ್ರೀಡಾಂಗಣ ನಿಧಾನಗತಿಯ ಪಿಚ್ ಹೊಂದಿದ್ದು ಇಲ್ಲಿ ಉಭಯ ತಂಡಗಳ ಸ್ಪಿನ್ನರ್ ಗಳು ಮಿಂಚಲಿದ್ದಾರೆ. 

"ನಾನು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ಗೆ ಹೋಗುತ್ತೇನೆ. ಟೆಸ್ಟ್ ಚಾಂಪಿಯನ್ ಶಿಪ್ ಅಂಕಪಟ್ಟಿಯಲ್ಲಿ ಸದ್ಯ ಭಾರತ ಅಗ್ರಸ್ಥಾನದಲ್ಲಿದೆ. ಆದರೆ ನ್ಯೂಜಿಲ್ಯಾಂಡ್ ಇಂಗ್ಲೆಂಡ್ ವಿರುದ್ಧ ಒಂದೆರೆಡು ಟೆಸ್ಟ್ ಪಂದ್ಯವನ್ನು ಆಡುವುದರಿಂದ ಅಂಕಪಟ್ಟಿಯಲ್ಲಿ ಭಾರತ ಮತ್ತು ನ್ಯೂಜಿಲ್ಯಾಂಡ್ ತಂಡಗಳೇ ಅಗ್ರ ಎರಡು ಸ್ಥಾನಗಳಲ್ಲಿ ಉಳಿಯಲಿವೆ ಎಂದು ಗಂಗೂಲಿ ಹೇಳಿದ್ದಾರೆ.

Stay up to date on all the latest ಕ್ರಿಕೆಟ್ news
Poll
representation purpose only

ಕೋವಿಡ್ ಲಸಿಕೆ ವಿತರಿಸುವಲ್ಲಿ ಮೋದಿ ಸರ್ಕಾರ ಪಕ್ಷಪಾತ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನೀವು ಏನಂತೀರಿ?


Result
ಇಲ್ಲ, ಇದು ಅಸಂಬದ್ಧ ಆರೋಪ
ಹೌದು, ಪಕ್ಷಪಾತ ಮಾಡುತ್ತಿದೆ
flipboard facebook twitter whatsapp