ಐಸಿಸಿ ಟಿ20 ರ‍್ಯಾಂಕಿಂಗ್‌ ಪ್ರಕಟ: 2ನೇ ಸ್ಥಾನದಲ್ಲಿ ಟೀಂ ಇಂಡಿಯಾ

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಹೊಸದಾಗಿ ಟಿ20 ಕ್ರಿಕೆಟ್ ರ‍್ಯಾಂಕಿಂಗ್‌ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಟೀಂ ಇಂಡಿಯಾ ಎರಡನೇ ಸ್ಥಾನದಲ್ಲಿದೆ.

Published: 11th March 2021 01:08 AM  |   Last Updated: 11th March 2021 01:08 AM   |  A+A-


Team India

ಟೀಂ ಇಂಡಿಯಾ

Posted By : Vishwanath S
Source : PTI

ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಹೊಸದಾಗಿ ಟಿ20 ಕ್ರಿಕೆಟ್ ರ‍್ಯಾಂಕಿಂಗ್‌ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಟೀಂ ಇಂಡಿಯಾ ಎರಡನೇ ಸ್ಥಾನದಲ್ಲಿದೆ. 

ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ ಗೆದ್ದಿರುವ ಟೀಂ ಇಂಡಿಯಾ 268 ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೇರಿದ್ದು ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯನ್ನು 3-0 ಅಂತರದಿಂದ ಗೆದ್ದಿರುವ ಇಂಗ್ಲೆಂಡ್ ತಂಡ ಅಗ್ರಸ್ಥಾನಕ್ಕೇರಿದೆ. 

ಟಿ20 ಕ್ರಿಕೆಟ್ ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದ ಭಾರತದ ಬ್ಯಾಟ್ಸ್‌ಮನ್ ಕೆ.ಎಲ್ ರಾಹುಲ್ ಬ್ಯಾಟ್ಸ್‌ಮನ್‌ ಶ್ರೇಯಾಂಕದಲ್ಲಿ ಎರಡನೇ ಸ್ಥಾನ ಉಳಿಸಿಕೊಂಡಿದ್ದರೆ, ನಾಯಕ ವಿರಾಟ್ ಕೊಹ್ಲಿ ಒಂದು ಸ್ಥಾನ ಕುಸಿದು ಆರನೇ ಸ್ಥಾನದಲ್ಲಿದ್ದಾರೆ.

ಇಂಗ್ಲೆಂಡ್ ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಡೇವಿಡ್ ಮಲಾನ್ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದು 915 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಕೆಎಲ್ ರಾಹುಲ್ 816 ಅಂಕ ಗಳಿಸಿದ್ದಾರೆ. 

ಕಳೆದ ಸರಣಿಯಲ್ಲಿ ಉತ್ತಮವಾಗಿ ಆಡಿದ್ದ ಆರೋನ್ ಫಿಂಚ್ 808 ಅಂಕ ಗಳಿಸಿ ಮೂರನೇ ಸ್ಥಾನದಲ್ಲಿದ್ದರೆ ಪಾಕಿಸ್ತಾನದ ಬಾಬರ್ ಅಜಾಂ 801 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ. 

ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ 697 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿದ್ದಾರೆ. 


Stay up to date on all the latest ಕ್ರಿಕೆಟ್ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp