ರೋಹಿತ್ ಜೊತೆ ಕೆಎಲ್ ರಾಹುಲ್ ಇನ್ನಿಂಗ್ಸ್ ಆರಂಭಿಸಬೇಕು: ವಿವಿಎಸ್ ಲಕ್ಷ್ಮಣ್

ಟಿ20 ಕ್ರಿಕೆಟ್ ನಲ್ಲಿ ರೋಹಿತ್ ಶರ್ಮಾ ಜೊತೆಗೆ ಶಿಖರ್ ಧವನ್ ಇನ್ನಿಂಗ್ಸ್ ಆರಂಭಿಸುವ ಬದಲು ಕೆ.ಎಲ್ ರಾಹುಲ್ ಇನ್ನಿಂಗ್ಸ್ ಆರಂಭಿಸಬೇಕೆಂಬ ಆಶಯವನ್ನು ಭಾರತದ ಮಾಜಿ ಬ್ಯಾಟ್ಸ್ ಮನ್ ವಿವಿಎಸ್ ಲಕ್ಷ್ಮಣ್ ಹೇಳಿದ್ದಾರೆ.

Published: 11th March 2021 12:20 AM  |   Last Updated: 11th March 2021 12:32 AM   |  A+A-


KL Rahul-Rohit sharma

ಕೆಎಲ್ ರಾಹುಲ್-ರೋಹಿತ್

Posted By : Vishwanath S
Source : UNI

ನವದೆಹಲಿ: ಟಿ20 ಕ್ರಿಕೆಟ್ ನಲ್ಲಿ ರೋಹಿತ್ ಶರ್ಮಾ ಜೊತೆಗೆ ಶಿಖರ್ ಧವನ್ ಇನ್ನಿಂಗ್ಸ್ ಆರಂಭಿಸುವ ಬದಲು ಕೆ.ಎಲ್ ರಾಹುಲ್ ಇನ್ನಿಂಗ್ಸ್ ಆರಂಭಿಸಬೇಕೆಂಬ ಆಶಯವನ್ನು ಭಾರತದ ಮಾಜಿ ಬ್ಯಾಟ್ಸ್ ಮನ್ ವಿವಿಎಸ್ ಲಕ್ಷ್ಮಣ್ ಹೇಳಿದ್ದಾರೆ.

ವೈಟ್ ಬಾಲ್ ಕ್ರಿಕೆಟ್ ನಲ್ಲಿ ರೋಹಿತ್ ಶರ್ಮಾ ಪ್ರಮುಖರು ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಆದರೆ ನಾನು ಇನ್ನೂ ರಾಹುಲ್ ಅವರೊಂದಿಗೆ ಎರಡನೇ ಓಪನರ್ ಆಗಿ ನೋಡುತ್ತೇನೆ. ರಾಹುಲ್ ಆರಂಭಿಕರಾಗಿ ನಿಜವಾಗಿಯೂ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ, ಎಲ್ಲರ ನಿರೀಕ್ಷೆಗೆ ತಕ್ಕಂತೆ ಆಡಿದ್ದಾರೆ' ಎಂದಿದ್ದಾರೆ.

ಟಿ20 ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು, ವಿಶ್ವಕಪ್ ನಲ್ಲಿ ನೀವು ಯಾರು ಆರಂಭಿಕ ಆಟಗಾರರಿಗೆ ಆಡುತ್ತಾರೆ ಎಂಬುದನ್ನು ನೀವು ನಿರ್ಧರಿಸಬೇಕು. ಶಿಖರ್ ಧವನ್ ರೂಪದಲ್ಲಿ ಅನುಭವಿ ಓಪನರ್ ಹೊಂದಿದ್ದೀರಿ, ಓಪನರ್ ಗಳಲ್ಲಿ ಒಬ್ಬರಾದ ರೋಹಿತ್ ಶರ್ಮಾ ಮತ್ತು ಲೋಕೇಶ್ ರಾಹುಲ್ ಗಾಯಗೊಂಡರೆ ಅಥವಾ ಫಾರ್ಮ್ ನಲ್ಲಿರದಿದ್ದರೆ ಅವರು ಬ್ಯಾಕಪ್ ಓಪನರ್ ಆಗಬಹುದು ಎಂದು ತಿಳಿಸಿದ್ದಾರೆ.

ಭಾರತದ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಅವರ ಫಿಟ್ ನೆಸ್ ಬಗ್ಗೆ ಲಕ್ಷ್ಮಣ ಸಂತೋಷ ವ್ಯಕ್ತಪಡಿಸಿದರು, ಮುಂಬರುವ ಟಿ20 ವಿಶ್ವಕಪ್ ನಲ್ಲಿ ಭುವನೇಶ್ವರ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ನಾನು ಭಾವಿಸುತ್ತೇನೆ. ಭಾರತೀಯ ವೇಗದ ಬೌಲಿಂಗ್ ನಲ್ಲಿ ಸಾಕಷ್ಟು ಉತ್ತಮವಿದೆ. ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೆಸ್ಟ್ ಕ್ರಿಕೆಟ್ ನಲ್ಲಿಯೂ ಇದನ್ನು ನೋಡಿದ್ದೇವೆ' ಎಂದಿದ್ದಾರೆ.


Stay up to date on all the latest ಕ್ರಿಕೆಟ್ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp