5ನೇ ಟಿ20: ರೋ'ಹಿಟ್', 'ವಿರಾಟ' ಅಬ್ಬರದ ಬ್ಯಾಟಿಂಗ್: ಇಂಗ್ಲೆಂಡ್‌ಗೆ 225 ರನ್ ಗಳ ಬೃಹತ್ ಗುರಿ ನೀಡಿದ ಭಾರತ!

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸರಣಿ ನಿರ್ಣಾಯಕ ಟಿ20 ಪಂದ್ಯದಲ್ಲಿ ನಿಗದಿತ ಓವರ್ ನಲ್ಲಿ ಟೀಂ ಇಂಡಿಯಾ 2 ವಿಕೆಟ್ ನಷ್ಟಕ್ಕೆ 224 ರನ್ ಗಳ ಬೃಹತ್ ಮೊತ್ತ ಕಲೆ ಹಾಕಿದೆ.

Published: 20th March 2021 08:51 PM  |   Last Updated: 20th March 2021 08:51 PM   |  A+A-


Suryakumar-Kohli

ಸೂರ್ಯಕುಮಾರ್-ಕೊಹ್ಲಿ

Posted By : Vishwanath S
Source : Online Desk

ಅಹಮದಾಬಾದ್: ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸರಣಿ ನಿರ್ಣಾಯಕ ಟಿ20 ಪಂದ್ಯದಲ್ಲಿ ನಿಗದಿತ ಓವರ್ ನಲ್ಲಿ ಟೀಂ ಇಂಡಿಯಾ 2 ವಿಕೆಟ್ ನಷ್ಟಕ್ಕೆ 224 ರನ್ ಗಳ ಬೃಹತ್ ಮೊತ್ತ ಕಲೆ ಹಾಕಿದೆ. 

ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾಗೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಭದ್ರ ಬುನಾದಿ ಹಾಕಿಕೊಟ್ಟರು. ರೋಹಿತ್ ಶರ್ಮಾ 34 ಎಸೆತಗಳಲ್ಲಿ 64 ರನ್ ಗಳಿಸಿ ಔಟಾದರು. ಇನ್ನು ಆರಂಭಿಕರಾಗಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ ಅಜೇಯ 80 ರನ್ ಬಾರಿಸಿದ್ದಾರೆ. 

ಇನ್ನುಳಿದಂತೆ ಸೂರ್ಯಕುಮಾರ್ ಯಾದವ್ 17 ಎಸೆತಗಳಲ್ಲಿ 32 ರನ್ ಬಾರಿಸಿ ಔಟಾಗಿದ್ದು ಹಾರ್ದಿಕ್ ಪಾಂಡ್ಯ ಅಜೇಯ 39 ರನ್ ಬಾರಿಸಿದ್ದಾರೆ. 

ಇಂಗ್ಲೆಂಡ್ ಪರ ಬೌಲಿಂಗ್ ನಲ್ಲಿ ಅದಿಲ್ ರಶೀದ್ ಮತ್ತು ಬೆನ್ ಸ್ಟೋಕ್ಸ್ ತಲಾ 1 ವಿಕೆಟ್ ಪಡೆದಿದ್ದಾರೆ.

Stay up to date on all the latest ಕ್ರಿಕೆಟ್ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp