ಭಾರತದ ವಿರುದ್ಧ ಮೊದಲ ಏಕದಿನ ಪಂದ್ಯ: ಟಾಸ್ ಗೆದ್ದು ಇಂಗ್ಲೆಂಡ್ ಬೌಲಿಂಗ್ ಆಯ್ಕೆ; ಇಲ್ಲಿದೆ ಲೈವ್ ಸ್ಕೋರ್!

ಭಾರತ- ಇಂಗ್ಲೆಂಡ್ ನಡುವೆ ಮೊದಲ ಏಕದಿನ ಪಂದ್ಯ ಪುಣೆಯಲ್ಲಿ ಪ್ರಾರಂಭವಾಗಿದ್ದು, ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಇಯೋನ್ ಮೊರ್ಗನ್ ಬೌಲಿಂಗ್ ಆಯ್ಕೆ ಮಾಡಿದ್ದಾರೆ.

Published: 23rd March 2021 02:01 PM  |   Last Updated: 23rd March 2021 02:22 PM   |  A+A-


India captain Virat Kohli (L) and senior batsman Rohit Sharma (Photo | PTI)

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ

Posted By : Srinivas Rao BV
Source : The New Indian Express

ಪುಣೆ: ಭಾರತ- ಇಂಗ್ಲೆಂಡ್ ನಡುವೆ ಮೊದಲ ಏಕದಿನ ಪಂದ್ಯ ಪುಣೆಯಲ್ಲಿ ಪ್ರಾರಂಭವಾಗಿದ್ದು, ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಇಯೋನ್ ಮೊರ್ಗನ್ ಬೌಲಿಂಗ್ ಆಯ್ಕೆ ಮಾಡಿದ್ದಾರೆ.

ಮೂರು ಪಂದ್ಯಗಳ ಏಕದಿನ ಸರಣಿ ಇದಾಗಿದ್ದು, ಟೆಸ್ಟ್ ಹಾಗೂ ಟಿ20 ಸೋತಿರುವ ಇಂಗ್ಲೆಂಡ್ ಗೆ ಇದು ಮಹತ್ವದ ಸರಣಿಯಾಗಿರಲಿದೆ. ಭಾರತದ ಪರ ಕೃನಾಲ್ ಪಾಂಡ್ಯ, ಪ್ರಸಿದ್ಧ್ ಕೃಷ್ಣ ಈ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಮೊದಲ ಬಾರಿಗೆ ಆಡುತ್ತಿದ್ದಾರೆ. 

ಇಂಗ್ಲೆಂಡ್ ಪರ ಸ್ಯಾಮ್ ಬಿಲ್ಲಿಂಗ್ಸ್, ಟಾಮ್ ಕರ್ರನ್ ಹಾಗೂ ಮೊಯೀನ್ ಅಲಿ ತಂಡಕ್ಕೆ ಮರಳಿದ್ದಾರೆ. ನಗರದ ಹೊರವಲಯದಲ್ಲಿರುವ ಎಂಸಿಎ ಸ್ಟೇಡಿಯಂ ನಲ್ಲಿ ಪಂದ್ಯ ನಡೆಯಲಿದೆ. 

ಭಾರತ ತಂಡ: ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಶಾರ್ದೂಲ್ ಠಾಕೂರ್, ಭುವನೇಶ್ವರ್ ಕುಮಾರ್, ಕುಲ್ದೀಪ್ ಯಾದವ್, ಪ್ರಸಿದ್ಧ್ ಕೃಷ್ಣ

ಇಂಗ್ಲೆಂಡ್ ತಂಡ: ಇಯಾನ್ ಮೋರ್ಗನ್, ಮೊಯೀನ್ ಅಲಿ, ಜಾನಿ ಬೈರ್‌ಸ್ಟೋ, ಸ್ಯಾಮ್ ಬಿಲ್ಲಿಂಗ್ಸ್, ಜೋಸ್ ಬಟ್ಲರ್, ಟಾಮ್ ಕರ್ರನ್, ಸ್ಯಾಮ್ ಕರ್ರನ್, ಲಿಯಾಮ್ ಲಿವಿಂಗ್ಸ್ಟೋನ್, ಮ್ಯಾಟ್ ಪಾರ್ಕಿನ್ಸನ್, ಆದಿಲ್ ರಶೀದ್, ಜೇಸನ್ ರಾಯ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ ಮತ್ತು ಮಾರ್ಕ್ ವುಡ್.


Stay up to date on all the latest ಕ್ರಿಕೆಟ್ news
Poll
Yediyurappa

ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗುವುದೇ?


Result
ಹೌದು
ಇಲ್ಲ
flipboard facebook twitter whatsapp