ಮೊದಲ ಏಕದಿನ ಪಂದ್ಯ: ಟೀಂ ಇಂಡಿಯಾಗೆ ಆಘಾತ: ಶ್ರೇಯಸ್ ಅಯ್ಯರ್, ರೋಹಿತ್ ಶರ್ಮಾ ಗೆ ಗಾಯ, ಆಸ್ಪತ್ರೆಗೆ ರವಾನೆ

ಇಂಗ್ಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲೇ ಭಾರತ ತಂಡಕ್ಕೆ ಆಘಾತ ಎದುರಾಗಿದ್ದು, ಫೀಲ್ಡಿಂಗ್ ವೇಳೆ ಶ್ರೇಯಸ್ ಅಯ್ಯರ್ ಗಾಯದ ಸಮಸ್ಯೆಗೆ ತುತ್ತಾಗಿದ್ದಾರೆ.

Published: 23rd March 2021 08:35 PM  |   Last Updated: 23rd March 2021 08:35 PM   |  A+A-


Shreyas Iyer-Rohit Sharma

ರೋಹಿತ್ ಶರ್ಮಾ ಮತ್ತು ಶ್ರೇಯಸ್ ಅಯ್ಯರ್

Posted By : Srinivasamurthy VN
Source : ANI

ಪುಣೆ: ಇಂಗ್ಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲೇ ಭಾರತ ತಂಡಕ್ಕೆ ಆಘಾತ ಎದುರಾಗಿದ್ದು, ಫೀಲ್ಡಿಂಗ್ ವೇಳೆ ಶ್ರೇಯಸ್ ಅಯ್ಯರ್ ಗಾಯದ ಸಮಸ್ಯೆಗೆ ತುತ್ತಾಗಿದ್ದಾರೆ.

ಇಂಗ್ಲೆಂಡ್ ತಂಡದ ಬ್ಯಾಟಿಂಗ್ ನಡೆಸುತ್ತಿದ್ದ ವೇಳೆ 8ನೇ ಓವರ್ ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಶ್ರೇಯಸ್ ಅಯ್ಯರ್ ಚೆಂಡು ತಡೆಯುವ ಪ್ರಯತ್ನದಲ್ಲಿ ಎಡ ಭುಜಕ್ಕೆ ಗಾಯ ಮಾಡಿಕೊಂಡಿದ್ದಾರೆ. ಕೂಡಲೇ ಅವರನ್ನು ಪರೀಕ್ಷಿಸಿದ ತಂಡ ಫಿಸಿಯೋ ಸ್ಕ್ಯಾನಿಂಗ್ ಗಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.

ಅಂತೆಯೇ ತಂಡದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಕೂಡ ಗಾಯದ ಸಮಸ್ಯೆಗೆ ತುತ್ತಾಗಿದ್ದು, ಬ್ಯಾಟಿಂಗ್ ವೇಳೆ ಬಲ ಮೊಣಕೈ ಗೆ ಪೆಟ್ಟು ಬಿದ್ದಿದೆ. ಇದೇ ಕಾರಣಕ್ಕೆ ರೋಹಿತ್ ಶರ್ಮಾ ಫೀಲ್ಡಿಂಗ್ ಇಳಿದಿಲ್ಲ ಎಂದು ಹೇಳಲಾಗಿದೆ.

ಈ ಬಗ್ಗೆ ಸ್ವತಃ ಬಿಸಿಸಿಐ ಟ್ವೀಟ್ ಮಾಡಿದ್ದು, ಇಬ್ಹರೂ ಆಟಗಾರರನ್ನು ವೈದ್ಯಕೀಯ ತಜ್ಞರ ನಿಗಾದಲ್ಲಿರಿಸಲಾಗಿದೆ ಎಂದು ಹೇಳಿದೆ.

Stay up to date on all the latest ಕ್ರಿಕೆಟ್ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp