ಐಸಿಸಿ ಟಿ20 ರ‍್ಯಾಂಕಿಂಗ್: 4ನೇ ಸ್ಥಾನಕ್ಕೆ ಜಿಗಿದ ವಿರಾಟ್ ಕೊಹ್ಲಿ, 14ನೇ ಸ್ಥಾನದಲ್ಲಿ ರೋಹಿತ್ ಶರ್ಮಾ

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬುಧವಾರ ನೂತನ ಟಿ-20 ರ‍್ಯಾಂಕಿಂಗ್ ಪಟ್ಟಿ ಪ್ರಕಟಿಸಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ನಾಲ್ಕನೇ ಸ್ಥಾನಕ್ಕೆ ಹಾಗೂ ಉಪ ನಾಯಕ ರೋಹಿತ್ ಶರ್ಮಾ 14ನೇ ಸ್ಥಾನಕ್ಕೆ ಜಿಗಿದಿದ್ದಾರೆ.

Published: 24th March 2021 04:46 PM  |   Last Updated: 24th March 2021 04:46 PM   |  A+A-


Virat Kohli

ವಿರಾಟ್ ಕೊಹ್ಲಿ

Posted By : Lingaraj Badiger
Source : ANI

ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬುಧವಾರ ನೂತನ ಟಿ-20 ರ‍್ಯಾಂಕಿಂಗ್ ಪಟ್ಟಿ ಪ್ರಕಟಿಸಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ನಾಲ್ಕನೇ ಸ್ಥಾನಕ್ಕೆ ಹಾಗೂ ಉಪ ನಾಯಕ ರೋಹಿತ್ ಶರ್ಮಾ 14ನೇ ಸ್ಥಾನಕ್ಕೆ ಜಿಗಿದಿದ್ದಾರೆ.

ಇತ್ತೀಚಿಗಷ್ಟೇ ಮುಕ್ತಾಯವಾದ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರಿದ್ದ ವಿರಾಟ್ ಕೊಹ್ಲಿ ಅವರು 762 ಅಂಕಗಳೊಂದಿಗೆ ಐಸಿಸಿ ರ‍್ಯಾಂಕಿಂಗ್ ಪಟ್ಟಿಯಲ್ಲಿ ನಾಲ್ಕನೆ ಸ್ಥಾನಕ್ಕೇರಿದ್ದಾರೆ.

5ನೇ ಸ್ಥಾನದಲ್ಲಿರುವ ಕೆಎಲ್ ರಾಹುಲ್ 743 ಅಂಕ ಹೊಂದಿದ್ದಾರೆ. ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಅವರು 14ನೇ ಸ್ಥಾನದಲ್ಲಿದ್ದು, 613 ಪಾಯಿಂಟ್ಸ್‌ ಗಳಿಸಿದ್ದಾರೆ. 

ಇಂಗ್ಲೆಂಡ್‌ ತಂಡದ ಬ್ಯಾಟ್ಸ್‌ಮನ್‌ ಡೇವಿಡ್ ಮಲನ್ ಅವರು 892 ಅಂಕ ಗಳಿಸುವ ಮೂಲ ಟಿ-20 ರ‍್ಯಾಂಕಿಂಗ್ ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ದ್ವಿತೀಯ ಸ್ಥಾನದಲ್ಲಿ ಆ್ಯರನ್ ಫಿಂಚ್(830), ತೃತೀಯ ಸ್ಥಾನದಲ್ಲಿ ಪಾಕಿಸ್ತಾನದ ಬಾಬರ್ ಅಝಾಮ್ (801) ಇದ್ದಾರೆ.

ಇನ್ನು ತಂಡಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಇಂಗ್ಲೆಂಡ್, ಭಾರತ, ಆಸ್ಟ್ರೇಲಿಯಾ, ಪಾಕಿಸ್ತಾನ್ ಆರಂಭಿಕ 4 ಸ್ಥಾನಗಳಲ್ಲಿವೆ.

ಬೌಲಿಂಗ್ ರ್‍ಯಾಂಕಿಂಗ್‌ನಲ್ಲಿ ದಕ್ಷಿಣ ಆಫ್ರಿಕಾದ ತಬ್ರೈಜ್ ಸಂಶಿ, ಅಫ್ಘಾನಿಸ್ತಾನದ ರಶೀದ್ ಖಾನ್, ಆಸ್ಟ್ರೇಲಿಯಾದ ಆ್ಯಸ್ಟನ್ ಅಗರ್, ಇಂಗ್ಲೆಂಡ್‌ನ ಆದಿಲ್ ರಶೀದ್, ಅಫ್ಘಾನಿಸ್ತಾನದ ಮುಜೀಬ್ ಉರ್ ರಹ್ಮಾನ್ ಕ್ರಮವಾಗಿ ಮೊದಲ ಐದು ಸ್ಥಾನಗಳಲ್ಲಿದ್ದಾರೆ.

Stay up to date on all the latest ಕ್ರಿಕೆಟ್ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp