2ನೇ ಏಕದಿನ ಪಂದ್ಯ: ಟೀಂ ಇಂಡಿಯಾಗೆ ಆರಂಭಿಕ ಆಘಾತ; ರೋಹಿತ್, ಧವನ್ ಔಟ್, ಇಲ್ಲಿದೆ ಲೈವ್ ಸ್ಕೋರ್!

ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾಗೆ ಆರಂಭಿಕ ಆಘಾತ ಎದುರಾಗಿದ್ದು 37 ರನ್ ಗಳಿಗೆ ಪ್ರಮುಖ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

Published: 26th March 2021 02:55 PM  |   Last Updated: 26th March 2021 02:55 PM   |  A+A-


Buttler-Kohli

ಸಂಗ್ರಹ ಚಿತ್ರ

Posted By : Vishwanath S
Source : PTI

ಪುಣೆ: ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾಗೆ ಆರಂಭಿಕ ಆಘಾತ ಎದುರಾಗಿದ್ದು 37 ರನ್ ಗಳಿಗೆ ಪ್ರಮುಖ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. 

ಪುಣೆಯಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ ಪರ ಆರಂಭಿಕರಾದ ರೋಹಿತ್ ಶರ್ಮಾ 25 ಮತ್ತು ಶಿಖರ್ ಧವನ್ 4 ರನ್ ಗಳಿಸಿ ಔಟಾಗಿದ್ದಾರೆ. 

ಪ್ರಸ್ತುತ ಟೀಂ ಇಂಡಿಯಾ 16 ಓವರ್ ಮುಕ್ತಾಯಕ್ಕೆ 2 ವಿಕೆಟ್ ನಷ್ಟಕ್ಕೆ 72 ರನ್ ಗಳಿಸಿದೆ. ವಿರಾಟ್ ಕೊಹ್ಲಿ ಅಜೇಯ 26 ಮತ್ತು ಕೆಎಲ್ ರಾಹುಲ್ 15 ರನ್ ಗಳಿಸಿ ಆಡುತ್ತಿದ್ದಾರೆ. 

ಇಂಗ್ಲೆಂಡ್ ಪರ ಸ್ಯಾಮ್ ಕುರ್ರನ್ ಮತ್ತು ಟೊಪ್ಲೆ ತಲಾ 1 ವಿಕೆಟ್ ಪಡೆದಿದ್ದಾರೆ. 

Stay up to date on all the latest ಕ್ರಿಕೆಟ್ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp