ಇಂಗ್ಲೆಂಡ್ ಗೂ ಆಘಾತ: ಗಾಯದ ಸಮಸ್ಯೆ; ಏಕದಿನ ಸರಣಿಯಿಂದ ನಾಯಕ ಇಯಾನ್ ಮಾರ್ಗನ್ ಔಟ್

ಭಾರತವನ್ನು ಕಾಡುತ್ತಿರುವ ಗಾಯದ ಸಮಸ್ಯೆ ಇಂಗ್ಲೆಂಡ್ ಕ್ರಿಕೆಟ್ ತಂಡವನ್ನೂ ಕಾಡುತ್ತಿದ್ದು, ಮೊದಲ ಏಕದಿನ ಪಂದ್ಯದ ವೇಳೆ ಗಾಯಗೊಂಡಿದ್ದ ಇಂಗ್ಲೆಂಡ್ ತಂಡದ ನಾಯಕ ಇಯಾನ್ ಮಾರ್ಗನ್ ಟೂರ್ನಿಯಿಂದಲೇ ಔಟ್ ಆಗಿದ್ದಾರೆ.

Published: 26th March 2021 01:18 AM  |   Last Updated: 26th March 2021 12:30 PM   |  A+A-


Morgan

ಇಯಾನ್ ಮಾರ್ಗನ್

Posted By : Srinivasamurthy VN
Source : PTI

ಮುಂಬೈ: ಭಾರತವನ್ನು ಕಾಡುತ್ತಿರುವ ಗಾಯದ ಸಮಸ್ಯೆ ಇಂಗ್ಲೆಂಡ್ ಕ್ರಿಕೆಟ್ ತಂಡವನ್ನೂ ಕಾಡುತ್ತಿದ್ದು, ಮೊದಲ ಏಕದಿನ ಪಂದ್ಯದ ವೇಳೆ ಗಾಯಗೊಂಡಿದ್ದ ಇಂಗ್ಲೆಂಡ್ ತಂಡದ ನಾಯಕ ಇಯಾನ್ ಮಾರ್ಗನ್ ಟೂರ್ನಿಯಿಂದಲೇ ಔಟ್ ಆಗಿದ್ದಾರೆ.

ಹೌದು.. ಭಾರತ ಹಾಗೂ ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯಕ್ಕೆ ಎರಡು ತಂಡಗಳು ಸಜ್ಜಾಗುತ್ತಿರುವಂತೆಯೇ ಉಭಯ ತಂಡಗಳಿಗೆ ಗಾಯದ ಸಮಸ್ಯೆ ಕಾಡತೊಡಗಿದೆ. ಭಾರತದ ಶ್ರೇಯಸ್ ಅಯ್ಯರ್ ಗಾಯದಿಂದಾಗಿ ಟೂರ್ನಿಯಿಂದ ಹೊರಬಿದ್ದ ಬೆನ್ನಲ್ಲೇ ಇಂಗ್ಲೆಂಡ್ ತಂಡದ ನಾಯಕ ಇಯಾನ್ ಮಾರ್ಗನ್ ಗಾಯದ ಸಮಸ್ಯೆಗೆ ತುತ್ತಾಗಿದ್ದಾರೆ. ಅಲ್ಲದೆ ಬಾಕಿ ಉಳಿದಿರುವ ಎರಡು ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ತಿಳಿದುಬಂದಿದೆ.

ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ಇಯಾನ್ ಮಾರ್ಗನ್ ಅಲಭ್ಯತೆಯನ್ನು ಖಚಿತಪಡಿಸಿದ್ದು, ಗಾಯಗೊಂಡಿದ್ದ ನಾಯಕ ಇಯಾನ್ ಮಾರ್ಗನ್ ಮುಂದಿನ ಎರಡು ಪಂದ್ಯಗಳಿಗೂ ಅಲಭ್ಯರಾಗಲಿದ್ದಾರೆ. ಮುಂದಿನ ಎರಡು ಪಂದ್ಯಗಳಲ್ಲಿ ಜೋಸ್ ಬಟ್ಲರ್ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ಮಧ್ಯಮ ಕ್ರಮಾಂಕದ ಆಟಗಾರ ಸ್ಯಾಮ್ ಬಿಲ್ಲಿಂಗ್ಸ್ ಕೂಡ ಮುಂದಿನ ಎರಡು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂದು ಇಸಿಬಿ ಮಾಹಿತಿ ನೀಡಿದೆ.

ಪುಣೆಯಲ್ಲಿ ನಡೆಯಲಿರುವ ಎರಡನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಪರವಾಗಿ ಲಿಯಾನ್ ಲಿವಿಂಗ್‌ಸ್ಟನ್ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲಿದ್ದಾರೆ. ಮತ್ತೊಂದೆಡೆ ಇಂಗ್ಲೆಂಡ್ ತಂಡದಲ್ಲಿ ಮೀಸಲು ಆಟಗಾರನಾಗಿದ್ದ ಟಿ20 ಸ್ಪೆಷಲಿಸ್ಟ್ ಡೇವಿಡ್ ಮಲನ್ ಈಗ ತಂಡ ಸೇರಿಕೊಳ್ಳಲ್ಲಿದ್ದಾರೆ. 

ಭಾರತ ತಂಡದಲ್ಲಿಯೂ ಮೊದಲ ಏಕದಿನ ಪಂದ್ಯದಲ್ಲಿ ಇಬ್ಬರು ಆಟಗಾರರು ಗಾಯಗೊಂಡಿದ್ದರು. ರೋಹಿತ್ ಶರ್ಮಾ ಹಾಗೂ ಶ್ರೇಯಸ್ ಐಯ್ಯರ್ ಅಂಗಳದಿಂದ ಹೊರಗುಳಿದಿದ್ದರು. ರೋಹಿತ್ ಶರ್ಮಾ ಎರಡನೇ ಪಂದ್ಯಕ್ಕೆ ಫಿಟ್ ಆಗುವ ಸಾಧ್ಯತೆಯಿದ್ದು ಶ್ರೇಯಸ್ ಐಯ್ಯರ್ ಸರಣಿಯಿಂದ ಹೊರಬಿದ್ದಿದ್ದಾರೆ. ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನೂ ಆಗಿರುವ ಐಯ್ಯರ್ ಏಪ್ರಿಲ್ 9 ರಿಂದ ಆರಂಭವಾಗುವ ಪ್ರತಿಷ್ಟಿತ ಟೂರ್ನಿಯಿಂದಲೂ ಸಂಪೂರ್ಣವಾಗಿ ಹೊರಗುಳಿಯಲಿದ್ದಾರೆ ಎಂದು ತಿಳಿದುಬಂದಿದೆ.

ಈಗಾಗಲೇ ಮೊದಲ ಪಂದ್ಯವನ್ನು ಸೋತಿರುವ ಇಂಗ್ಲೆಂಡ್ ಸರಣಿಯಲ್ಲಿ ಜೀವಂತವಾಗುಳಿಯಲು ಎರಡನೇ ಪಂದ್ಯವನ್ನು ಗೆಲ್ಲಲೇ ಬೇಕಾದ ಒತ್ತಡಕ್ಕೆ ಸಿಲುಕಿದೆ.
 


Stay up to date on all the latest ಕ್ರಿಕೆಟ್ news
Poll
Modi-Subramanian ಏwamy

ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿದೆ ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.


Result
ಹೌದು, ಅದು ನಿಜ.
ಇಲ್ಲ, ಇದು ಒಂದು ಉತ್ಪ್ರೇಕ್ಷೆ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp