ಟಿ20 ಸರಣಿ ಕಳಪೆ ಪ್ರದರ್ಶನದ ಟೀಕೆಗೆ ಶತಕದ ಮೂಲಕ ತಿರುಗೇಟು ಕೊಟ್ಟ ಕೆಎಲ್ ರಾಹುಲ್!

ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಕನ್ನಡಿಗ ಕೆಎಲ್ ರಾಹುಲ್ ಇದೀಗ ಎರಡನೇ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಟೀಕಾಕಾರರ ಬಾಯಿ ಮುಚ್ಚಿಸಿದ್ದಾರೆ.

Published: 26th March 2021 05:10 PM  |   Last Updated: 26th March 2021 06:25 PM   |  A+A-


Rahul-Kohli

ಕೆಎಲ್ ರಾಹುಲ್-ಕೊಹ್ಲಿ

Posted By : Vishwanath S
Source : Online Desk

ಪುಣೆ: ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಕನ್ನಡಿಗ ಕೆಎಲ್ ರಾಹುಲ್ ಇದೀಗ ಎರಡನೇ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಟೀಕಾಕಾರರ ಬಾಯಿ ಮುಚ್ಚಿಸಿದ್ದಾರೆ. 

ಪುಣೆಯಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ ಪರ ಕೆಎಲ್ ರಾಹುಲ್ 108 ಎಸೆತಗಳಲ್ಲಿ 2 ಸಿಕ್ಸರ್, 7 ಬೌಂಡರಿ ಸೇರಿದಂತೆ ಶತಕ ಸಿಡಿಸಿದ್ದರು. ಅತ್ಯುತ್ತಮ ಬ್ಯಾಟಿಂಗ್ ಮಾಡಿದ ಕೆಎಲ್ ರಾಹುಲ್ 114 ಎಸೆತಗಳಲ್ಲಿ 108 ರನ್ ಗಳಿಸಿ ಔಟಾಗಿದರು. 

ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಕೆಎಲ್ ರಾಹುಲ್ ಅಜೇಯ 64 ರನ್ ಗಳಿಸಿ ಭರವಸೆ ಮೂಡಿಸಿದ್ದರು. ಇದೀಗ ಎರಡನೇ ಪಂದ್ಯದಲ್ಲಿ ಶತಕ ಬಾರಿಸಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್ ನಲ್ಲಿ ಐದನೇ ಶತಕ ಬಾರಿಸಿದ್ದಾರೆ.

ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ 0, 0, 1, 14 ರನ್ ಗಳಿಸಿದ್ದರು. ಹೀಗಾಗಿ ಕೆಎಲ್ ರಾಹುಲ್ ರನ್ನು ತಂಡದಿಂದ ಕೈಬಿಡಬೇಕು ಎಂದು ಕ್ರಿಕೆಟ್ ಅಭಿಮಾನಿಗಳು ಆಗ್ರಹಿಸಿದ್ದರು.

800


Stay up to date on all the latest ಕ್ರಿಕೆಟ್ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp