ಕೆಎಲ್ ರಾಹುಲ್ ಶತಕ, ಪಂತ್ 77: ಇಂಗ್ಲೆಂಡ್‌ಗೆ 337 ಬೃಹತ್ ಮೊತ್ತದ ಗುರಿ ನೀಡಿದ ಟೀಂ ಇಂಡಿಯಾ

ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರು ಭರ್ಜರಿ ಬ್ಯಾಟಿಂಗ್ ಮಾಡಿದ್ದು ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 336 ರನ್ ಬಾರಿಸಿದೆ.

Published: 26th March 2021 06:39 PM  |   Last Updated: 26th March 2021 06:39 PM   |  A+A-


Rahul-Pant

ಕೆಎಲ್ ರಾಹುಲ್-ರಿಷಬ್ ಪಂತ್

Posted By : Vishwanath S
Source : PTI

ಪುಣೆ: ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರು ಭರ್ಜರಿ ಬ್ಯಾಟಿಂಗ್ ಮಾಡಿದ್ದು ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 336 ರನ್ ಬಾರಿಸಿದೆ. 

ಪುಣೆಯಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ ಪರ ಕೆಎಲ್ ರಾಹುಲ್ 108 ಮತ್ತು ರಿಷಬ್ ಪಂತ್ ಸ್ಫೋಟಕ ಬ್ಯಾಟಿಂಗ್ ಮಾಡಿ 77 ರನ್ ಬಾರಿಸಿದ್ದು ಟೀಂ ಇಂಡಿಯಾ ಬೃಹತ್ ಮೊತ್ತ ಕಲೆಹಾಕಲು ಸಾಧ್ಯವಾಯಿತು.

ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ 25 ಮತ್ತು ಶಿಖರ್ ಧವನ್ 4 ರನ್ ಗಳಿಸಿ ಔಟಾಗಿದ್ದರು. ನಂತರ ಅಖಾಡಕ್ಕಿಳಿದ ಕೆಎಲ್ ರಾಹುಲ್ ಮತ್ತು ಕೊಹ್ಲಿ ಅತ್ಯುತ್ತಮ ಜೊತೆಯಾಟವಾಡಿದರು. 66 ರನ್ ಗಳಿಸಿದ್ದಾಗ ಕೊಹ್ಲಿ ರಶೀದ್ ಬೌಲಿಂಗ್ ನಲ್ಲಿ ಬಟ್ಲರ್ ಗೆ ಕ್ಯಾಚ್ ನೀಡಿ ಔಟಾದರು.

ನಂತರ ಬಂದ ರಿಷಬ್ ಪಂತ್ ಸ್ಫೋಟಕ ಬ್ಯಾಟಿಂಗ್ ಮಾಡಿ 40 ಎಸೆತಗಳಲ್ಲಿ ಭರ್ಜರಿ 7 ಸಿಕ್ಸರ್, ಮೂರು ಬೌಂಡರಿ ಸೇರಿದಂತೆ 77 ರನ್ ಬಾರಿಸಿದ್ದರು. ಇದೇ ವೇಳೆ ಸ್ಫೋಟಕ ಬ್ಯಾಟಿಂಗ್ ಮಾಡಿದ ಹಾರ್ದಿಕ್ ಪಾಂಡ್ಯ ಸಹ 16 ಎಸೆತಗಳಲ್ಲಿ 35 ರನ್ ಬಾರಿಸಿದ್ದಾರೆ. 

ಇಂಗ್ಲೆಂಡ್ ಪರ ಟೊಪ್ಲೆ ಮತ್ತು ಟ್ಯಾಮ್ ಕುರ್ರನ್ ತಲಾ 2 ವಿಕೆಟ್ ಪಡೆದಿದ್ದರೆ ಸ್ಯಾಮ್ ಕುರ್ರನ್ 1 ವಿಕೆಟ್ ಪಡೆದಿದ್ದಾರೆ.

Stay up to date on all the latest ಕ್ರಿಕೆಟ್ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp