ಭಾರತ ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಫಲಪ್ರದವಾಗಲಿದೆ: ಬಾಂಗ್ಲಾದೇಶ ಕ್ರಿಕೆಟಿಗ ಶಕೀಬ್ ಅಲ್ ಹಸನ್ 

ಎರಡು ದಿನಗಳ ಬಾಂಗ್ಲಾದೇಶ ಪ್ರವಾಸ ಕೈಗೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಸ್ವಾಗತಿಸಿದವರಲ್ಲಿ ಬಾಂಗ್ಲಾದೇಶ ಕ್ರಿಕೆಟಿಗ ಶಕೀಬ್ ಅಲ್ ಹಸನ್ ಕೂಡ ಒಬ್ಬರು.

Published: 27th March 2021 01:47 PM  |   Last Updated: 27th March 2021 01:48 PM   |  A+A-


Prime Minister Narendra Modi with Bangladeshi cricketer Shakib Al Hasan

ಬಾಂಗ್ಲಾದೇಶ ಕ್ರಿಕೆಟಿಗ ಶಕೀಬ್ ಅಲ್ ಹಸನ್ ಜೊತೆ ಪ್ರಧಾನಿ ಮೋದಿ

Posted By : Sumana Upadhyaya
Source : ANI

ಢಾಕಾ: ಎರಡು ದಿನಗಳ ಬಾಂಗ್ಲಾದೇಶ ಪ್ರವಾಸ ಕೈಗೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಸ್ವಾಗತಿಸಿದವರಲ್ಲಿ ಬಾಂಗ್ಲಾದೇಶ ಕ್ರಿಕೆಟಿಗ ಶಕೀಬ್ ಅಲ್ ಹಸನ್ ಕೂಡ ಒಬ್ಬರು.

ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದು ನಿಜಕ್ಕೂ ಸಂತೋಷವಾಯಿತು. ಎರಡೂ ದೇಶಗಳ ಸಂಬಂಧ ವೃದ್ಧಿಗೆ ಅವರ ಈ ಭೇಟಿ ಫಲಪ್ರದವಾಗಲಿದೆಯೆಂದು ನಾನು ಭಾವಿಸಿದ್ದು ಇಲ್ಲಿನ ನಾಯಕರು ಭಾರತಕ್ಕೆ ತೋರಿಸಿದ ಗೌರವ ನಿಜಕ್ಕೂ ಅಭೂತಪೂರ್ವವಾಗಿತ್ತು ಎಂದು ಶಕೀಬ್ ಅಲ್ ಹಸನ್ ಹೇಳಿದ್ದಾರೆ. 

ಭವಿಷ್ಯದಲ್ಲಿ ಎರಡೂ ದೇಶಗಳ ಸಂಬಂಧ ಇನ್ನಷ್ಟು ವೃದ್ಧಿಯಾಗಲಿದೆ ಎಂದು ಭಾವಿಸುತ್ತೇನೆ. ಬಹು ಹಂತದಲ್ಲಿ ಭಾರತ ಮತ್ತು ಬಾಂಗ್ಲಾದೇಶಗಳ ಸಂಬಂಧವಿದ್ದು ಈ ಸಂಬಂಧ ಸುದೀರ್ಘವಾಗಿ ಮುಂದುವರಿಯುತ್ತದೆ ಎಂದು ಭಾವಿಸುತ್ತೇನೆ ಎಂದು ಹೇಳಿದ್ದಾರೆ. 

ಬಾಂಗ್ಲಾದೇಶಕ್ಕೆ ನಿನ್ನೆ ಬೆಳಗ್ಗೆ ಬಂದಿಳಿದ ಪ್ರಧಾನಿ ಮೋದಿಯವರನ್ನು ಅಲ್ಲಿನ ಪ್ರಧಾನಿ ಶೇಖ್ ಹಸೀನಾ ಸ್ವಾಗತಿಸಿದರು. ನಂತರ ಪ್ರಧಾನಿ ಢಾಕಾದ ಸವರ್ ಉಪಝಿಲಾದಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ 1971ರ ವಿಮೋಚನಾ ಯುದ್ಧದಲ್ಲಿ ಮಡಿದವರಿಗೆ ಗೌರವ ಸಲ್ಲಿಸಿದರು.

ಬಾಂಗ್ಲಾದೇಶ 50ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಪ್ರಧಾನಿ ಮೋದಿ ಅಲ್ಲಿಗೆ ಭೇಟಿ ನೀಡಿದ್ದಾರೆ. ಬಾಂಗ್ಲಾದೇಶದ ಪಿತಾಮಹ ಬಂಗಬಂಧು ಶೇಖ್ ಮುಜಿಬುರ್ ರಹಮಾನ್ ಅವರ ಜನ್ಮ ಶತಮಾನೋತ್ಸವ ಕೂಡ ಹೌದು.
ಪ್ರಧಾನಿ ಮೋದಿಯವರು ಇಂದು ಬಾಂಗ್ಲಾದೇಶ ಅಧ್ಯಕ್ಷ ಅಬ್ದುಲ್ ಹಮೀದ್ ಅವರನ್ನು ಭೇಟಿ ಮಾಡಲಿದ್ದಾರೆ. ನಂತರ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಜೊತೆ ನಿಯೋಗ ಮಟ್ಟದ ಮಾತುಕತೆ ನಡೆಸಲಿದ್ದಾರೆ.

ಕೋವಿಡ್-19 ಸಾಂಕ್ರಾಮಿಕ ನಂತರ ಪ್ರಧಾನಿ ಮೋದಿಯವರ ಮೊದಲ ವಿದೇಶ ಪ್ರಯಾಣ ಇದಾಗಿದೆ.

Stay up to date on all the latest ಕ್ರಿಕೆಟ್ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp