ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್'ಗೆ ಕೊರೋನಾ ಪಾಸಿಟಿವ್!

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್‌ಗೆ ಮಾಹಾಮಾರಿ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ ಎಂದು ಶನಿವಾರ ತಿಳಿದುಬಂದಿದೆ.

Published: 27th March 2021 10:54 AM  |   Last Updated: 27th March 2021 11:29 AM   |  A+A-


Sachin Tendulkar

ಸಚಿನ್ ತೆಂಡೂಲ್ಕರ್

Posted By : Manjula VN
Source : Online Desk

ಮುಂಬೈ: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್‌ಗೆ ಮಾಹಾಮಾರಿ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ ಎಂದು ಶನಿವಾರ ತಿಳಿದುಬಂದಿದೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಸಚಿನ್ ತೆಂಡೂಲ್ಕರ್ ಅವರು, ನನಗೆ ಕೊರೋನಾ ಸೋಂಕು ದೃಢಪಟ್ಟಿದೆ. ನನಗೆ ಕೊರೋನಾ ಸೋಂಕಿನ ಅಲ್ಪಸ್ವಲ್ಪ ಲಕ್ಷಣಗಳಿದ್ದು, ಮನೆಯ ಮಿಕ್ಕೆಲ್ಲರಿಗೂ ಕೊರೋನಾ ನೆಗೆಟಿವ್ ಬಂದಿದೆ ಎಂದು ಹೇಳಿದ್ದಾರೆ.

ಮುಂಜಾಗೃತಾ ಕ್ರಮವಾಗಿ ಹೋಂ ಕ್ವಾರಂಟೈನ್ ಆಗಿ ವೈದ್ಯರು ಸೂಚಿಸಿದ ಎಲ್ಲ ಸೂಚನೆಗಳನ್ನು ಅನುಸರಿಸುತ್ತಿದ್ದೇನೆ. ಕೊರೋನಾ ಪಿಡುಗಿನ ವಿರುದ್ಧ ಹೋರಾಡುತ್ತಿರುವ ಎಲ್ಲ ವೈದ್ಯ ಸಮುದಾಯಕ್ಕೂ, ದೇಶದ ನನ್ನೆಲ್ಲ ಅಭಿಮಾನಿಗಳಿಗೂ ನಾವು ಕೃತಜ್ಞನಾಗಿದ್ದೇನೆ’ ಎಂದು ತಿಳಿಸಿದ್ದಾರೆ.

ಸಚಿನ್ ತೆಂಡೂಲ್ಕರ್​​ಗೂ ಕೊರೋನಾ ಸೋಂಕು ತಗುಲುವ ಮೂಲದ ದೇಶದ ಇನ್ನೋರ್ವ ತಾರೆ ಈ ಸೋಂಕಿಗೆ ತುತ್ತಾದಂತಾಗಿದೆ. ಈಗಾಗಲೇ ಅಮೀರ್ ಖಾನ್, ನಟ ಮಾಧವನ್, ಪರೇಶ್ ರಾವಲ್, ನಟಿ ತಮನ್ನಾ ಭಾಟಿಯಾ, ನಟ ಅರ್ಜುನ್ ಕಪೂರ್, ಬಾಲಿವುಡ್​ ನಟರಾದ ರಣಬೀರ್ ಕಪೂರ್​, ನಿರ್ದೇಶಕ ಸಂಜಯ್​ ಲೀಲಾ ಬನ್ಸಾಲಿ ಮುಂತಾದವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿತ್ತು.

Stay up to date on all the latest ಕ್ರಿಕೆಟ್ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp