ಕರ್ನಾಟಕದ ಪ್ರಸಿದ್ಧ ಕೃಷ್ಣಗೆ ಟೆಸ್ಟ್ ತಂಡದಲ್ಲೂ ಸ್ಥಾನ ನೀಡಬೇಕು: ಸುನಿಲ್ ಗವಾಸ್ಕರ್
ಟೀಂ ಇಂಡಿಯಾದ ಯುವ ವೇಗಿ ಪ್ರಸಿದ್ಧ ಕೃಷ್ಣ ಅವರಿಗೆ ಟೆಸ್ಟ್ ತಂಡದಲ್ಲೂ ಸ್ಥಾನ ನೀಡಬೇಕು ಎಂದು ಮಾಜಿ ಆಟಗಾರ ಸುನಿಲ್ ಗವಾಸ್ಕರ್ ಅಭಿಪ್ರಾಯ ಪಟ್ಟಿದ್ದಾರೆ.
Published: 27th March 2021 08:26 PM | Last Updated: 27th March 2021 08:26 PM | A+A A-

ವಿರಾಟ್ ಕೊಹ್ಲಿ-ಪ್ರಸಿದ್ಧ್ ಕೃಷ್ಣ
ಮುಂಬೈ: ಟೀಂ ಇಂಡಿಯಾದ ಯುವ ವೇಗಿ ಪ್ರಸಿದ್ಧ ಕೃಷ್ಣ ಅವರಿಗೆ ಟೆಸ್ಟ್ ತಂಡದಲ್ಲೂ ಸ್ಥಾನ ನೀಡಬೇಕು ಎಂದು ಮಾಜಿ ಆಟಗಾರ ಸುನಿಲ್ ಗವಾಸ್ಕರ್ ಅಭಿಪ್ರಾಯ ಪಟ್ಟಿದ್ದಾರೆ.
ಕೃಷ್ಣ ಅವರು ಪೇಸ್ ಹಾಗೂ ಸೀಮ್ ನಲ್ಲಿ ನಿಯಂತ್ರಣವನ್ನು ಹೊಂದಿದ್ದಾರೆ. ಅವರಿಗೆ ಟೆಸ್ಟ್ ತಂಡದಲ್ಲಿ ಸ್ಥಾನ ನೀಡಿದರೆ ತಂಡಕ್ಕೆ ನೆರವಾಗಬಹುದು. ಈ ಬಗ್ಗೆ ಆಯ್ಕೆ ಸಮಿತಿ ಗಮನ ಹರಿಸಬೇಕು. ಅಲ್ಲದೆ 2018ರಲ್ಲಿ ಜಸ್ಪ್ರಿತ್ ಬುಮ್ರಾ ಅವರ ಮೇಲೆ ಇಟ್ಟ ಹಾಗೆ ನಂಬಿಕೆ ಇಟ್ಟು ಅವಕಾಶ ನೀಡಬೇಕು ಎಂದು ಹೇಳಿದ್ದಾರೆ.
ಪ್ರಸಿದ್ಧ ಕೃಷ್ಣ ಅವರು ಇಂಗ್ಲೆಂಡ್ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಗೆ ಆಯ್ಕೆ ಆಗಿದ್ದರು. ಅಲ್ಲದೆ ಮೊದಲ ಏಕದಿನ ಪಂದ್ಯದಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಪಡೆದರು. ಅಲ್ಲದೆ ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಂಡು ಅಬ್ಬರಿಸಿ, ತಮ್ಮ ಸಾಮರ್ಥ್ಯ ಸಾಬೀತು ಪಡಿಸಿದ್ದರು.
ಕರ್ನಾಟಕದ ವೇಗಿ ಎರಡನೇ ಏಕದಿನ ಪಂದ್ಯದಲ್ಲೂ ಭರ್ಜರಿ ಪ್ರದರ್ಶನ ನೀಡಿ ಗಮನ ಸೆಳೆದರು. ಅಲ್ಲದೆ 37 ರನ್ ನೀಡಿ 2 ವಿಕೆಟ್ ಪಡೆದರು.