3ನೇ ಏಕದಿನ ಪಂದ್ಯ: ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ 3ನೇ ಹಾಗೂ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್‌ ಬೌಲಿಂಗ್‌ ಆಯ್ದುಕೊಂಡಿದೆ.

Published: 28th March 2021 01:37 PM  |   Last Updated: 28th March 2021 02:40 PM   |  A+A-


India and England team leaders

ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಾಯಕರು

Posted By : Srinivasamurthy VN
Source : Online Desk

ಬೆಂಗಳೂರು: ಭಾರತ ಹಾಗೂ ಇಂಗ್ಲೆಂಡ್‌ ನಡುವಿನ 3ನೇ ಹಾಗೂ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್‌ ಬೌಲಿಂಗ್‌ ಆಯ್ದುಕೊಂಡಿದೆ.

3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವನ್ನು ಟೀಂ ಇಂಡಿಯಾ 66 ರನ್‌ಗಳಿಂದ ಜಯಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿತ್ತು. 

ಇನ್ನು ಎರಡನೇ ಪಂದ್ಯದಲ್ಲಿ ಜಾನಿ ಬೇರ್‌ಸ್ಟೋವ್‌ ಹಾಗೂ ಬೆನ್ ಸ್ಟೋಕ್ಸ್‌ ಸಿಡಿಲಬ್ಬರದ ಬ್ಯಾಟಿಂಗ್‌ ನೆರವಿನಿಂದ ಇಂಗ್ಲೆಂಡ್‌ಗೆ 6 ವಿಕೆಟ್‌ಗಳ ಜಯ ತಂದುಕೊಟ್ಟಿದ್ದರು. ಸದ್ಯ ಉಭಯ ತಂಡಗಳು ತಲಾ ಒಂದೊಂದು ಪಂದ್ಯ ಜಯಿಸಿದ್ದು, ಇದೀಗ ನಿರ್ಣಾಯಕ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದೆ.

ಭಾರತ ಪ್ರವಾಸದಲ್ಲಿ ಇಂಗ್ಲೆಂಡ್ ಇದೂವರೆಗೆ ಒಂದು ಸರಣಿಯನ್ನೂ ಗೆದ್ದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಅವರು ಕನಿಷ್ಠ ಒಂದು ಸರಣಿಯ ಗೆಲುವಿನೊಂದಿಗೆ ಪ್ರವಾಸವನ್ನು ಕೊನೆಗೊಳಿಸಲು ಪ್ರಯತ್ನಿಸುತ್ತಿದ್ದು, ಟೀಮ್ ಇಂಡಿಯಾ ಅವರ ಪ್ರಯತ್ನವನ್ನು ತಡೆಯಲು ಬಯಸುತ್ತಿದೆ.

Stay up to date on all the latest ಕ್ರಿಕೆಟ್ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp