ಇರ್ಫಾನ್ ಪಠಾಣ್ ಬೆನ್ನಲ್ಲೇ ಮಹಿಳಾ ಕ್ರಿಕೆಟ್ ಆಟಗಾರ್ತಿ ಹರ್ಮನ್ ಪ್ರೀತ್ ಕೌರ್ ಗೂ ಕೊರೋನಾ ಸೋಂಕು

ಕ್ರಿಕೆಟಿಗ ಇರ್ಫಾನ್ ಪಠಾಣ್ ಕೊರೋನಾ ಸೋಂಕಿಗೆ ತುತ್ತಾದ ಬೆನ್ನಲ್ಲೇ ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ಹರ್ಮನ್ ಪ್ರೀತ್ ಕೌರ್ ಅವರಿಗೂ ಸೋಂಕು ಒಕ್ಕರಿಸಿದೆ.

Published: 30th March 2021 11:26 AM  |   Last Updated: 30th March 2021 11:26 AM   |  A+A-


Harmanpreet Kaur

ಹರ್ಮನ್ ಪ್ರೀತ್ ಕೌರ್

Posted By : Srinivasamurthy VN
Source : Online Desk

ಚಂಡೀಘಡ: ಕ್ರಿಕೆಟಿಗ ಇರ್ಫಾನ್ ಪಠಾಣ್ ಕೊರೋನಾ ಸೋಂಕಿಗೆ ತುತ್ತಾದ ಬೆನ್ನಲ್ಲೇ ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ಹರ್ಮನ್ ಪ್ರೀತ್ ಕೌರ್ ಅವರಿಗೂ ಸೋಂಕು ಒಕ್ಕರಿಸಿದೆ.

ಕೊರೋನಾ ಸೋಂಕಿಗೆ ತುತ್ತಾಗಿರುವ ಹರ್ಮನ್ ಪ್ರೀತ್ ಕೌರ್ ಅವರು ಪ್ರಸ್ತುತ ತಮ್ಮ ಮನೆಯಲ್ಲೇ ಹೋಮ್ ಕ್ವಾರಂಟೈನ್ ಆಗಿದ್ದಾರೆ ಎಂದು ತಿಳಿದುಬಂದಿದೆ. ಪ್ರಸ್ತುತ ಅವರಿಗೆ ಕೋವಿಡ್ ನಿಯಮಾವಳಿಗಳಂತೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. 

ಇತ್ತೀಚೆಗಷ್ಟೇ ತವರಿನಲ್ಲಿ ನಡೆದ ದಕ್ಷಿಣ ಆಫ್ರಿಕಾ ಮಹಿಳಾ ತಂಡದ ವಿರುದ್ಧದ ಸರಣಿಯಲ್ಲಿ ಹರ್ಮನ್ ಪ್ರೀತ್ ಕೌರ್ ಭಾಗಿಯಾಗಿರಲಿಲ್ಲ. ಮಾರ್ಚ್ 17 ರಂದು ಏಕದಿನ ಪಂದ್ಯವಾಡಿದ್ದರು.  ಬಳಿಕ ಗಾಯದ ಸಮಸ್ಯೆಗೆ ತುತ್ತಾಗಿದ್ದ ಕೌರ್ ವಿಶ್ರಾಂತಿ ಪಡೆಯುತ್ತಿದ್ದರು. ಇದಾದ ಕೆಲಸವೇ ದಿನಗಳ ಅಂತರದಲ್ಲಿ ಕೌರ್ ಅನಾರೋಗ್ಯಕ್ಕೀಡಾಗಿದ್ದರು. ಜ್ವರ ಮತ್ತು ತೀವ್ರ ಶೀಥದ ಸಮಸ್ಯೆಯಿಂದ ಬಳಲುತ್ತಿದ್ದ ಕೌರ್ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಇದೀಗ ಅದರ ವರದಿ ಬಂದಿದ್ದು, ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಇನ್ನು ಟೀಂ ಇಂಡಿಯಾ ಕ್ರಿಕೆಟಿಗರನ್ನು ಮಾರಕ ಕೊರೋನಾ ವೈರಸ್ ಇನ್ನಿಲ್ಲದಂತೆ ಕಾಡುತ್ತಿದ್ದು, ಇದಕ್ಕೂ ಮೊದಲು ರೋಡ್ ಸೇಫ್ಟೀ ಕ್ರಿಕೆಟ್ ಟೂರ್ನಮೆಂಟ್ ನಲ್ಲಿ ಪಾಲ್ಗೊಂಡಿದ್ದ ಸಚಿನ್ ತೆಂಡೂಲ್ಕರ್, ಯೂಸುಫ್ ಪಠಾಣ್, ಇರ್ಫಾನ್ ಪಠಾಣ್, ಬದರೀನಾಥ್ ಸೋಂಕಿಗೆ ತುತ್ತಾಗಿದ್ದರು.  
 

Stay up to date on all the latest ಕ್ರಿಕೆಟ್ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp