ಭಾರತದಲ್ಲಿ ಕೊರೋನಾ ನಿಯಂತ್ರಣಕ್ಕೆ ಬರದಿದ್ದರೆ ಟಿ20 ವಿಶ್ವಕಪ್‌ಗೆ ಯುಎಇ ಸ್ಟ್ಯಾಂಡ್‌ಬೈ: ಬಿಸಿಸಿಐ

ಭಾರತದಲ್ಲಿ ಹದಗೆಡುತ್ತಿರುವ ಕೋವಿಡ್ -19 ಪರಿಸ್ಥಿತಿ ಸುಧಾರಿಸದಿದ್ದಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಟಿ 20 ವಿಶ್ವಕಪ್‌ಗೆ ನಡೆಸುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ(ಬಿಸಿಸಿಐ) ಉನ್ನತ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಭಾರತದಲ್ಲಿ ಹದಗೆಡುತ್ತಿರುವ ಕೋವಿಡ್ -19 ಪರಿಸ್ಥಿತಿ ಸುಧಾರಿಸದಿದ್ದಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಟಿ 20 ವಿಶ್ವಕಪ್‌ಗೆ ನಡೆಸುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ(ಬಿಸಿಸಿಐ) ಉನ್ನತ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

ಇದೇ ವರ್ಷದ ಕೊನೆಯಲ್ಲಿ ಭಾರತದಲ್ಲಿ ಟಿ20 ವಿಶ್ವಕಪ್ ನಡೆಯಬೇಕಿತ್ತು. ಆದರೆ ಭಾರತದಲ್ಲಿ ಕೊರೋನಾ ಎರಡನೇ ಅಲೆ ಶುರುವಾಗಿದ್ದು ರೌದ್ರನರ್ತನ ಸೃಷ್ಟಿಸುತ್ತಿದೆ. ಹೀಗಾಗಿ ಭಾರತದಲ್ಲಿ ಕೊರೋನಾ ಹತೋಟಿಗೆ ಬರದಿದ್ದರೆ ಯುಎಇ ನಲ್ಲಿ ಟೂರ್ನಿ ನಡೆಸಲಿದೆ. ಇನ್ನು ಟೂರ್ನಿಯನ್ನು ಬಿಸಿಸಿಐ ಮಾಡಲಿದೆ ಎಂದು ಆಶಿಸುತ್ತಿದ್ದೇವೆ. ಆದ್ದರಿಂದ, ನಾವು ಪಂದ್ಯಾವಳಿಯನ್ನು ಅಲ್ಲಿಗೆ ಸ್ಥಳಾಂತರಿಸುತ್ತೇವೆ. ಆದರೆ ಅದನ್ನು ಬಿಸಿಸಿಐ ನಿರ್ಧರಿಸಲಿದೆ ಎಂದು ಬಿಸಿಸಿಐನ ಜನರಲ್ ಮ್ಯಾನೇಜರ್ ಧೀರಜ್ ಮಲ್ಹೋತ್ರಾ ತಿಳಿಸಿದರು.

ಅಕ್ಟೋಬರ್-ನವೆಂಬರ್‌ನಲ್ಲಿ ಭಾರತ ಪಂದ್ಯಾವಳಿಯನ್ನು ಆಯೋಜಿಸಲಿದೆ. ಆದರೆ ಕಳೆದ ಕೆಲವು ದಿನಗಳಲ್ಲಿ ಕೊರೋನಾ ಎರಡನೇ ಅಲೆ ಆರಂಭಗೊಂಡಿದ್ದು ದಿನನಿತ್ಯ 3.5 ಲಕ್ಷಕ್ಕೂ ಹೆಚ್ಚು ಹೊಸ ಪ್ರಕರಣಗಳು ಮತ್ತು 3,000 ಕ್ಕಿಂತಲೂ ಹೆಚ್ಚು ಸಾವುಗಳು ಸಂಭವಿಸುತ್ತಿವೆ. ಶುಕ್ರವಾರ ಒಂದೇ ದಿನ ಕೊರೋನಾ ಪ್ರಕರಣಗಳ ಸಂಖ್ಯೆ ಮೊದಲ ಬಾರಿಗೆ ನಾಲ್ಕು ಲಕ್ಷ ದಾಟಿದ್ದು 3,500 ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ.

ಪರಿಸ್ಥಿತಿ ಸುಧಾರಿಸದಿದ್ದರೆ, ಭಾರತವು ಮೊದಲ ಬಾರಿಗೆ ಅಂತಾರಾಷ್ಟ್ರೀಯ ಪಂದ್ಯಾವಳಿಯನ್ನು ದೇಶದ ಹೊರಗೆ ಆಯೋಜಿಸಲಿದೆ ಎಂದರು. ಬಿಸಿಸಿಐ ಈ ಮೊದಲು ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಅನ್ನು 2009ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಮತ್ತು 2020ರಲ್ಲಿ ಯುಎಇಯಲ್ಲಿ ಆಯೋಜಿಸಿತ್ತು. ಸಂಕಷ್ಟದ ಈ ಸಮಯದಲ್ಲಿ ಐಸಿಸಿಯೊಂದಿಗೆ ಮಾತನಾಡುತ್ತಿದ್ದೇವೆ ಎಂದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com