ತೀವ್ರ ಹೊಟ್ಟೆ ನೋವು: ಕೆಎಲ್ ರಾಹುಲ್ ಆಸ್ಪತ್ರೆಗೆ ದಾಖಲು, ಶಸ್ತ್ರ ಚಿಕಿತ್ಸೆಗೆ ಸಿದ್ಧತೆ

ಐಪಿಎಲ್ ಟೂರ್ನಿಯ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕ ಕೆಎಲ್ ರಾಹುಲ್ ಟೂರ್ನಿ ಮಧ್ಯೆಯೇ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೆಎಲ್ ರಾಹುಲ್
ಕೆಎಲ್ ರಾಹುಲ್

ಅಹಮದಾಬಾದ್: ಐಪಿಎಲ್ ಟೂರ್ನಿಯ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕ ಕೆಎಲ್ ರಾಹುಲ್ ಟೂರ್ನಿ ಮಧ್ಯೆಯೇ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೂಲಗಳ ಪ್ರಕಾರ ಕೆಎಲ್ ರಾಹುಲ್ ಅವರು ಕರಳು ಸಂಬಂಧಿ ಬೇನೆ (acute appendicitis)ಯಿಂದ ಬಳಲುತ್ತಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ವೇಳೆ ನಡೆದ ವೈದ್ಯಕೀಯ ತಪಾಸಣೆ ಬಳಿಕ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲು ವೈದ್ಯರು ಸೂಚಿಸಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ಕೆಎಲ್ ರಾಹುಲ್ ಹಾಲಿ ಐಪಿಎಲ್ ಟೂರ್ನಿಗೆ ಅಲಭ್ಯರಾಗುವ ಸಾಧ್ಯತೆ ಇದೆ. 

ಹಾಲಿ ಐಪಿಎಲ್ ಟೂರ್ನಿಯ 29ನೇ ಲೀಗ್ ಪಂದ್ಯಕ್ಕೆ ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಸಜ್ಜಾಗಿದೆ. ಈ ಮಹತ್ವದ ಪಂದ್ಯಕ್ಕೆ ಸಜ್ಜಾಗುತ್ತಿದ್ದ ಕೆಎಲ್ ರಾಹುಲ್‌ಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಟ್ಟೆ ನೋವು ಹೆಚ್ಚಾದ ಕಾರಣ  ಎಮೆರ್ಜೆನ್ಸಿ ಘಟಕಕ್ಕೆ ದಾಖಲಿಸಲಾಗಿತ್ತು. ಕೆಲ ಪರೀಕ್ಷೆಗಳ ಬಳಿಕ ರಾಹುಲ್ ಅಪೆಂಡಿಕ್ಸ್ ಸಮಸ್ಯೆಗೆ ತುತ್ತಾಗಿರುವುದು ದೃಢಪಟ್ಟಿದೆ. 

ರಾಹುಲ್ ಅನಾರೋಗ್ಯ ಕುರಿತು ಪಂಜಾಬ್ ಕಿಂಗ್ಸ್ ಸಾಮಾಜಿಕ ಜಾಲತಾಣದಲ್ಲಿ ಖಚಿತ ಪಡಿಸಿದೆ. ಇಷ್ಟೇ ಅಲ್ಲ, ಶಸ್ತ್ರ ಚಿಕಿತ್ಸೆ ಮೂಲಕ ರಾಹುಲ್ ಸಂಪೂರ್ಣ ಗುಣಮುಖರಾಗಲಿದ್ದಾರೆ ಎಂದಿದೆ. ರಾಹುಲ್ ಆಸ್ಪತ್ರೆ ದಾಖಲಿಸುವ ವೇಳೆ ಎಲ್ಲಾ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರಣ ಕೆಎಲ್ ರಾಹುಲ್‌ ಇಂದಿನ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ರಾಹುಲ್ ಲಭ್ಯತೆ ಕುರಿತು ಪಂಜಾಬ್ ಯಾವುದೇ ಖಚಿತ ಮಾಹಿತಿ ಬಹಿರಂಗ ಪಡಿಸಿಲ್ಲ. ಇಷ್ಟೇ ದೆಹಲಿ ವಿರುದ್ಧ ತಂಡ ರಾಹುಲ್ ಅಲಭ್ಯತೆಯಲ್ಲಿ ಮತ್ತೊರ್ವ ಕನ್ನಡಿಗ ಮಯಾಂಕ್ ಅಗರ್ವಾಲ್ ತಂಡವನ್ನು ಮುನ್ನಡೆಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com