ಐಪಿಎಲ್ 2021: ಚೆನ್ನೈ ವಿರುದ್ಧ ಮುಂಬೈ ಇಂಡಿಯನ್ಸ್ ಗೆ 4 ವಿಕೆಟ್ ಗಳ ರೋಚಕ ಜಯ

ಗೆಲುವಿನ ಅಲೆಯಲ್ಲಿ ತೇಲುತ್ತಿದ್ದ ಚೆನ್ನೈ ಸೂಪರ್ ಕಿಂಗ್ಸ್ ಗೆ ಮುಂಬೈ ಇಂಡಿಯನ್ಸ್ ತಂಡ ಸೋಲಿನ ಶಾಕ್ ನೀಡಿದ್ದು, 4 ವಿಕೆಟ್ ಗಳ ರೋಚಕ ಜಯ ಸಾಧಿಸಿದೆ.
ಕೀರನ್ ಪೊಲಾರ್ಡ್
ಕೀರನ್ ಪೊಲಾರ್ಡ್

ನವದೆಹಲಿ: ಗೆಲುವಿನ ಅಲೆಯಲ್ಲಿ ತೇಲುತ್ತಿದ್ದ ಚೆನ್ನೈ ಸೂಪರ್ ಕಿಂಗ್ಸ್ ಗೆ ಮುಂಬೈ ಇಂಡಿಯನ್ಸ್ ತಂಡ ಸೋಲಿನ ಶಾಕ್ ನೀಡಿದ್ದು, 4 ವಿಕೆಟ್ ಗಳ ರೋಚಕ ಜಯ ಸಾಧಿಸಿದೆ.

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧದ ಮುಂಬೈ ಇಂಡಿಯನ್ಸ್ ತಂಡ 4 ವಿಕೆಟ್​ಗಳ ರೋಚಕ ಗೆಲುವು ದಾಖಲಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ ನೀಡಿದ 219 ರನ್​ಗಳ ಗುರಿಯನ್ನು ಬೆನ್ನು ಹತ್ತಿದ ಮುಂಬೈ ಇಂಡಿಯನ್ಸ್ ತಂಡ ಕೀರನ್ ಪೊಲಾರ್ಡ್  ಅವರ (ಅಜೇಯ 87 ರನ್) ನೆರವಿನಿಂದ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 219 ರನ್ ಗಳಿಸಿ 4 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು.

ಮುಂಬೈ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ ಕೀರನ್ ಪೊಲಾರ್ಡ್ ಕೇವಲ 34 ಎಸೆತಗಳಲ್ಲಿ 8 ಸಿಕ್ಸರ್ ಹಾಗೂ 6 ಬೌಂಡರಿ ಸಹಿತ 87 ರನ್ ಕಲೆಹಾಕಿದರು. ಉಳಿದಂತೆ ಕ್ವಿಂಟನ್ ಡಿ ಕಾಕ್ 38, ರೋಹಿತ್ ಶರ್ಮಾ 35 ಹಾಗೂ ಕೃಣಾಲ್ ಪಾಂಡ್ಯ 32 ರನ್ ದಾಖಲಿಸಿ ಗೆಲುವಿನಲ್ಲಿ ಸಾಥ್ ನೀಡಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com