ಬಿಸಿಸಿಐ ನಿರ್ಧಾರ ಸಮರ್ಥನೀಯ, ಆಟಗಾರರ ಸುರಕ್ಷತೆಗಾಗಿ ನಿರಂತರ ಸಂಪರ್ಕ: ಕ್ರಿಕೆಟ್ ಆಸ್ಟ್ರೇಲಿಯಾ

ಭಾರತದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣ ಹಾಗೂ ಐಪಿಎಲ್ ತಂಡಗಳ ಆಟಗಾರರು ಹಾಗೂ ಸಹಾಯಕ ಸಿಬ್ಬಂದಿಯಲ್ಲಿ ಕಾಣಿಸಿಕೊಂಡ ಸೊಂಕಿನ ಹಿನ್ನೆಲೆ ಭಾರತ ಕ್ರಿಕೆಟ್ ನಿಯಂತ್ರಣಾ ಮಂಡಳಿ (ಬಿಸಿಸಿಐ) 14ನೇ ಆವೃತ್ತಿಯ ಐಪಿಎಲ್ ಪಂದ್ಯಗಳನ್ನು ಮುಂದೂಡಿದ ನಿರ್ಧಾರವನ್ನು, ಕ್ರಿಕೆಟ್  ಆಸ್ಟ್ರೇಲಿಯಾ (ಸಿಎ) ಬೆಂಬಲಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮೆಲ್ಬೋರ್ನ್: ಭಾರತದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣ ಹಾಗೂ ಐಪಿಎಲ್ ತಂಡಗಳ ಆಟಗಾರರು ಹಾಗೂ ಸಹಾಯಕ ಸಿಬ್ಬಂದಿಯಲ್ಲಿ ಕಾಣಿಸಿಕೊಂಡ ಸೊಂಕಿನ ಹಿನ್ನೆಲೆ ಭಾರತ ಕ್ರಿಕೆಟ್ ನಿಯಂತ್ರಣಾ ಮಂಡಳಿ (ಬಿಸಿಸಿಐ) 14ನೇ ಆವೃತ್ತಿಯ ಐಪಿಎಲ್ ಪಂದ್ಯಗಳನ್ನು ಮುಂದೂಡಿದ ನಿರ್ಧಾರವನ್ನು, ಕ್ರಿಕೆಟ್  ಆಸ್ಟ್ರೇಲಿಯಾ (ಸಿಎ) ಬೆಂಬಲಿಸಿದೆ.

ಈ ಬಗ್ಗೆ ಕ್ರಿಕೆಟ್ ಆಸ್ಟ್ರೇಲಿಯಾ ಹಾಗೂ ಆಸ್ಟ್ರೇಲಿಯಾ ಕ್ರಿಕೆಟ್ ಅಸೋಸಿಯೆಷನ್ ಜಂಟಿ ಹೇಳಿಕೆ ನೀಡಿದ್ದು, 'ಆಟಗಾರ ಹಿತ ಹಾಗೂ ಆರೋಗ್ಯದ ದೃಷ್ಟಿಯಿಂದ ಬಿಸಿಸಿಐ ತೆಗೆದುಕೊಂಡ ನಿರ್ಧಾರ ಸೂಕ್ತವಾಗಿದೆ ಎಂದು ಹೇಳಿದೆ. ಅಂತೆಯೇ ಸಿಎ, ಬಿಸಿಸಿಐ ಜೊತೆ ನಿಕಟ ಸಂಪರ್ಕದಲ್ಲಿದ್ದು, ಆಟಗಾರರ ಮಾಹಿತಿ  ಪಡೆಯುತ್ತಿದೆ. ಅಲ್ಲದೆ ತಮ್ಮ ದೇಶದ ಆಟಗಾರರು, ಕೋಚ್, ಸಹಾಯಕ ಸಿಬ್ಬಂದಿ ಸುರಕ್ಷತೆಯ ಬಗ್ಗೆ ಮೇಲ್ವಿಚಾರಣೆ ನಡೆಸುತ್ತಿದೆ ಎಂದು ತಿಳಿಸಿದೆ.

ಕೋವಿಡ್ ಸಾಂಕ್ರಾಮಿಕದಿಂದ ತತ್ತರಿಸಿರುವ ಭಾರತಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ನೆರವು
ಇದೇ ವೇಳೆ ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಭಾರತದೊಂದಿಗೆ ಕೈಜೋಡಿಸಲು ಮುಂದಾಗಿರುವ ಕ್ರಿಕೆಟ್ ಆಸ್ಟ್ರೇಲಿಯಾ 50 ಸಾವಿರ ಆಸ್ಟ್ರೇಲಿಯನ್ ಡಾಲರ್ ನೆರವು ಘೋಷಣೆ ಮಾಡಿದೆ. ಆಟಗಾರರ ಸಂಸ್ಥೆ ಮತ್ತು ಯುನಿಸೆಫ್ ಜೊತೆಗೂಡಿ ನಿಧಿ ಸಂಗ್ರಹ ಮಾಡುವುದಕ್ಕೂ ಸಿಎ ಮುಂದಾಗಿದೆ. 'ಆಸ್ಟ್ರೇಲಿಯಾವು  ಹೆಚ್ಚು ಸ್ನೇಹ ಬೆಳೆಸಿಕೊಂಡಿರುವ ಭಾರತದಲ್ಲಿ ಕೋವಿಡ್ ಎರಡನೇ ಅಲೆ ಸೃಷ್ಟಿಸಿರುವ ಆತಂಕದ ಸ್ಥಿತಿ ಬೇಸರ ತಂದಿದೆ. ಈ ಮಹಾಮಾರಿಯ ನಿಯಂತ್ರಣಕ್ಕಾಗಿ ಕೈಗೊಳ್ಳುವ ಕಾರ್ಯದಲ್ಲಿ ಕೈಜೋಡಿಸಲು ಮುಂದಾಗಿದ್ದೇವೆ ಎಂದು ಹೇಳಿದೆ.

ಆಸಿಸ್ ಆಟಗಾರರಿಗೆ ವಿಶೇಷ ವಿಮಾನ ನೀಡುವ ಬಗ್ಗೆ ಚಿಂತಿಸಿಲ್ಲ
ಭಾರತದಲ್ಲಿರುವ ಆಸ್ಟ್ರೇಲಿಯಾದ ಕ್ರಿಕೆಟಿಗರನ್ನು ತಲ್ಷಣವೇ ವಾಪಾಸ್ ಕರತರಲು ವಿಶೇಷ ವಿಮಾನದ ವ್ಯವಸ್ಥೆಯನ್ನು ಮಾಡುವ ಯೋಚನೆಗಳು ಸದ್ಯಕ್ಕೆ ನಮ್ಮ ಮುಂದಿಲ್ಲ ಎಂದು ಆಸ್ಟ್ರೇಲಿಯಾದ ಕ್ರಿಕೆಟ್ ಮಂಡಳಿ ಕ್ರಿಕೆಟ್ ಆಸ್ಟ್ರೇಲಿಯಾ ಮುಖ್ಯಸ್ಥ ನಿಕ್ ಹಾಕ್ಲೆ ಸ್ಪಷ್ಟಪಡಿಸಿದ್ದಾರೆ. 

ಈ ನಡುವೆ ಪಿಎಂ ಕೇರ್ಸ್‌ ನಿಧಿಗೆ ಹಣ ನೀಡಲು ನಿರ್ಧರಿಸಿದ್ದ ಕೋಲ್ಕತ್ತ ನೈಟ್‌ ರೈಡರ್ಸ್‌ ತಂಡದಲ್ಲಿ ಆಡುತ್ತಿರುವ ಆಸ್ಟ್ರೇಲಿಯಾದ ವೇಗದ ಬೌಲರ್‌ ಪ್ಯಾಟ್‌ ಕಮಿನ್ಸ್‌ ಈ ಮೊತ್ತವನ್ನು ಕ್ರಿಕೆಟ್ ಆಸ್ಟ್ರೇಲಿಯಾವು ಯುನಿಸೆಫ್‌ ಜೊತೆಗೂಡಿ ಸಂಗ್ರಹಿಸುವ ನಿಧಿಗೆ ನೀಡಲು ತೀರ್ಮಾನಿಸಿದ್ದಾರೆ. ಈ ಹಿಂದೆ ಭಾರತದಲ್ಲಿ  ಹೆಚ್ಚುತ್ತಿರುವ ಕೋವಿಡ್-19 ಪ್ರಕರಣ ಹಿನ್ನೆಲೆಯಲ್ಲಿ ಭಾರತದಿಂದ ಆಸ್ಟ್ರೇಲಿಯಾಕ್ಕೆ ಹೋಗುವ ವಿಮಾನ ಸೇವೆಯನ್ನು ಆಸ್ಟ್ರೇಲಿಯಾ ಸರ್ಕಾರ ಮೇ 15 ರವರೆಗೆ ಸ್ಥಗಿತ ಗೊಳಿಸಿದೆ.ಆಸ್ಟ್ರೇಲಿಯಾ ಮಾತ್ರವಲ್ಲದೇ ಅನೇಕ ರಾಷ್ಟ್ರಗಳು ಭಾರತದಿಂದ ತೆರಳುವ ವಿಮಾನಗಳಿಗೆ ನಿರ್ಬಂಧವನ್ನು ಹೇರಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com