ಪಾಕಿಸ್ತಾನದ ಬಾಬರ್ ಅಜಮ್, ಅಸೀಸ್ ನ ಅಲಿಸಾ ಹೀಲಿಗೆ 'ಐಸಿಸಿ ಪ್ಲೇಯರ್ ಆಫ್ ದಿ ಮಂತ್' ಪ್ರಶಸ್ತಿ

ದಕ್ಷಿಣ ಆಫ್ರಿಕಾ ವಿರುದ್ಧ ಇತ್ತೀಚೆಗೆ ಮುಕ್ತಾಯಗೊಂಡ ಸರಣಿಯಲ್ಲಿ ಎಲ್ಲಾ ಸ್ವರೂಪಗಳ ಕ್ರಿಕೆಟ್ ನಲ್ಲಿ ಸ್ಥಿರ ಮತ್ತು ಅತ್ಯುತ್ತಮ ಪ್ರದರ್ಶನ ನೀಡಿದ ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಏಪ್ರಿಲ್ ತಿಂಗಳ ಐಸಿಸಿ ಪ್ಲೇಯರ್ ಆಫ್ ದಿ ಮಂತ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಬಾಬರ್ ಅಜಮ್, ಅಲಿಸಾ ಹೀಲಿ
ಬಾಬರ್ ಅಜಮ್, ಅಲಿಸಾ ಹೀಲಿ

ದುಬೈ: ದಕ್ಷಿಣ ಆಫ್ರಿಕಾ ವಿರುದ್ಧ ಇತ್ತೀಚೆಗೆ ಮುಕ್ತಾಯಗೊಂಡ ಸರಣಿಯಲ್ಲಿ ಎಲ್ಲಾ ಸ್ವರೂಪಗಳ ಕ್ರಿಕೆಟ್ ನಲ್ಲಿ ಸ್ಥಿರ ಮತ್ತು ಅತ್ಯುತ್ತಮ ಪ್ರದರ್ಶನ ನೀಡಿದ ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಏಪ್ರಿಲ್ ತಿಂಗಳ ಐಸಿಸಿ ಪ್ಲೇಯರ್ ಆಫ್ ದಿ ಮಂತ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅದೇ ವೇಳೆ ಮಹಿಳಾ ವಿಭಾಗದಲ್ಲಿ ಆಸ್ಟ್ರೇಲಿಯಾದ ಅಲಿಸಾ ಹೀಲಿಗೆ ಪ್ರಶಸ್ತಿ ಒಲಿದಿದೆ.

ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಸೋಮವಾರ ಐಸಿಸಿ ಪ್ಲೇಯರ್ ಆಫ್ ದಿ ಮಂತ್ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟಿಸಿದೆ.ಇದು ಎಲ್ಲಾ ರೀತಿಯ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಪುರುಷ ಮತ್ತು ಮಹಿಳಾ ಕ್ರಿಕೆಟಿಗರ ಅತ್ಯುತ್ತಮ ಪ್ರದರ್ಶನಗಳನ್ನು ಗುರುತಿಸಿ ಗೌರವಿಸುತ್ತದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಬಾಬರ್ 82 ಎಸೆತಗಳಲ್ಲಿ 94 ರೇಟಿಂಗ್ ಗಳಿಸಿ 13 ರೇಟಿಂಗ್ ಪಾಯಿಂಟ್‌ಗಳನ್ನು ಗಳಿಸುವ ಮೂಲಕ  ವೃತ್ತಿಜೀವನದ ಅತ್ಯುತ್ತಮ 865 ಪಾಯಿಂಟ್ ತಲುಪಿದರು. ಟಿ 20 ಐ ಸರಣಿಯ ಮೂರನೇ ಪಂದ್ಯದಲ್ಲಿ ಅವರು 59 ಎಸೆತಗಳಲ್ಲಿ 122 ರನ್ ಗಳಿಸಿದ್ದರು.  ಆಸ್ಟ್ರೇಲಿಯಾದ ಹೀಲಿ ನ್ಯೂಜಿಲೆಂಡ್ ವಿರುದ್ಧದ ಇತ್ತೀಚಿನ ಸರಣಿಯಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್ ನಲ್ಲಿ ಉತ್ತಮ ಪ್ರದರ್ಶನ ತೋರಿದ್ದರು. ಹೀಲಿ ನ್ಯೂಜಿಲೆಂಡ್ ವಿರುದ್ಧ ಮೂರು ಏಕದಿನ ಪಂದ್ಯಗಳನ್ನು ಆಡಿದ್ದು, 51.66 ರ ಸರಾಸರಿಯಲ್ಲಿ 155 ರನ್ ಗಳಿಸಿದರು ಮತ್ತು ಸ್ಟ್ರೈಕ್ ರೇಟ್ 98.72. ಆಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com