ವಿಶ್ವ ಟೆಸ್ಟ್ ಚಾಂಪಿಯನ್ಶಿಪ್: ಮೇ 19ಕ್ಕೂ ಮೊದಲು 3 ಬಾರಿ ಕೋವಿಡ್ ಟೆಸ್ಟ್ ನಡೆಸಲು ಬಿಸಿಸಿಐ ಸಿದ್ಧತೆ

ನ್ಯೂಜಿಲೆಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್(ಡಬ್ಲ್ಯುಟಿಸಿ) ಫೈನಲ್ ಮತ್ತು ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲು ಇಂಗ್ಲೆಂಡ್ ಗೆ ಹೊರಡುವ ಮುನ್ನ ಟೀಂ ಇಂಡಿಯಾಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) 3 ಬಾರಿ ಕೋವಿಡ್ ಟೆಸ್ಟ್ ನಡೆಸಲು ತೀರ್ಮಾನಿಸಿದೆ.  
ಟೀಂ ಇಂಡಿಯಾ
ಟೀಂ ಇಂಡಿಯಾ

ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್(ಡಬ್ಲ್ಯುಟಿಸಿ) ಫೈನಲ್ ಮತ್ತು ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲು ಇಂಗ್ಲೆಂಡ್ ಗೆ ಹೊರಡುವ ಮುನ್ನ ಟೀಂ ಇಂಡಿಯಾಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) 3 ಬಾರಿ ಕೋವಿಡ್ ಟೆಸ್ಟ್ ನಡೆಸಲು ತೀರ್ಮಾನಿಸಿದೆ.  

ಎಲ್ಲಾ ಆಟಗಾರರು ಮೇ 19ರಂದು ಮುಂಬೈನಲ್ಲಿ ಸೇರಲಿದ್ದು ಇದಕ್ಕೂ ಮೊದಲು ಮೂರು ಆರ್‌ಟಿ-ಪಿಸಿಆರ್ ಪರೀಕ್ಷೆಗಳಿಗೆ ಒಳಗಾಗಲು ವ್ಯವಸ್ಥೆ ಮಾಡಲಾಗಿದೆ. ಆಟಗಾರರು ತಮ್ಮ ಮನೆಗಳಲ್ಲಿ ಮೂರು ಆರ್‌ಟಿ-ಪಿಸಿಆರ್ ಪರೀಕ್ಷೆಗಳಿಗೆ ಒಳಗಾಗಲಿದ್ದಾರೆ. ಯಾವ ಆಟಗಾರರಿಗೆ ನೆಗೆಟಿವ್ ಬರುತ್ತದೆಯೋ ಅವರು ಮೇ 19ರಂದು ಮುಂಬೈನಲ್ಲಿ ಒಟ್ಟುಗೂಡಲಿದ್ದಾರೆ. ಜೂನ್ 2ರಂದು ಬ್ರಿಟನ್ ಗೆ ತೆರಳುವ ಮುನ್ನ ಮುಂಬೈನಲ್ಲಿ 14 ದಿನಗಳ ಕಾಲ ಕ್ವಾರಂಟೈನ್ ಗೆ ಒಳಗಾಗುತ್ತಾರೆ. 

ಬ್ರಿಟನ್ ಗೆ ತೆರಳಲಿರುವ ಬಹುತೇಕ ಆಟಗಾರರು ಕೋವಿಡ್ ಮೊದಲ ಡೋಸ್ ತೆಗೆದುಕೊಂಡಿದ್ದಾರೆ. ಇನ್ನು ಎರಡನೇ ಡೋಸ್ ಅನ್ನು ಇಂಗ್ಲೆಂಡ್ ನಲ್ಲಿ ತೆಗೆದುಕೊಳ್ಳುವ ಸಾಧ್ಯತೆ ಇದೆ. 

ಭಾರತ ಸರ್ಕಾರವು 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬ ವ್ಯಕ್ತಿಯೂ ಲಸಿಕೆ ಹಾಕಿಸಿಕೊಳ್ಳಲು ಅನುವು ಮಾಡಿಕೊಟ್ಟಿದೆ. ಹೀಗಾಗೆ ನಮ್ಮ ಆಟಗಾರರು ಮೊದಲ ಡೋಸ್ ತೆಗೆದುಕೊಂಡಿದ್ದಾರೆ. ಇನ್ನು ಎರಡನೇ ಡೋಸ್ ತೆಗೆದುಕೊಳ್ಳುವ ಸಮಯದಲ್ಲಿ ಅವರೆಲ್ಲಾ ಇಂಗ್ಲೆಂಡ್ ನಲ್ಲಿ ಇರುತ್ತಾರೆ. ಹೀಗಾಗಿ ಅಲ್ಲಿ ಅವರಿಗೆ ಲಸಿಕೆ ಹಾಕಿಸಲು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಯೊಂದಿಗೆ ಮಾತುಕತೆ ನಡೆಸಿದ್ದೇವೆ. ಅದು ಸಾಧ್ಯವಾಗದಿದ್ದರೆ ಇಲ್ಲಿಂದಲೆ ಲಸಿಕೆಯನ್ನು ತೆಗೆದುಕೊಂಡು ಹೋಗಲಾಗುತ್ತದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಬಿಸಿಸಿಐ 20 ಸದಸ್ಯರ ತಂಡವನ್ನು ಆಯ್ಕೆ ಮಾಡಿದೆ(ಇಬ್ಬರು ಫಿಟ್‌ನೆಸ್ ಕ್ಲಿಯರೆನ್ಸ್‌ಗೆ ಒಳಪಟ್ಟಿರುತ್ತದೆ). ಇದರಲ್ಲಿ ನಾಲ್ಕು ಸ್ಟ್ಯಾಂಡ್‌ಬೈ ಆಟಗಾರರಿದ್ದಾರೆ. ನಾಲ್ಕು ಸ್ಟ್ಯಾಂಡ್‌ಬೈ ಆಟಗಾರರಲ್ಲಿ ಮೂವರು ವೇಗದ ಬೌಲರ್‌ಗಳು - ಪ್ರಸಾದ್ ಕೃಷ್ಣ, ಅವೇಶ್ ಖಾನ್, ಅರ್ಜನ್ ನಾಗ್ವಾಸ್ವಾಲಾ. ತಂಡವನ್ನು ಘೋಷಿಸಿದ ಮರುದಿನ ಪ್ರಸಿದ್ಧ್ ಕೃಷ್ಣ ಕೋವಿಡ್ ತುತ್ತಾಗಿರುವುದರಿಂದ ಇಂಗ್ಲೆಂಡ್ ಪ್ರವಾಸದಿಂದ ಹೊರಬರಲಿದ್ದಾರೆ. 

ಭಾರತದ ತಂಡ: ರೋಹಿತ್ ಶರ್ಮಾ, ಶುಭ್ಮನ್ ಗಿಲ್, ಮಾಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ(ನಾಯಕ), ಅಜಿಂಕ್ಯ ರಹಾನೆ(ಉಪನಾಯಕ), ಹನುಮಾ ವಿಹಾರಿ, ರಿಷಭ್ ಪಂತ್(ವಿಕೆಟ್ ಕೀಪರ್), ಆರ್.ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಜಸ್ಪ್ರಿತ್ ಬುಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದುಲ್ ಠಾಕೂರ್, ಉಮೇಶ್ ಯಾದವ್, ಕೆ.ಎಲ್. ರಾಹುಲ್, ವೃದ್ಧಿಮಾನ್ ಸಹಾ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com