T20 World Cup: ಅಫ್ಘಾನ್ ವಿರುದ್ಧ ಸಿಡಿದೆದ್ದ ಟೀಂ ಇಂಡಿಯಾ!

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರು ಸ್ಫೋಟಕ ಬ್ಯಾಟಿಂಗ್ ಮಾಡಿದ್ದಾರೆ. 
ರೋಹಿತ್ ಶರ್ಮಾ-ಕೆಎಲ್ ರಾಹುಲ್
ರೋಹಿತ್ ಶರ್ಮಾ-ಕೆಎಲ್ ರಾಹುಲ್
Updated on

ದುಬೈ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರು ಸ್ಫೋಟಕ ಬ್ಯಾಟಿಂಗ್ ಮಾಡಿದ್ದಾರೆ. 

ದುಬೈನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ ಓವರ್ ನಲ್ಲಿ 2 ವಿಕೆಟ್ ನಷ್ಟಕ್ಕೆ 210 ರನ್ ಪೇರಿಸಿದೆ. ಆರಂಭಿಕರಾಗಿ ಕಣಕ್ಕಿಳಿದಿದ್ದ ಕೆಎಲ್ ರಾಹುಲ್ (69) ಮತ್ತು ರೋಹಿತ್ ಶರ್ಮಾ (74) ರನ್ ಗಳ ಭರ್ಜರಿ ಆಟದೊಂದಿಗೆ ಟೀಂ ಇಂಡಿಯಾ ಬೃಹತ್ ಮೊತ್ತ ಕಲೆ ಹಾಕುವಲ್ಲಿ ಯಶಸ್ವಿಯಾಗಿದೆ. 

ಟೀಂ ಇಂಡಿಯಾ ಪರ ರಿಷಬ್ ಪಂತ್ ಅಜೇಯ 27 ರನ್ ಮತ್ತು ಹಾರ್ದಿಕ್ ಪಾಂಡ್ಯ ಅಜೇಯ 35 ರನ್ ಬಾರಿಸಿದ್ದಾರೆ. 

ಅಫ್ಘಾನಿಸ್ತಾನ ಪರ ಬೌಲಿಂಗ್ ನಲ್ಲಿ ನಬಿ ಮತ್ತು ಕರೀಂ ತಲಾ 1 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com