ಟಿ20 ವಿಶ್ವಕಪ್: ಭರ್ಜರಿ ಬ್ಯಾಟಿಂಗ್ ಮೂಲಕ ದಾಖಲೆ ಬರೆದ ರೋಹಿತ್- ರಾಹುಲ್ ಜೋಡಿ

ಟಿ20 ವಿಶ್ವಕಪ್ ಟೂರ್ನಿಯ ಗ್ರೂಪ್ 2 ಹಂತದ ಪಂದ್ಯದಲ್ಲಿ ಅಫ್ಘಾನಿಸ್ತಾನದ ವಿರುದ್ಧ ಭರ್ಜರಿ ಬ್ಯಾಟಿಂಗ್ ಮಾಡಿದ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಜೋಡಿ ವಿಶ್ವ ದಾಖಲೆ ನಿರ್ಮಿಸಿದೆ.
ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಜೋಡಿ
ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಜೋಡಿ

ಅಬುದಾಬಿ: ಟಿ20 ವಿಶ್ವಕಪ್ ಟೂರ್ನಿಯ ಗ್ರೂಪ್ 2 ಹಂತದ ಪಂದ್ಯದಲ್ಲಿ ಅಫ್ಘಾನಿಸ್ತಾನದ ವಿರುದ್ಧ ಭರ್ಜರಿ ಬ್ಯಾಟಿಂಗ್ ಮಾಡಿದ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಜೋಡಿ ವಿಶ್ವ ದಾಖಲೆ ನಿರ್ಮಿಸಿದೆ.

ಹೌದು.. ಇಂದು ಅಬುದಾಬಿ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಆಫ್ಗನ್ ಬೌಲರ್ ಗಳನ್ನು ಇನ್ನಿಲ್ಲದಂತೆ ಕಾಡಿದ ಭಾರತದ ಆರಂಭಿಕ ಜೋಡಿ ವಿಶ್ವ ದಾಖಲೆ ನಿರ್ಮಿಸಿದೆ. ಮೊದಲ ವಿಕೆಟ್ ಬರೊಬ್ಬರಿ 140ರನ್ ಪೇರಿಸಿದ ಈ ಜೋಡಿ ಆ ಮೂಲಕ ಭಾರತದ ಪರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ಜೊತೆಯಾಟವಾಡಿದ ಜೋಡಿ ಎಂಬ ಕೀರ್ತಿಗೆ ಭಾಜನವಾಗಿದೆ.

ಈ ಹಿಂದೆ 2007ರಲ್ಲಿ ಡರ್ಬನ್ ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತದ ವಿರೇಂದ್ರ ಸೆಹ್ವಾಗ್ ಮತ್ತು ಗೌತಮ್ ಗಂಭೀರ್ ಜೋಡಿ 136ರನ್ ಕಲೆ ಹಾಕಿತ್ತು. ಇದು ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಪರ ದಾಖಲಾದ ಗರಿಷ್ಠ ಜೊತೆಯಾಟ ಎಂಬ ಕೀರ್ತಿಗೆ ಭಾಜನವಾಗಿತ್ತು. ಆದರೆ ಇದೀಗ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಜೋಡಿ 140ರನ್ ಕಲೆ ಹಾಕಿ ಈ ದಾಖಲೆಯನ್ನು ಹಿಂದಿಕ್ಕಿದೆ. ಆ ಮೂಲಕ ಅಗ್ರ ಸ್ಥಾನಕ್ಕೇರಿದೆ.

3ನೇ ಸ್ಥಾನದಲ್ಲಿ 2014ರಲ್ಲಿ ಮೀರ್ ಪುರ್ ನಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಜೋಡಿ ಕಲೆಹಾಕಿದ್ದ 106ರನ್ ಜೊತೆಯಾಟವಿದ್ದು, ನಾಲ್ಕನೇ ಸ್ಥಾನದಲ್ಲಿ ಇದೇ ಜೋಡಿ ಇದೇ ಮೀರ್ ಪುರ್ ನಲ್ಲಿ ಬಾಂಗ್ಲಾದೇಶದ ವಿರುದ್ಧ ಕಲೆ ಹಾಕಿದ್ದ 100ರನ್ ಗಳ ಜೊತೆಯಾಟವಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com