Online Desk
ಅಬುದಾಬಿ: ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇಂದು ನಡೆದ ಆಫ್ಧಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್ ನಲ್ಲಿ ಅಬ್ಬರಿಸಿದ ಟೀಂ ಇಂಡಿಯಾ ಹಾಲಿ ಟೂರ್ನಿಯಲ್ಲಿ ಗರಿಷ್ಠ ರನ್ ಗಳ ದಾಖಲೆ ನಿರ್ಮಾಣ ಮಾಡಿದೆ.
ಇದನ್ನೂ ಓದಿ: ಟಿ20 ವಿಶ್ವಕಪ್: ಆಫ್ಘಾನಿಸ್ತಾನ ವಿರುದ್ಧ ಆರ್ಭಟ, ದಾಖಲೆ ಬರೆದ ಭಾರತ
ಹೌದು.. ಇಂದು ಅಬುದಾಬಿ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಆಫ್ಗನ್ ಬೌಲರ್ ಗಳನ್ನು ಇನ್ನಿಲ್ಲದಂತೆ ಕಾಡಿದ ಭಾರತದ ಬ್ಯಾಟ್ಸಮನ್ ಗಳು ನಿಗದಿತ 20 ಓವರ್ ಗಳಲ್ಲಿ ಕೇವಲ 2 ವಿಕೆಟ್ ನಷ್ಟಕ್ಕೆ ಬರೊಬ್ಬರಿ 210 ರನ್ ಗಳನ್ನು ಕಲೆ ಹಾಕಿದರು.
ಇದನ್ನೂ ಓದಿ: ಟಿ20 ವಿಶ್ವಕಪ್: ಭರ್ಜರಿ ಬ್ಯಾಟಿಂಗ್ ಮೂಲಕ ದಾಖಲೆ ಬರೆದ ರೋ'ಹಿಟ್'-ರಾಹುಲ್ ಜೋಡಿ

ಟೀಂ ಇಂಡಿಯಾ ದಾಖಲಿಸಿದ ಈ 210 ರನ್ ಗಳ ಸ್ಕೋರ್ ಹಾಲಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ದಾಖಲಾದ ತಂಡವೊಂದರ ಗರಿಷ್ಠ ರನ್ ಗಳಿಕೆಯಾಗಿದೆ. ಈ ಹಿಂದೆ ಶಾರ್ಜಾ ಕ್ರಿಕೆಟ್ ಮೈದಾನದಲ್ಲಿ ಸ್ಕಾಟ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಇದೇ ಆಫ್ಗಾನಿಸ್ತಾನ ತಂಡ ಸಿಡಿಸಿದ್ದ 190 ರನ್ ಗಳು ಈವರೆಗೂ ಗರಿಷ್ಠ ಸ್ಕೋರ್ ಆಗಿ ದಾಖಲಾಗಿತ್ತು.
ಇದನ್ನೂ ಓದಿ: ಟಿ20 ವಿಶ್ವಕಪ್: ಆಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 66 ರನ್ ಗಳ ಭರ್ಜರಿ ಜಯ
ಆದರೆ ಇಂದು ಅದೇ ಅಫ್ಘಾನಿಸ್ತಾನದ ವಿರುದ್ಧ ಭಾರತ ಭರ್ಜರಿಯಾಗಿ ಬ್ಯಾಟಿಂಗ್ ಮಾಡಿ ಅದನ್ನು 2ನೇ ಸ್ಥಾನಕ್ಕೆ ತಳ್ಳಿದೆ. ಅಬುದಾಬಿಯಲ್ಲಿ ನಡೆದ ಪಾಕಿಸ್ತಾನ ವರ್ಸಸ್ ನಮೀಬಿಯಾ ಪಂದ್ಯ ಮೂರನೇ ಸ್ಥಾನದಲ್ಲಿದ್ದು, ಆ ಪಂದ್ಯದಲ್ಲಿ ಪಾಕಿಸ್ತಾನ 189 ರನ್ ಗಳಿಸಿತ್ತು. ಅಲ್ ಅಮೆರಾಟ್ ನಲ್ಲಿ ನಡೆದ ಬಾಂಗ್ಲಾದೇಶ ಮತ್ತು ಪಪುವಾ ನ್ಯೂಗಿನಿಯಾ ನಡುವಿನ ಪಂದ್ಯ ನಾಲ್ಕನೇ ಸ್ಥಾನದಲ್ಲಿದ್ದು ಆ ಪಂದ್ಯದಲ್ಲಿ ಬಾಂಗ್ಲಾದೇಶ 181ರನ್ ಪೇರಿಸಿತ್ತು.
ಇದನ್ನೂ ಓದಿ: ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ 'ಕನ್ನಡಿಗ' ರಾಹುಲ್ ದ್ರಾವಿಡ್ ನೇಮಕ