ಟಿ20 ವಿಶ್ವಕಪ್: ಪವರ್ ಪ್ಲೇ ನಲ್ಲಿ ಗರಿಷ್ಠ ರನ್; ಟಿ20 ಕ್ರಿಕೆಟ್, ಟಿ20 ವಿಶ್ವಕಪ್ ನಲ್ಲಿ ಭಾರತ ದಾಖಲೆ

ಟಿ20 ವಿಶ್ವಕಪ್ ಟೂರ್ನಿಯ ಇಂದಿನ ಸ್ಕಾಟ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಅಬ್ಬರಿಸಿದ ಭಾರತ ತಂಡ ಟಿ20 ಕ್ರಿಕೆಟ್, ಟಿ20 ವಿಶ್ವಕಪ್ ನಲ್ಲಿ ಮಹತ್ವ ದಾಖಲೆಯೊಂದನ್ನು ಬರೆದಿದೆ.
ಭಾರತ ತಂಡ
ಭಾರತ ತಂಡ
Updated on

ದುಬೈ: ಟಿ20 ವಿಶ್ವಕಪ್ ಟೂರ್ನಿಯ ಇಂದಿನ ಸ್ಕಾಟ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಅಬ್ಬರಿಸಿದ ಭಾರತ ತಂಡ ಟಿ20 ಕ್ರಿಕೆಟ್, ಟಿ20 ವಿಶ್ವಕಪ್ ನಲ್ಲಿ ಮಹತ್ವ ದಾಖಲೆಯೊಂದನ್ನು ಬರೆದಿದೆ.

ಹೌದು.. ಇಂದು ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಸ್ಕಾಟ್ಲೆಂಡ್ ನೀಡಿದ 86 ರನ್ ಗಳ ಸಾಧಾರಣ ಗುರಿಯನ್ನು ಬೆನ್ನು ಹತ್ತಿದ ಟೀಂ ಇಂಡಿಯಾ ಕೇವಲ 6.3 ಓವರ್ ನಲ್ಲಿ 2 ವಿಕೆಟ್ ಕಳೆದುಕೊಂಡು 89 ರನ್ ಗಳಿಸಿ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು.

ನೆಟ್ ರನ್ ರೇಟ್ ನಲ್ಲಿ ಆಫ್ಘಾನಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳನ್ನು ಹಿಂದಿಕ್ಕಲು 7.1 ಓವರ್ ನಲ್ಲಿಯೇ ಪಂದ್ಯ ಗೆಲ್ಲಬೇಕಾದ ಅನಿವಾರ್ಯತೆಗೆ ಸಿಲುಕಿದ್ದ ಭಾರತ ತಂಡಕ್ಕೆ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಜೋಡಿ ಭರ್ಜರಿ ಆರಂಭ ಒದಗಿಸಿತು.

ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಜೋಡಿ ಅಕ್ಷರಶಃ ಸಿಡಿಲಿಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಕೇವಲ 5 ಓವರ್ ನಲ್ಲಿಯೇ ಈ ಜೋಡಿ 70ರನ್ ಗಳ ಭರ್ಜರಿ ಜೊತೆಯಾಟವಾಡಿ ಬಹುತೇಕ ಪಂದ್ಯವನ್ನು ಮುಕ್ತಾಯದ ಹಂತಕ್ಕೆ ತೆಗೆದುಕೊಂಡು ಹೋದರು. 

ಪವರ್ ಪ್ಲೇನಲ್ಲಿ ಗರಿಷ್ಠ ಸ್ಕೋರ್
ಆರಂಭದಿಂದಲೂ ಸ್ಕಾಟ್ಲೆಂಡ್ ಬೌಲರ್ ಗಳನ್ನು ಮನಸೋ ಇಚ್ಛೆ ದಂಡಿಸುತ್ತಿದ್ದ ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಜೋಡಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿ ಪವರ್ ಪ್ಲೇ ನಲ್ಲಿ 82 ರನ್ ಗಳನ್ನು ಕಲೆ ಹಾಕಿತು. 16 ಎಸೆತ ಎದುರಿಸಿದ ರೋಹಿತ್ ಶರ್ಮಾ ಒಂದು ಸಿಕ್ಸರ್ ಮತ್ತು 5 ಬೌಂಡರಿಗಳ ಸಹಿತ 30 ರನ್ ಗಳಿಸಿದರೆ, ಮತ್ತೊಂದು ತುದಿಯಲ್ಲಿ ಭರ್ಜರಿಯಾಗಿ ಆಡುತ್ತಿದ್ದ ಕೆಎಲ್ ರಾಹುಲ್ ಕೇವಲ 19 ಎಸೆತದಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿದರು. 

ಈ ಸ್ಫೋಟಕ ಇನ್ನಿಂಗ್ಸ್ ಮೂಲಕ ಭಾರತ ಟಿ20 ವಿಶ್ವಕಪ್ ನಲ್ಲಿ ದಾಖಲೆ ಬರೆದಿದ್ದು, ಇದು ಪವರ್ ಪವರ್ ಪ್ಲೇನಲ್ಲಿ ದಾಖಲಾದ 5ನೇ ಗರಿಷ್ಠ ರನ್ ಗಳಿಕೆಯಾಗಿದೆ. ಈ ಹಿಂದೆ 2014ರಲ್ಲಿ ಐರ್ಲೆಂಡ್ ವಿರುದ್ಧ ನೆದರ್ಲೆಂಡ್ 91ರನ್ ಗಳಿಸಿತ್ತು. ಇದು ಟಿ20 ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲಿ ದಾಖಲಾದ ಪವರ್ ಪ್ಲೇ ಗರಿಷ್ಠ ಸ್ಕೋರ್ ಆಗಿದೆ. 2ನೇ ಸ್ಥಾನದಲ್ಲಿ ಇಂಗ್ಲೆಂಡ್ ತಂಡವಿದ್ದು, 2016ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಇಂಗ್ಲೆಂಡ್ ಪವರ್ ಪ್ಲೇನಲ್ಲಿ 3 ವಿಕೆಟ್ ನಷ್ಟಕ್ಕೆ 89ರನ್ ಗಳಿಸಿತ್ತು. ಮೂರನೇ ಸ್ಥಾನದಲ್ಲಿ ವೆಸ್ಟ್ ಇಂಡೀಸ್ ಇದ್ದು, 2009ರಲ್ಲಿ  ದಿ ಓವಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ವಿಂಡೀಸ್ 83ರನ್ ಗಳಿಸಿತ್ತು. ದಕ್ಷಿಣ ಆಫ್ರಿಕಾ ತಂಡ ನಾಲ್ಕನೇ ಸ್ಥಾನದಲ್ಲಿದ್ದು, 2016ರಲ್ಲಿ ಮುಂಬೈನಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಪವರ್ ಪ್ಲೇ ನಲ್ಲಿ 83ರನ್ ಗಳಿಸಿತ್ತು.

ಟಿ20 ಕ್ರಿಕೆಟ್ ನಲ್ಲಿ ಪವರ್ ಪ್ಲೇನಲ್ಲಿ ಭಾರತದ ಗರಿಷ್ಠ ಸ್ಕೋರ್
ಇನ್ನು ಇಂದು ಭಾರತ ತಂಡ ಪವರ್ ಪ್ಲೇನಲ್ಲಿ ಗಳಿಸಿದ 82ರನ್ ಗಳು, ಟೀಂ ಇಂಡಿಯಾ ಟಿ20 ಕ್ರಿಕೆಟ್ ನಲ್ಲಿ ಇತಿಹಾಸದಲ್ಲಿ ಪವರ್ ಪ್ಲೇನಲ್ಲಿ ಗಳಿಸಿದ ಗರಿಷ್ಟ ಸ್ಕೋರ್ ಆಗಿದೆ. ಇದಕ್ಕೂ ಮೊದಲು 2018ರಲ್ಲಿ ಜೋಹನ್ಸ್ ಬರ್ಗ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ತಂಡ ಪವರ್ ಪ್ಲೇನಲ್ಲಿ 2 ವಿಕೆಟ್ ನಷ್ಟಕ್ಕೆ 78ರನ್ ಗಳಿಸಿತ್ತು. ಇದು ಭಾರತ ತಂಡ ಟಿ20 ಕ್ರಿಕೆಟ್ ನಲ್ಲಿ ಪವರ್ ಪ್ಲೇನಲ್ಲಿ ಗಳಿಸಿದ್ದ ಗರಿಷ್ಠ ಸ್ಕೋರ್ ಆಗಿತ್ತು. ಆದರೆ ಇಂದಿನ ಸ್ಕಾಟ್ಲೆಂಡ್ ವಿರುದ್ಧದ ಪಂದ್ಯ ಈ ದಾಖಲೆಯನ್ನು ಹಿಂದಿಕ್ಕಿದೆ.

2009ರಲ್ಲಿ ನಾಗ್ಪುರದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಪಂದ್ಯ ಮೂರನೇ ಸ್ಥಾನದಲ್ಲಿದ್ದು, ಇಲ್ಲಿ ಭಾರತ ಪವರ್ ಪ್ಲೇನಲ್ಲಿ 1 ವಿಕೆಟ್ ನಷ್ಟಕ್ಕೆ 77ರನ್ ಕಲೆಹಾಕಿತ್ತು. 
 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com