ಟಿ20 ವಿಶ್ವಕಪ್: 18 ಎಸೆತಗಳಲ್ಲೇ 50 ರನ್, ದಾಖಲೆ ನಿರ್ಮಿಸಿದ ಕೆಎಲ್ ರಾಹುಲ್!
ಟಿ20 ವಿಶ್ವಕಪ್ ಟೂರ್ನಿಯ ಇಂದಿನ ಸ್ಕಾಟ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಅಬ್ಬರಿಸಿದ ಭಾರತ ತಂಡದ ಆರಂಭಿಕ ಆಟಗಾರ ಕೆಎಲ್ ರಾಹುಲ್ ದಾಖಲೆ ನಿರ್ಮಿಸಿದ್ದಾರೆ.
Published: 05th November 2021 11:26 PM | Last Updated: 05th November 2021 11:26 PM | A+A A-

ಕೆಎಲ್ ರಾಹುಲ್
ದುಬೈ: ಟಿ20 ವಿಶ್ವಕಪ್ ಟೂರ್ನಿಯ ಇಂದಿನ ಸ್ಕಾಟ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಅಬ್ಬರಿಸಿದ ಭಾರತ ತಂಡದ ಆರಂಭಿಕ ಆಟಗಾರ ಕೆಎಲ್ ರಾಹುಲ್ ದಾಖಲೆ ನಿರ್ಮಿಸಿದ್ದಾರೆ.
ಇದನ್ನೂ ಓದಿ: ಟಿ20 ವಿಶ್ವಕಪ್: ಪವರ್ ಪ್ಲೇ ನಲ್ಲಿ ಗರಿಷ್ಠ ರನ್, ಟಿ20 ಕ್ರಿಕೆಟ್, ಟಿ20 ವಿಶ್ವಕಪ್ ನಲ್ಲಿ ದಾಖಲೆ ಬರೆದ ಭಾರತ
ಹೌದು.. ಇಂದು ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಸ್ಕಾಟ್ಲೆಂಡ್ ನೀಡಿದ 86 ರನ್ ಗಳ ಸಾಧಾರಣ ಗುರಿಯನ್ನು ಬೆನ್ನು ಹತ್ತಿದ ಟೀಂ ಇಂಡಿಯಾ ಕೇವಲ 6.3 ಓವರ್ ನಲ್ಲಿ 2 ವಿಕೆಟ್ ಕಳೆದುಕೊಂಡು 89 ರನ್ ಗಳಿಸಿ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು. ಭಾರತ ತಂಡದ ಈ ಭರ್ಜರಿ ಗೆಲುವಿನಲ್ಲಿ ಆರಂಭಿಕ ಆಟಗಾರ ಕೆಎಲ್ ರಾಹುಲ್ ಅವರ ಪಾತ್ರ ಮಹತ್ವದ್ದಾಗಿದ್ದು, ರಾಹುಲ್ ಕೇವಲ 18 ಎಸೆತಗಳಲ್ಲೇ 50 ರನ್ ಸಿಡಿಸಿ ದಾಖಲೆಗೆ ಪಾತ್ರರಾಗಿದ್ದಾರೆ.
ಇದನ್ನೂ ಓದಿ: ಟಿ20 ಕ್ರಿಕೆಟ್ ಇತಿಹಾಸದಲ್ಲೇ ಭಾರತಕ್ಕೆ ಅತೀ ದೊಡ್ಡ ಗೆಲುವು!
ಟಿ20 ಕ್ರಿಕೆಟ್, ಟಿ20 ವಿಶ್ವಕಪ್ ಟೂರ್ನಿಯಲ್ಲಿ ಕೆಎಲ್ ರಾಹುಲ್ ವೇಗದ ಅರ್ಧಶತಕ
ಇನ್ನು ಈ ಅದ್ಬುತ ಇನ್ನಿಂಗ್ಸ್ ಮೂಲಕ ಕೆಎಲ್ ರಾಹುಲ್ ವೈಯುಕ್ತಿಕ ಮತ್ತು ಭಾರತದ ಪರ ದಾಖಲೆ ನಿರ್ಮಾಣ ಮಾಡಿದ್ದು ಇದು ಅವರ ಟಿ20 ಕ್ರಿಕೆಟ್ ಮತ್ತು ಟಿ20 ವಿಶ್ವಕಪ್ ಕ್ರಿಕೆಟ್ ವೃತ್ತಿಪರ ವೇಗದ ಅರ್ಧಶತಕವಾಗಿದೆ. ಅಂತೆಯೇ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಪರ ದಾಖಲಾದ 4ನೇ ವೇಗದ ಅರ್ಧಶತಕ ಎಂಬ ಕೀರ್ತಿಗೆ ದಾಖಲಾಗಿದೆ.
ಈ ಹಿಂದೆ 2007ರಲ್ಲಿ ಡರ್ಬನ್ ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತದ ಯುವರಾಜ್ ಸಿಂಗ್ ಕೇವಲ 12 ಎಸೆತಗಳಲ್ಲೇ ಅರ್ಧಶತಕ ಸಿಡಿಸಿದ್ದರು. ಇದು ಭಾರತದ ಪರ ಮತ್ತು ಟಿ20 ವಿಶ್ವಕಪ್ ಟೂರ್ನಿಯಲ್ಲಿ ದಾಖಲಾದ ವೇಗದ ಅರ್ಧಶತಕವಾಗಿದೆ. 2014ರಲ್ಲಿ ಐರ್ಲೆಂಡ್ ವಿರುದ್ಧ ದಕ್ಷಿಣ ಆಫ್ರಿಕಾದ ಸ್ಚೀಫೆನ್ ಮೈಬರ್ಗ್ ಕೇವಲ 17 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು. ಇದು ಟಿ20 ವಿಶ್ವಕಪ್ ಟೂರ್ನಿಯಲ್ಲಿ ದಾಖಲಾದ 2ನೇ ವೇಗದ ಅರ್ಧಶತಕವಾಗಿದೆ.
ಇದನ್ನೂ ಓದಿ: ಟಿ20 ವಿಶ್ವಕಪ್: ಸ್ಕಾಟ್ಲೆಂಡ್ ವಿರುದ್ಧ ಭರ್ಜರಿ ಜಯ, 'ಈ ಸಾಧನೆ ಮಾಡಿದ ವಿಶ್ವದ 3ನೇ ತಂಡ' ಭಾರತ, ಯಾವುದು ಆ ದಾಖಲೆ?
ಮೀರ್ ಪುರ್ ನಲ್ಲಿ 2014ರಲ್ಲಿ ಪಾಕಿಸ್ತಾನದ ವಿರುದ್ಧ ಆಸ್ಚ್ರೇಲಿಯಾದ ಗ್ಲೇನ್ ಮ್ಯಾಕ್ಸ್ ವೆಲ್ ಗಳಿಸಿದ್ದ 18 ಎಸೆತಗಳಲ್ಲಿ ಅರ್ಧಶತಕ 3ನೇ ಸ್ಥಾನದಲ್ಲಿದೆ. ಇಂದು ದುಬೈನಲ್ಲಿ ಸ್ಕಾಟ್ಲೆಂಡ್ ವಿರುದ್ಧ ಕೆಎಲ್ ರಾಹುಲ್ ಗಳಿಸಿದ 18 ಎಸೆತಗಳಲ್ಲಿ ಅರ್ಧಶತಕ ನಾಲ್ಕನೇ ಸ್ಥಾನದಲ್ಲಿದೆ.
ಇದನ್ನೂ ಓದಿ: ಟಿ20 ವಿಶ್ವಕಪ್: ಸ್ಕಾಟ್ವೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ, ಆಫ್ಘನ್, ನ್ಯೂಜಿಲೆಂಡ್ ಹಿಂದಿಕ್ಕಿದ ಟೀಂ ಇಂಡಿಯಾ