ಟಿ20 ವಿಶ್ವಕಪ್ ಬಳಿಕ ಎಲ್ಲಾ ಆವೃತ್ತಿಯ ಕ್ರಿಕೆಟ್ ನಿಂದ ವೆಸ್ಟ್ ಇಂಡೀಸ್ ಆಲ್ ರೌಂಡರ್ ಡ್ವೇನ್ ಬ್ರಾವೋ ನಿವೃತ್ತಿ

ವೆಸ್ಟ್ ಇಂಡೀಸ್ ನ ಆಲ್ ರೌಂಡರ್ ಡ್ವೇನ್ ಬ್ರಾವೋ ಟಿ20 ವಿಶ್ವಕಪ್ ಬಳಿಕ ಎಲ್ಲಾ ಆವೃತ್ತಿಯ ಕ್ರಿಕೆಟ್ ನಿಂದಲೂ ನಿವೃತ್ತಿ ಘೋಷಣೆ ಮಾಡಲಿದ್ದಾರೆ. 
ಡ್ವೇಯ್ನ್ ಬ್ರಾವೋ
ಡ್ವೇಯ್ನ್ ಬ್ರಾವೋ

ಅಬುಧಾಬಿ: ವೆಸ್ಟ್ ಇಂಡೀಸ್ ನ ಆಲ್ ರೌಂಡರ್ ಡ್ವೇನ್ ಬ್ರಾವೋ ಟಿ20 ವಿಶ್ವಕಪ್ ಬಳಿಕ ಎಲ್ಲಾ ಆವೃತ್ತಿಯ ಕ್ರಿಕೆಟ್ ನಿಂದಲೂ ನಿವೃತ್ತಿ ಘೋಷಣೆ ಮಾಡಲಿದ್ದಾರೆ. 

ಶ್ರೀಲಂಕಾ ವಿರುದ್ಧದ ಪಂದ್ಯ ಸೋಲುಕಂಡ ಬಳಿಕ ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿರುವ ಬ್ರಾವೋ, ಟಿ20 ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್ ನ ಎಲ್ಲಾ ಆವೃತ್ತಿಗಳಿಗೂ ನಿವೃತ್ತಿ ಘೋಷಿಸುವುದಾಗಿ ಹೇಳಿದ್ದಾರೆ.

ಸಮಯ ಬಂದಿದೆ ಎಂದು ನನಗೆ ಅನ್ನಿಸುತ್ತಿದೆ. "ನಾನು ಅತ್ಯುತ್ತಮ ವೃತ್ತಿ ಜೀವನವನ್ನು ಕಂಡಿದ್ದೇನೆ. 18 ವರ್ಷಗಳ ಕಾಲ ವೆಸ್ಟ್ ಇಂಡೀಸ್ ನ್ನು ಪ್ರತಿನಿಧಿಸಿದ್ದಕ್ಕಾಗಿ ಅತ್ಯಂತ ಕೃತಜ್ಞನಾಗಿರುವೆ ಎಂದು ಬ್ರಾವೋ ಹೇಳಿದ್ದಾರೆ.

"ಐಸಿಸಿಯ ಮೂರು ಟ್ರೋಫಿಗಳನ್ನು ಗೆಲ್ಲುವ ಮೂಲಕ ಜಾಗತಿಕ ಮಟ್ಟದಲ್ಲಿ ನಮ್ಮ ಕಾಲಘಟ್ಟದಲ್ಲಿ ಖ್ಯಾತಿ ಗಳಿಸಿರುವುದಕ್ಕೆ ಸಂತಸವಿದೆ" ಎಂದು ಬ್ರಾವೋ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com