ಭಾರತ- ನ್ಯೂಜಿಲೆಂಡ್ ಟಿ-20: ಜೈಪುರ ಪಂದ್ಯಕ್ಕೆ ಪ್ರೇಕ್ಷಕರ ಹಾಜರಾತಿಗೆ ಯಾವುದೇ ನಿರ್ಬಂಧವಿಲ್ಲ

ನವೆಂಬರ್ 17 ರಂದು ಜೈಪುರದಲ್ಲಿ ಆರಂಭವಾಗಲಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಣ ಮೊದಲ ಟಿ-20 ಅಂತಾರಾಷ್ಟ್ರೀಯ ಪಂದ್ಯಕ್ಕೆ ಪ್ರೇಕ್ಷಕರ ಹಾಜರಾತಿಗೆ ಯಾವುದೇ ನಿರ್ಬಂಧವಿಲ್ಲದಿರುವುದರಿಂದ  ಸಾಕಷ್ಟು ಪ್ರೇಕ್ಷಕರ ಸಮ್ಮುಖದಲ್ಲಿ ನಡೆಯಲಿದೆ. 
ಭಾರತ- ನ್ಯೂಜಿಲೆಂಡ್ ಆಟಗಾರರ ಸಾಂದರ್ಭಿಕ ಚಿತ್ರ
ಭಾರತ- ನ್ಯೂಜಿಲೆಂಡ್ ಆಟಗಾರರ ಸಾಂದರ್ಭಿಕ ಚಿತ್ರ

ನವದೆಹಲಿ: ನವೆಂಬರ್ 17 ರಂದು ಜೈಪುರದಲ್ಲಿ ಆರಂಭವಾಗಲಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಣ ಮೊದಲ ಟಿ-20 ಅಂತಾರಾಷ್ಟ್ರೀಯ ಪಂದ್ಯಕ್ಕೆ ಪ್ರೇಕ್ಷಕರ ಹಾಜರಾತಿಗೆ ಯಾವುದೇ ನಿರ್ಬಂಧವಿಲ್ಲದಿರುವುದರಿಂದ  ಸಾಕಷ್ಟು ಪ್ರೇಕ್ಷಕರ ಸಮ್ಮುಖದಲ್ಲಿ ನಡೆಯಲಿದೆ. 

ಕೋವಿಡ್ ಲಸಿಕೆ ಪಡೆಯದವರು ಪಂದ್ಯ ಆರಂಭಕ್ಕೂ 48 ಗಂಟೆ ಮುಂಚಿನ ಕೋವಿಡ್ ನೆಗೆಟಿವ್ ಪರೀಕ್ಷಾ ವರದಿಯನ್ನು ಹೊಂದಿರಬೇಕಾಗುತ್ತದೆ.  25 ಸಾವಿರ ಪ್ರೇಕ್ಷಕರು ಕುಳಿತುಕೊಳ್ಳುವ ಸಾಮರ್ಥ್ಯವಿರುವ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ಎಂಟು ವರ್ಷಗಳ ನಂತರ ಅಂತಾರಾಷ್ಟ್ರೀಯ ಪಂದ್ಯವನ್ನು ಆಯೋಜಿಸಲಾಗಿದೆ. 

ಪ್ರಸ್ತುತ ರಾಜ್ಯ ಸರ್ಕಾರದಲ್ಲಿನ ಮಾರ್ಗಸೂಚಿ ಪ್ರಕಾರ, ಸಂಪೂರ್ಣ ಪ್ರೇಕ್ಷಕರ ಹಾಜರಾತಿಯನ್ನು ನಾವು ಹೊಂದಬಹುದಾಗಿದೆ. ಕನಿಷ್ಠ ಒಂದು ಡೋಸ್ ಲಸಿಕೆಯನ್ನು ಹಾಕಿಸಿಕೊಂಡಿರಬೇಕಾಗುತ್ತದೆ ಇಲ್ಲವೇ ನೆಗೆಟಿವ್ ಪರೀಕ್ಷಾ ವರದಿ ಹೊಂದಿರಬೇಕಾಗುತ್ತದೆ. ಇದನ್ನು ಪ್ರವೇಶ ದ್ವಾರದಲ್ಲಿ ಪರಿಶೀಲಿಸಲಾಗುತ್ತದೆ ಎಂದು ರಾಜಸ್ಥಾನ್ ಕ್ರಿಕೆಟ್ ಅಸೋಸಿಯೇಷನ್ ಕಾರ್ಯದರ್ಶಿ ಮಹೇಂದ್ರ ಶರ್ಮಾ ಗುರುವಾರ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಮಾಸ್ಕ್ ಇಲ್ಲದೆ ಸ್ಟೇಡಿಯಂ ಒಳಗೆ ಪ್ರವೇಶಿಸುವಂತಿಲ್ಲ, ಕೋವಿಡ್-19 ಅವಧಿಯಲ್ಲಿ ಯಾವುದೇ ನಿರ್ಬಂಧ ವಿಲ್ಲದೆ ನಡೆಯುತ್ತಿರುವ ಮೊದಲ ಅಂತಾರಾಷ್ಟ್ರೀಯ ಪಂದ್ಯ ಇದಾಗಿದೆ. ಗುರುವಾರ ರಾತ್ರಿಯಿಂದ ಆರಂಭಿಕ ಪಂದ್ಯದ ಟಿಕೆಟ್ ಮಾರಾಟ ಮಾಡಲಾಗುತ್ತಿದ್ದು, paytm.com ನಲ್ಲಿಯೂ ಲಭ್ಯವಿರಲಿದೆ. 1 ಸಾವಿರದಿಂದ 15 ಸಾವಿರ ರೂ. ವರೆಗೂ ಟಿಕೆಟ್ ಬೆಲೆ ನಿಗದಿಪಡಿಸಲಾಗಿದೆ ಎಂದು ಶರ್ಮಾ ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com