8 ವಿಕೆಟ್ ಗಳಿಂದ ಕಿವೀಸ್ ಮಣಿಸಿ, ಚೊಚ್ಚಲ ಬಾರಿಗೆ ಟಿ-20 ವಿಶ್ವಕಪ್ ಟ್ರೋಫಿ ಮುಡಿಗೇರಿಸಿಕೊಂಡ ಆಸ್ಟ್ರೇಲಿಯಾ

ತೀವ್ರ ಕುತೂಹಲ ಕೆರಳಿಸಿದ್ದ ಟಿ-20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 8 ವಿಕೆಟ್ ಗಳಿಂದ ಮಣಿಸಿದ ಆಸ್ಟ್ರೇಲಿಯಾ, ಚೊಚ್ಚಲ ಬಾರಿಗೆ ಟ್ರೋಪಿಯನ್ನು ಮುಡಿಗೇರಿಸಿಕೊಂಡಿತು.
ಟಿ-20 ವಿಶ್ವಕಪ್ ವಿಜೇತ ಆಸ್ಟ್ರೇಲಿಯಾ ತಂಡ
ಟಿ-20 ವಿಶ್ವಕಪ್ ವಿಜೇತ ಆಸ್ಟ್ರೇಲಿಯಾ ತಂಡ

ದುಬೈ: ತೀವ್ರ ಕುತೂಹಲ ಕೆರಳಿಸಿದ್ದ ಟಿ-20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 8 ವಿಕೆಟ್ ಗಳಿಂದ ಮಣಿಸಿದ ಆಸ್ಟ್ರೇಲಿಯಾ, ಚೊಚ್ಚಲ ಬಾರಿಗೆ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು.

ಇಲ್ಲಿನ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ  ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ ನಾಯಕ ಕೇನ್ ವಿಲಿಯಮ್ಸ್ ನ್ ಅವರ ಅರ್ಧಶತಕದ ನೆರವಿನಿಂದ ನಾಲ್ಕು ವಿಕೆಟ್ ನಷ್ಟಕ್ಕೆ ಸವಾಲಿನ  172 ರನ್ ಗಳಿಸಿತು. 

ನ್ಯೂಜಿಲೆಂಡ್ ನೀಡಿದ ಸವಾಲಿನ 173  ರನ್ ಗಳ ಗುರಿಯನ್ನು ಬೆನ್ನಟ್ಟಿದ್ದ ಆಸ್ಟ್ರೇಲಿಯಾ ತಂಡ ಡೇವಿಡ್ ವಾರ್ನರ್ ಅವರ 53 ಮತ್ತು ಮಿಚೆಲ್ ಮಾರ್ಷ್ ಅವರ ಆಕರ್ಷಕ 77 ರನ್ ಗಳ ನೆರವಿನಿಂದ ಇನ್ನೂ ಏಳು ಎಸೆತ ಬಾಕಿ ಇರುವಾಗಲೇ 8 ವಿಕೆಟ್ ಗಳಿಂದ 173 ರನ್ ಗಳಿಸುವ ಮೂಲಕ ಗೆಲುವಿನ ನಗೆ ಬೀರಿತು.

ಈ ಮೂಲಕ ಚೊಚ್ಚಲ ಬಾರಿಗೆ ಟಿ-20 ವಿಶ್ವಕಪ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು.ನ್ಯೂಜಿಲೆಂಡ್ ವಿಶ್ವಕಪ್ ಕನಸು ಮತ್ತೊಮ್ಮೆ ಭಗ್ನಗೊಂಡಿತು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com