T20I Ranking: ಟಿ20 ವಿಶ್ವಕಪ್ ನಲ್ಲಿ ಕಳಪೆ ಪ್ರದರ್ಶನ; ರಾಹುಲ್ 6ನೇ ಸ್ಥಾನಕ್ಕೆ ಕುಸಿತ, 8ನೇ ಸ್ಥಾನದಲ್ಲಿ ಕೊಹ್ಲಿ!
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾದ ಕೆಎಲ್ ರಾಹುಲ್ ಆರನೇ ಸ್ಥಾನಕ್ಕೆ ಕುಸಿದಿದ್ದಾರೆ. ಆದರೆ ವಿರಾಟ್ ಕೊಹ್ಲಿ ಅವರು ಬುಧವಾರ ಬಿಡುಗಡೆ ಮಾಡಿದ ಐಸಿಸಿ ಪುರುಷರ ಟಿ20 ಅಂತಾರಾಷ್ಟ್ರೀಯ ರ್ಯಾಂಕಿಂಗ್‌ನಲ್ಲಿ ಎಂಟನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.
Published: 17th November 2021 06:08 PM | Last Updated: 17th November 2021 06:12 PM | A+A A-

ಕೆಎಲ್ ರಾಹುಲ್-ಕೊಹ್ಲಿ
ದುಬೈ: ಟಿ20 ವಿಶ್ವಕಪ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾದ ಕೆಎಲ್ ರಾಹುಲ್ ಆರನೇ ಸ್ಥಾನಕ್ಕೆ ಕುಸಿದಿದ್ದಾರೆ. ಆದರೆ ವಿರಾಟ್ ಕೊಹ್ಲಿ ಅವರು ಬುಧವಾರ ಬಿಡುಗಡೆ ಮಾಡಿದ ಐಸಿಸಿ ಪುರುಷರ ಟಿ20 ಅಂತಾರಾಷ್ಟ್ರೀಯ ರ್ಯಾಂಕಿಂಗ್‌ನಲ್ಲಿ ಎಂಟನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.
ಇತ್ತೀಚೆಗೆ ಮುಕ್ತಾಯಗೊಂಡ ಟಿ20 ವಿಶ್ವಕಪ್‌ನಲ್ಲಿ ಭಾರತದ ಕೊನೆಯ ಮೂರು ಪಂದ್ಯಗಳಲ್ಲಿ ಸತತ ಮೂರು ಅರ್ಧಶತಕಗಳನ್ನು ಗಳಿಸಿರುವ ಕೆಎಲ್ ರಾಹುಲ್ 727 ಅಂಕಗಳನ್ನು ಗಳಿಸಿದ್ದಾರೆ.
ಟೀಂ ಇಂಡಿಯಾದ ನೂತನ ಟಿ20 ಉಪನಾಯಕನಾಗಿ ನೇಮಕಗೊಂಡಿರುವ 29ರ ಹರೆಯದ ರಾಹುಲ್ ಅಫ್ಘಾನಿಸ್ತಾನ, ಸ್ಕಾಟ್ಲೆಂಡ್ ಮತ್ತು ನಮೀಬಿಯಾ ವಿರುದ್ಧ ಔಟಾಗದೆ 69, 50 ಮತ್ತು 54 ರನ್ ಗಳಿಸಿದರು. ಆದರೆ ಭಾರತ ಸೂಪರ್ 12 ಹಂತದಲ್ಲಿ ಪಂದ್ಯಾವಳಿಯಿಂದ ನಿರ್ಗಮಿಸಿತು.
ಮತ್ತೊಂದೆಡೆ, ಭಾರತದ ಟಿ20 ನಾಯಕತ್ವದಿಂದ ಕೆಳಗಿಳಿದಿರುವ ಕೊಹ್ಲಿ 698 ಅಂಕಗಳೊಂದಿಗೆ ಎಂಟನೇ ಸ್ಥಾನದಲ್ಲಿದ್ದಾರೆ.
ಟಿ20 ಶ್ರೇಯಾಂಕದಲ್ಲಿ ಅಗ್ರ 10ರಲ್ಲಿ ಸ್ಥಾನ ಪಡೆದಿರುವ ಭಾರತೀಯ ಆಟಗಾರರೆಂದರೆ ಅದು ಕೆಎಲ್ ರಾಹುಲ್ ಮತ್ತು ಕೊಹ್ಲಿ ಮಾತ್ರ.
ಇನ್ನು ಆಸ್ಟ್ರೇಲಿಯನ್ನರಾದ ಮಿಚೆಲ್ ಮಾರ್ಷ್ ಮತ್ತು ಡೇವಿಡ್ ವಾರ್ನರ್ ಮೊದಲ ಪುರುಷರ ಟಿ20 ವಿಶ್ವಕಪ್ ಗೆಲ್ಲಲು ಸಹಾಯ ಮಾಡಿದ ನಂತರ ಗಮನಾರ್ಹ ಪ್ರಗತಿಯನ್ನು ಸಾಧಿಸಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಫೈನಲ್‌ನಲ್ಲಿ ಮಾರ್ಷ್ 50 ಎಸೆತಗಳಲ್ಲಿ ಔಟಾಗದೆ 77 ರನ್ ಗಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.