3ನೇ ಟಿ20: ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್; 184 ರನ್ ಪೇರಿಸಿದ ಭಾರತ
ಪ್ರವಾಸಿ ನ್ಯೂಜಿಲ್ಯಾಂಡ್ ತಂಡದ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ಬ್ಯಾಟರ್ ಗಳು ಅದ್ಭುತ ಪ್ರದರ್ಶನ ನೀಡಿದ್ದು ನಿಗದಿತ ಓವರ್ ನಲ್ಲಿ ಭಾರತ 7 ವಿಕೆಟ್ ನಷ್ಟಕ್ಕೆ 184 ರನ್ ಪೇರಿಸಿದೆ.
Published: 21st November 2021 09:12 PM | Last Updated: 21st November 2021 09:12 PM | A+A A-

ಟೀಂ ಇಂಡಿಯಾ
ಕೋಲ್ಕತ್ತಾ: ಪ್ರವಾಸಿ ನ್ಯೂಜಿಲ್ಯಾಂಡ್ ತಂಡದ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ಬ್ಯಾಟರ್ ಗಳು ಅದ್ಭುತ ಪ್ರದರ್ಶನ ನೀಡಿದ್ದು ನಿಗದಿತ ಓವರ್ ನಲ್ಲಿ ಭಾರತ 7 ವಿಕೆಟ್ ನಷ್ಟಕ್ಕೆ 184 ರನ್ ಪೇರಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಪರ ರೋಹಿತ್ ಶರ್ಮಾ ಆರಂಭಿಕವಾಗಿ ಅಬ್ಬರಿಸಿದರು. 31 ಎಸೆತಗಳಲ್ಲಿ 56 ರನ್ ಬಾರಿಸಿದ್ದು ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು. ಇನ್ನು ಇಶಾನ್ ಕಿಶಾನ್ 29, ಶ್ರೇಯಸ್ ಅಯ್ಯರ್ 25, ವೆಂಕಟೇಶ್ ಅಯ್ಯರ್ 20, ದೀಪಕ್ ಚಹಾರ್ ಅಜೇಯ 21 ರನ್ ಬಾರಿಸಿದ್ದಾರೆ.
ನ್ಯೂಜಿಲ್ಯಾಂಡ್ ಪರ ಬೌಲಿಂಗ್ ನಲ್ಲಿ ಮಿಚೆಲ್ ಸ್ಯಾಂಟ್ನರ್ 3, ಟ್ರೆಂಟ್ ಬೌಲ್ಟ್, ಮಿಲ್ನೆ, ಫರ್ಗ್ಯುಸನ್ ಮತ್ತು ಸೋದಿ ತಲಾ 1 ವಿಕೆಟ್ ಪಡೆದಿದ್ದಾರೆ.