ಕಾನ್ಪುರ್ ಟೆಸ್ಟ್: 2ನೇ ಇನ್ನಿಂಗ್ಸ್ 234 ರನ್ ಗೆ ಭಾರತ ಡಿಕ್ಲೇರ್: ಕಿವೀಸ್ ಗೆ ಗೆಲ್ಲಲು 284 ರನ್ ಗುರಿ
ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟೆಸ್ಟ್ ನ ಎರಡನೇ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 7 ವಿಕೆಟ್ ನಷ್ಟಕ್ಕೆ 234 ರನ್ ಪೇರಿಸಿ ಡಿಕ್ಲೇರ್ ಮಾಡಿಕೊಂಡಿದೆ.
Published: 28th November 2021 04:33 PM | Last Updated: 29th November 2021 01:34 PM | A+A A-

ಟೀಂ ಇಂಡಿಯಾ
ಕಾನ್ಪುರ: ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟೆಸ್ಟ್ ನ ಎರಡನೇ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 7 ವಿಕೆಟ್ ನಷ್ಟಕ್ಕೆ 234 ರನ್ ಪೇರಿಸಿ ಡಿಕ್ಲೇರ್ ಮಾಡಿಕೊಂಡಿದೆ.
ಶ್ರೇಯಸ್ ಅಯ್ಯರ್(65) ಮತ್ತು ವೃದ್ಧಿಮಾನ್ ಸಾಹಾ ಅಜೇಯ 61 ರನ್ ಗಳ ನೆರವಿನಿಂದ ಟೀಂ ಇಂಡಿಯಾ 234 ರನ್ ಪೇರಿಸಿದೆ. ಇನ್ನು ಎರಡನೇ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿರುವ ಟೀಂ ಇಂಡಿಯಾ ನ್ಯೂಜಿಲ್ಯಾಂಡ್ ಗೆ ಗೆಲ್ಲಲು 284 ರನ್ ಗಳ ಗುರಿ ನೀಡಿದೆ.
ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 345 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ್ದ ನ್ಯೂಜಿಲ್ಯಾಂಡ್ 296 ರನ್ ಗಳಿಗೆ ಆಲೌಟ್ ಆಗಿತ್ತು. 49 ರನ್ ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದ ಟೀಂ ಇಂಡಿಯಾ 7 ವಿಕೆಟ್ ನಷ್ಟಕ್ಕೆ 234 ರನ್ ಪೇರಿಸಿದೆ.
ನಾಲ್ಕನೇ ದಿನದಾಟದ ಅಂತ್ಯದಲ್ಲಿ ಭಾರತ ಡಿಕ್ಲೇರ್ ಮಾಡಿಕೊಂಡಿದೆ. ಇನ್ನು ನ್ಯೂಜಿಲ್ಯಾಂಡ್ ಪರ ಟಾಮ್ ಲ್ಯಾಥಮ್ ಮತ್ತು ವಿಲ್ ಯಂಗ್ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದಾರೆ.